ಸಾರಾಂಶ
ಗ್ರಾಮ ಪಂಚಾಯಿತಿ ಕಚೇರಿಗೆ ಮುಂದೆ ಧರಣಿ ಆರಂಭಿಸಿದ ಪ್ರತಿಭಟನಾಕಾರರು ಗ್ರಾಪಂ ಆಡಳಿತ ಮಂಡಳಿ ಹಾಗೂ ಪಿಡಿಒ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಮೊಳಗಿಸಿದರು.
ಗುಂಡ್ಲುಪೇಟೆ:
ತಾಲೂಕಿನ ಕೋಡಹಳ್ಳಿ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಪುತ್ತನಪುರ ಗ್ರಾಮ ಪಂಚಾಯಿತಿ ವಿಫಲವಾಗಿದೆ ಹಾಗೂ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಫಿಸಿ ಸಾಮೂಹಿಕ ನಾಯಕತ್ವದಲ್ಲಿ ರೈತ ಸಂಘದ ಕಾರ್ಯಕರ್ತರು ಪುತ್ತನಪುರ ಗ್ರಾಪಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.ಸಾಮೂಹಿಕ ನಾಯಕತ್ವದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಗ್ರಾಮ ಪಂಚಾಯಿತಿ ಕಚೇರಿಗೆ ಮುಂದೆ ಧರಣಿ ಆರಂಭಿಸಿದ ಪ್ರತಿಭಟನಾಕಾರರು ಗ್ರಾಪಂ ಆಡಳಿತ ಮಂಡಳಿ ಹಾಗೂ ಪಿಡಿಒ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಮೊಳಗಿಸಿದರು.
ರೈತ ಮುಖಂಡ ಹೊನ್ನೂರು ಪ್ರಕಾಶ್ ಮಾತನಾಡಿ, ಪುತ್ತನಪುರ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಬಹುತೇಕ ಮೂಲಭೂತ ಸೌಕರ್ಯಗಳಿಲ್ಲ. ಗ್ರಾಪಂ ಕನಿಷ್ಟ ಮೂಲಭೂತ ಸೌಕರ್ಯ ಒದಗಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ರೈತಸಂಘದ ಶಿವಪುರ ಸಿದ್ದಪ್ಪ, ಷಣ್ಮುಖಸ್ವಾಮಿ, ಗಣೇಶ್, ಮಾರಶೆಟ್ಟಿ,ಮಂಜಪ್ಪ, ಮರಿಸಿದ್ದಶೆಟ್ಟಿ ಸೇರಿದಂತೆ ಹಲವರಿದ್ದರು.12ಜಿಪಿಟಿ3
ಗುಂಡ್ಲುಪೇಟೆ ತಾಲೂಕಿನ ಪುತ್ತನಪುರ ಗ್ರಾಪಂಗೆ ಸಾಮೂಹಿಕ ನಾಯಕತ್ವದ ರೈತ ಸಂಘದ ಕಾರ್ಯಕರ್ತರು ಮುತ್ತಿಗೆ ಹಾಕಿದ್ದರು.------------