ಸಾರಾಂಶ
ಊರಿಂದ ಆಚೆ ಮೇಕೆಗಳನ್ನು ಮೇಯಿಸಲು ಹೋಗಿದ್ದ ಸಂದರ್ಭದಲ್ಲಿ ಮೇಕೆವೊಂದು ಕೆರೆಯಲ್ಲಿ ನೀರು ಕುಡಿಯಲು ಹೋಗಿ ಮುಳುಗಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದನ್ನು ಗಮನಿಸಿ ಮೇಕೆಯನ್ನು ರಕ್ಷಿಸಲು ಹೋದ ಮೇಕೆಗಳ ಮಾಲೀಕ ಹಾಗೂ ಮಗ ಇಬ್ಬರೂ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ತಾಲೂಕು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಅರಸೀಕೆರೆ: ಊರಿಂದ ಆಚೆ ಮೇಕೆಗಳನ್ನು ಮೇಯಿಸಲು ಹೋಗಿದ್ದ ಸಂದರ್ಭದಲ್ಲಿ ಮೇಕೆವೊಂದು ಕೆರೆಯಲ್ಲಿ ನೀರು ಕುಡಿಯಲು ಹೋಗಿ ಮುಳುಗಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದನ್ನು ಗಮನಿಸಿ ಮೇಕೆಯನ್ನು ರಕ್ಷಿಸಲು ಹೋದ ಮೇಕೆಗಳ ಮಾಲೀಕ ಹಾಗೂ ಮಗ ಇಬ್ಬರೂ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ತಾಲೂಕಿನ ಮೈಸೂರು ರಸ್ತೆಯಲ್ಲಿರುವ ರುದ್ರನಹಳ್ಳಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ರವೀಶ್ (42) ಹಾಗೂ ಅವರ ಮಗ ಶಶಾಂಕ್ (14) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ತಾಲೂಕು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ತಾಲೂಕು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳೀಯ ಶಾಸಕ ಕೆ. ಎಂ. ಶಿವಲಿಂಗೇಗೌಡ ಹಾಗೂ ನಗರಸಭೆ ಅಧ್ಯಕ್ಷ. ಎಂ ಸಮೀವುಲ್ಲಾ ಮತ್ತು ತಹಸೀಲ್ದಾರ್ ಸಂತೋಷ್ ಕುಮಾರ್ ಭೇಟಿ ನೀಡಿ ಮಾಹಿತಿ ಪಡೆದು ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.