ಸಾರಾಂಶ
ಬೆಳಗಾವಿ: ಹಿಡಕಲ್ ಡ್ಯಾಮ್ ಹಿನ್ನೀರಿಗೆ ಜಮೀನು ಕಳೆದುಕೊಂಡ ರೈತರಿಗೆ ನೀರಾವರಿ ಇಲಾಖೆಯಿಂದ ಪರಿಹಾರ ಕೊಡುವಂತೆ ಆಗ್ರಹಿಸಿ ಇಲ್ಲಿನ ನೂರಾರು ರೈತರು ಸೋಮವಾರ ಚನ್ನಮ್ಮ ವೃತ್ತದಲ್ಲಿ ಎತ್ತಿನ ಗಾಡಿಯೊಂದಿಗೆ ಬೃಹತ್ ಪ್ರತಿಭಟನೆ ನಡೆಸಿ ನೀರಾವರಿ ಇಲಾಖೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ.
ಕನ್ನಡಪ್ರಭ ವಾರ್ತೆ ಬೆಳಗಾವಿ
ಹಿಡಕಲ್ ಡ್ಯಾಮ್ ಹಿನ್ನೀರಿಗೆ ಜಮೀನು ಕಳೆದುಕೊಂಡ ರೈತರಿಗೆ ನೀರಾವರಿ ಇಲಾಖೆಯಿಂದ ಪರಿಹಾರ ಕೊಡುವಂತೆ ಆಗ್ರಹಿಸಿ ಇಲ್ಲಿನ ನೂರಾರು ರೈತರು ಸೋಮವಾರ ಚನ್ನಮ್ಮ ವೃತ್ತದಲ್ಲಿ ಎತ್ತಿನ ಗಾಡಿಯೊಂದಿಗೆ ಬೃಹತ್ ಪ್ರತಿಭಟನೆ ನಡೆಸಿ ನೀರಾವರಿ ಇಲಾಖೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ.ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಮಾಸ್ತಿಹೊಳಿ, ಗುಡನಟ್ಟಿ ಬೀರಹೊಳ್ಳಿ ಗ್ರಾಮದ ರೈತರು ಹಲವಾರು ಬಾರಿ ಹೋರಾಟ ಮಾಡಿದರೂ ನೀರಾವರಿ ಇಲಾಖೆ ಪರಿಹಾರ ಕೊಟ್ಟಿಲ್ಲ ಎಂದು ಹಿಡಕಲ್ ಡ್ಯಾಮ್, ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳು ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದರು.
396 ಎಕರೆ ಜಮೀನಿಗೆ ಪರಿಹಾರ ನೀಡುವಂತೆ ಕಚೇರಿಯಿಂದ ಕಚೇರಿಗೆ ಅಲೆದಾಡಿ ಬೇಸತ್ತಿದ್ದಾರೆ. ಅಲ್ಲದೇ ಎರಡು ವರ್ಷಗಳ ಹಿಂದೆಯೇ ಪರಿಹಾರ ನೀಡುವಂತೆ ಹೈಕೋರ್ಟ್ ಆದೇಶ ನೀಡಿದರೂ ಇಲ್ಲಿಯವರೆಗೂ ಪರಿಹಾರ ನೀಡಿಲ್ಲ ಎಂದ ಹರಿಹಾಯ್ದರು. ಇನ್ನೂ ನೀರಾವರಿ ಇಲಾಖೆಗೆ ದನಕರು ಗಳೊಂದಿಗೆ ಆಗಮಿಸಿ ಮುತ್ತಿಗೆ ಹಾಕಲು ರೈತರು ಯತ್ನಿಸಿದರು.ಮಾಸ್ತಿಹೊಳಿ ಗ್ರಾಮದ ರೈತ ಮುಖಂಡ ಬಾಳೇಶ ಮಾವನೂರಿ ಮಾತನಾಡಿ, ಫೆ.28 ರಂದು ಉಸ್ತುವಾರಿ ಮೇಲಾಧಿಕಾರಿಗಳ ಅನುಮತಿ ಪಡೆದಿದು ಪ್ರಸ್ಥಾವನೆ ಸಲ್ಲಿಸುತ್ತೇನೆ ಎಂದು ಸಚಿವರು ತಿಳಿಸಿದ್ದರು. ಆದರೆ, ಇದುವರೆಗೆ ಅದನ್ನೂ ಮಾಡಿಲ್ಲ. ಪ್ರಸ್ಥಾವನೆ ಸಲ್ಲಿಸುವರಗೆ ನಾವೂ ಪ್ರತಿಭಟನೆ ಹಿಂಪಡೆದುವುದಿಲ್ಲ. ನಮ್ಮ ಕುಟುಂಬಕ್ಕೆ ತೊಂದರೆಯಾದರೆ ಎಂ.ಡಿ.ರಾಜೇಶ್, ಬಿ.ಆರ್.ರಾಠೋಡ್ ಮುಖ್ಯ ಹೊಣೆಗಾರು ಆಗುತ್ತಾರೆ. ನಕಲಿ ದಾಖಲಾತಿ ಸಲ್ಲಿಸಿದ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲು ಆಗಬೇಕು ಎಂದು ಅಗ್ರಹಿಸಿದರು.