ಇಲ್ಲಿನ ಕುಕ್ಕುಂದೂರು ಗ್ರಾಮದ ಹಾಂಕ್ರಾಡಿ ಎಂಬಲ್ಲಿ ಅಕ್ರಮವಾಗಿ ಸ್ಫೋಟಕಗಳನ್ನು ಬಳ‍ಸಿ ಕಲ್ಲುಬಂಡೆ ಒಡೆದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕಾರ್ಕಳ: ಇಲ್ಲಿನ ಕುಕ್ಕುಂದೂರು ಗ್ರಾಮದ ಹಾಂಕ್ರಾಡಿ ಎಂಬಲ್ಲಿ ಅಕ್ರಮವಾಗಿ ಸ್ಫೋಟಕಗಳನ್ನು ಬಳ‍ಸಿ ಕಲ್ಲುಬಂಡೆ ಒಡೆದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕುಕ್ಕುಂದೂರು ಗ್ರಾಮದ ಅಯ್ಯಪ್ಪ ನಗರದ ನಿವಾಸಿಗಳಾದ ಟಿ. ರವಿಚಂದ್ರ (55 ) ಹಾಗೂ ಆತನ ಮಗ ಪವನ್‌ ಕುಮಾರ್ (31) ಬಂಧಿತರು.

ಜ. 21ರಂದು ಸಂಜೆ 5 ಗಂಟೆಗೆ ಹಾಂಕ್ರಾಡಿ ಎಂಬಲ್ಲಿ ಯಾವುದೇ ಪರವಾನಗಿ ಇಲ್ಲದೆ ಸ್ಫೋಟಕವನ್ನು ಬಳಸಿ ಕಲ್ಲು ಬಂಡೆಗಳನ್ನು ಒಡೆದಿದ್ದು, ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆ ಕೈಗೊಂಡ ಕಾರ್ಕಳ ನಗರ ಪೊಲೀಸ್ ಠಾಣೆ ಪಿಎಸ್‌ಐ ಮುರುಳೀಧರ ನಾಯ್ಕ ಹಾಗೂ ಸಿಬ್ಬಂದಿಯವರು ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.