ಸಾರಾಂಶ
ನವದೆಹಲಿಯಲ್ಲಿ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ, ಕೇಂದ್ರ ಸರ್ಕಾರ ರೈತರ ಬೇಡಿಕೆಗಳನ್ನು ತಕ್ಷಣ ಈಡೇರಿಸುವಂತೆ ಒತ್ತಾಯಿಸಿ ಶುಕ್ರವಾರ ಸಂಯುಕ್ತ ಕಿಸಾನ್ ಮೋರ್ಚಾ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ವಿವಿಧ ರೈತ ಪರ ಸಂಘಟನೆಗಳ ನೇತೃತ್ವದಲ್ಲಿ ಉಪವಿಭಾಗಾಧಿಕಾರಿ ಕಚೇರಿ ಎದುರು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಿವಾನಂದ ಕುಗ್ವೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಸಾಗರ: ದೇಶದ ರಾಜಧಾನಿ ನವದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ, ಕೇಂದ್ರ ಸರ್ಕಾರ ರೈತರ ಬೇಡಿಕೆಗಳನ್ನು ತಕ್ಷಣ ಈಡೇರಿಸುವಂತೆ ಒತ್ತಾಯಿಸಿ ಶುಕ್ರವಾರ ಸಂಯುಕ್ತ ಕಿಸಾನ್ ಮೋರ್ಚಾ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ವಿವಿಧ ರೈತ ಪರ ಸಂಘಟನೆಗಳ ನೇತೃತ್ವದಲ್ಲಿ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಿವಾನಂದ ಕುಗ್ವೆ ಮಾತನಾಡಿ, ಇತ್ತೀಚಿನ ವರ್ಷಗಳಲ್ಲಿ ರೈತರ ನೆಮ್ಮದಿಯನ್ನು ಕಿತ್ತುಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರವನ್ನು ಕಾರ್ಪೋರೇಟ್ಗಳಿಗೆ ಮಾರಾಟ ಮಾಡುವ ಸಂಚು ನಡೆಯುತ್ತಿದ್ದು ರೈತರು ಜಾಗೃತರಾಗಬೇಕು. ಕೇಂದ್ರ ಸರ್ಕಾರ ರೈತರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಖಂಡನೀಯ. ರೈತರ ಬೇಡಿಕೆಗಳನ್ನು ತಕ್ಷಣ ಈಡೇರಿಸಬೇಕು ಎಂದು ಒತ್ತಾಯಿಸಿದರು.ರೈತ ಸಂಘ (ಡಾ. ಎಚ್.ಗಣಪತಿಯಪ್ಪ ಸ್ಥಾಪಿತ) ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ, ಮಲೆನಾಡು ಭೂರಹಿತರ ಹೋರಾಟ ವೇದಿಕೆ ಜಿಲ್ಲಾ ಸಂಚಾಲಕ ತೀ.ನ.ಶ್ರೀನಿವಾಸ್ ಮಾತನಾಡಿದರು.
ಎನ್.ಡಿ.ವಸಂತಕುಮಾರ್, ಎಚ್.ಬಿ.ರಾಘವೇಂದ್ರ, ರಮೇಶ್ ಕೆಳದಿ, ಹೊಯ್ಸಳ ಗಣಪತಿಯಪ್ಪ, ಕಿರಣ ಕುಮಾರ್, ಡಾ. ರಾಮಚಂದ್ರ ಮನೆಘಟ್ಟ, ರವಿ ಕುಗ್ವೆ, ಮಂಜಪ್ಪ ಎಂ.ಬಿ., ದಿನೇಶ್, ವಿಲ್ಸನ್ ಗೋನ್ಸಾಲ್ವಿಸ್ ಇನ್ನಿತರರು ಹಾಜರಿದ್ದರು.- - - -16ಕೆ.ಎಸ್.ಎ.ಜಿ.1: