ಸಚಿವ ಶಿವಾನಂದ ಪಾಟೀಲ್‌ ಅವರನ್ನು ಸಂಪುಟದಿಂದ ವಜಾಗೊಳಿಸಲು ರೈತ ಸಂಘ ಆಗ್ರಹ

| Published : Dec 28 2023, 01:47 AM IST

ಸಚಿವ ಶಿವಾನಂದ ಪಾಟೀಲ್‌ ಅವರನ್ನು ಸಂಪುಟದಿಂದ ವಜಾಗೊಳಿಸಲು ರೈತ ಸಂಘ ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ರೈತರನ್ನು ಅಪಮಾನಿಸಿರುವ ರಾಜ್ಯದ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ್ ರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಬರಗಾಲ ಬರಲಿ ಎಂದು ರೈತರು ಆಶೀಸುತ್ತಾರೆಂದು ಹೇಳುವ ಮೂಲಕ ರೈತರನ್ನು ಅಪಮಾನಿಸಿರುವ ರಾಜ್ಯದ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ್ ರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.ಆಜಾದ್‌ ಪಾರ್ಕ್ ವೃತ್ತದಲ್ಲಿ ಸಮಾವೇಶಗೊಂಡ ರೈತ ಸಂಘದ ಪದಾಧಿಕಾರಿಗಳು ಸಚಿವರ ವಿರುದ್ಧ ಘೋಷಣೆ ಹಾಕಿ ಆಕ್ರೋಶ ವ್ಯಕ್ತಪಡಿಸಿ, ರೈತರನ್ನು ಅಪಮಾನಿಸಿರುವ ಸಚಿವ ಶಿವಾನಂದ ಪಾಟೀಲ್ ಅವರನ್ನು ತಕ್ಷಣ ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿದರು.

ಬರಗಾಲ ಬಂದರೇ ರೈತರು ಸಾಲ ಮನ್ನಾ ಮಾಡಲು ಒತ್ತಾಯಿಸುತ್ತಾರೆ. ಎಷ್ಟು ಸಾರಿ ಸಾಲಮನ್ನಾ ಮಾಡುವುದು ಎಂದು ರಾಜ್ಯದ ರೈತರನ್ನು ಅವಹೇಳನ ಮಾಡಿ ಉದ್ದಟತನ ತೋರಿದ್ದು ಅಕ್ಷ್ಯಮ್ಯ ಅಪರಾಧವಾಗಿದ್ದು, ಸಚಿವರು ತಕ್ಷಣ ರಾಜ್ಯದ ರೈತರ ಕ್ಷಮೆಯಾಚಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರನ್ನು ಅಪಮಾನಿಸುವ ಸಚಿವ ಶಿವಾನಂದ ಪಾಟೀಲ್ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಮುಖಂಡರು ಹೇಳಿದರು.ರೈತರು ಬೆಳೆದಿರುವ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನೀತಿ, ನೀರಾವರಿ ಯೋಜನೆಗಳನ್ನು ರೂಪಿಸುವಂತೆ ಸರ್ಕಾರದ ಗಮನ ಸೆಳೆದರೂ ನಿರ್ಲಕ್ಷ್ಯವಹಿಸಲಾಗಿದೆ. ರೈತರ ಸರ್ವತೋಮುಖ ಅಭಿವೃದ್ದಿ ಬಗ್ಗೆ ಚಿಂತಿಸದೆ ರೈತರು ಸಂಕಷ್ಟದಲ್ಲಿರುವ ಕಾಲದಲ್ಲಿ ರೈತರನ್ನು ಅಪಹಾಸ್ಯ ಮಾಡಿರುವುದನ್ನು ರೈತ ಸಂಘ ಖಂಡಿಸುತ್ತದೆ ಎಂದರು.ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ, ಪ್ರಧಾನ ಕಾರ್ಯದರ್ಶಿ ಡಿ.ಮಹೇಶ್, ಮಾಜಿ ಜಿಲ್ಲಾಧ್ಯಕ್ಷ ಎಂ.ಸಿ.ಬಸವರಾಜ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಕೆ.ಕೃಷ್ಣೇಗೌಡ, ತಾಲೂಕು ಅಧ್ಯಕ್ಷ ಎಂ.ಬಿ. ಚಂದ್ರಶೇಖರ್, ಜಿಲ್ಲಾ ಖಂಜಾಚಿ ಎಚ್.ಎಸ್.ಲೋಕೇಶ್ ಸೇರಿದಂತೆ ರೈತರು ಪಾಲ್ಗೊಂಡಿದ್ದರು. 27 ಕೆಸಿಕೆಎಂ 3ಚಿಕ್ಕಮಗಳೂರಿನ ಆಜಾದ್‌ ಪಾರ್ಕ್ ವೃತ್ತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಸಚಿವ ಶಿವಾನಂದ ಪಾಟೀಲ್‌ ವಿರುದ್ಧ ಬುಧವಾರ ಪ್ರತಿಭಟನೆ ನಡೆಯಿತು.