ಅಪ್ರಾಪ್ತ ಮಗನಿಗೆ ಬೈಕ್ ನೀಡಿದ ತಂದೆಗೆ ದಂಡ, ಜೈಲು

| Published : Jul 02 2025, 12:20 AM IST

ಸಾರಾಂಶ

ತುಮಕೂರಿನಿಂದ ಚಾಲನೆ ಮಾಡಿಕೊಂಡು ಬರುವಾಗ ರಾತ್ರಿ ಗುಬ್ಬಿ ಬೈಪಾಸ್‌ನ ಸಿಐಟಿ ಕಾಲೇಜು ಹಿಂಭಾಗ ರಸ್ತೆ ಪಕ್ಕದಲ್ಲಿದ್ದ ಮಣ್ಣಿನ ಗುಡ್ಡೆಗೆ ಡಿಕ್ಕಿ ಹೊಡೆದಿದ್ದ.

ತುಮಕೂರು:ಅಪ್ರಾಪ್ತ ಮಗನಿಗೆ ವಾಹನವನ್ನು ಚಲಾಯಿಸಲು ನೀಡಿದ್ದಕ್ಕೆ ತಂದೆಯೊಬ್ಬರಿಗೆ ಗುಬ್ಬಿ ಜೆಎಂಎಫ್‌ಸಿ ನ್ಯಾಯಾಲಯ 30 ಸಾವಿರ ರು. ದಂಡ ಹಾಗೂ ಒಂದು ದಿನ ಜೈಲು ಶಿಕ್ಷೆ ವಿಧಿಸಿದೆ.ಕಳೆದ ವರ್ಷ ಅಕ್ಟೋಬರ್ 31ರಂದು ಅಪ್ರಾಪ್ತ ಮಗನಿಗೆ ದ್ವಿಚಕ್ರ ವಾಹನವನ್ನು ತಂದೆ ನೀಡಿದರು. ಆತ ತುಮಕೂರಿನಿಂದ ಚಾಲನೆ ಮಾಡಿಕೊಂಡು ಬರುವಾಗ ರಾತ್ರಿ ಗುಬ್ಬಿ ಬೈಪಾಸ್‌ನ ಸಿಐಟಿ ಕಾಲೇಜು ಹಿಂಭಾಗ ರಸ್ತೆ ಪಕ್ಕದಲ್ಲಿದ್ದ ಮಣ್ಣಿನ ಗುಡ್ಡೆಗೆ ಡಿಕ್ಕಿ ಹೊಡೆದಿದ್ದ. ಈ ಸಂಬಂಧ ಗುಬ್ಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಘಟನೆಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಈ ಸಂಬಂಧ ನ್ಯಾಯಾಲಯ ಅಪ್ರಾಪ್ತ ಮಗನಿಗೆ ಬೈಕ್ ಕೊಟ್ಟ ತಂದೆ ಈಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.