ಭೀಕರ ಅಪಘಾತ: ಓರ್ವ ಸಾವು

| Published : Dec 03 2023, 01:00 AM IST

ಸಾರಾಂಶ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿಯ ಗೊಲ್ಲಹಳ್ಳಿ ತಾಂಡಾ ಬಳಿ ಓಮ್ನಿ ಕಾರು ಹಾಗೂ ಟಾಟಾ ಏಸ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.

ಅಪಘಾತದಲ್ಲಿ ಓಮ್ನಿ ಕಾರಿನಲ್ಲಿದ್ದ ಬೆಂಗಳೂರಿನ ಬಾಗಲಗುಂಟೆ ನಿವಾಸಿ ಶಿವಕುಮಾರ್(32) ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮತ್ತೊಬ್ಬ ಅನಂತರಾಮ್(37) ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.