ಸಾರಾಂಶ
ಕುಕನೂರು: ರಾಜ್ಯದ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಪಟ್ಟಣದ ತಹಸೀಲ್ದಾರ ಮೂಲಕ ಮನವಿ ಸಲ್ಲಿಸಲಾಯಿತು.ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಅಂದಪ್ಪ ಹುರುಳಿ ಮಾತನಾಡಿ, ರಾಜ್ಯದಲ್ಲಿ ಸಮರ್ಪಕ ಮಳೆಯಾಗದೇ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದಲ್ಲಿ ಬರಗಾಲ ಇದೆ. ಅದಕ್ಕಾಗಿ ರಾಜ್ಯದ ರೈತರು ತೊಂದರೆಗೆ ಈಡಾಗಿದ್ದಾರೆ. ಸಕಾಲಕ್ಕೆ ಮಳೆ ಆಗದೇ ಬೆಳೆ ಹಾಳಾಗಿದೆ. ಅದಕ್ಕೆ ಸರ್ಕಾರದಿಂದ ಬೆಳೆ ಪರಿಹಾರ ನೀಡಿಲ್ಲ ಎಂದರು.ಬ್ಯಾಂಕಿನಲ್ಲಿ ಬೆಳೆಸಾಲ ಪಡೆದ ರೈತರು ಸಾಲ ಕಟ್ಟಲು ಆಗದೇ ತೊಂದರೆ ಅನುಭವಿಸುತ್ತಿದ್ದಾರೆ. ರೈತರ ಸಂಪೂರ್ಣ ಸಾಲವನ್ನು ಕೇಂದ್ರ ಸರ್ಕಾರ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.ಈ ವೇಳೆ ಕಡಲೆ ಬೆಳೆಗೆ ಬೆಲೆ ನೀಡಿ ಖರೀದಿ ಕೇಂದ್ರ ಪ್ರಾರಂಭಿಸಲು ಕೃಷಿ ಸಚಿವ ಎನ್.ಚಲುವನಾರಾಯಣಸ್ವಾಮಿ ಅವರಿಗೆ ಮನವಿ ಸಲ್ಲಿಸಲಾಯಿತು.ತಹಶೀಲ್ದಾರ್ ಎಚ್.ಪ್ರಾಣೇಶ ಮುಖಾಂತರ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯ ಕೃಷಿ ಸಚಿವ ಎನ್.ಚಲುವನಾರಾಯಣಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.ರೈತ ಸಂಘದ ತಾಲೂಕಾಧ್ಯಕ್ಷ ಮಂಜುನಾಥ ಚೆಟ್ಟಿ, ಪ್ರಧಾನ ಕಾರ್ಯದರ್ಶಿ ಸುರೇಶ ಚೌಡ್ಕಿ, ರೈತ ಮುಖಂಡರಾದ ಲಕ್ಷ್ಮಣ ಕೋರಿ, ಫಕೀರಪ್ಪ ನಿಟ್ಟಾಲಿ, ವಜೀರಸಾಬ ತಳಕಲ್, ಅನಿಲ್‌ಕುಮಾರ ಹುಜರತ್ತಿ, ಹುಚ್ಚಪ್ಪ ಸಣ್ಣನಿಂಗಣ್ಣವರ್, ಹನಮಂತ ಕೌರಿ, ಸಾವಿತ್ರಮ್ಮ ತೆಗ್ಗಿಮನಿ, ಗಂಗಮ್ಮ ಹುಡೆದ ಅನೇಕರು ಇದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))