ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿ ಸಂಪೂರ್ಣ ವೈಫಲ್ಯ ಕಂಡಿದೆ. ಅಭಿವೃದ್ಧಿ ಯೋಜನೆ ಇಲ್ಲದ, ಭ್ರಷ್ಟಾಚಾರದ ಆಡಳಿತ ರಾಜ್ಯದಲ್ಲಿದೆ. ಯಾವ ಗುಂಪಿಗೆ ಎಷ್ಟು ಪಾಲು ಹಂಚಿಕೊಳ್ಳಬೇಕು ಎಂಬ ತಕರಾರು ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ, ಸೋಲುವ ಭೀತಿಯಲ್ಲಿದೆ ಎಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಲೇವಡಿ ಮಾಡಿದ್ದಾರೆ.ಅವರು ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆಗೆ ಎಷ್ಟು ಸೀಟು, ಸಿದ್ದರಾಮಯ್ಯನಿಗೆ ಎಷ್ಟು ಸೀಟು ಅಂತ ಚರ್ಚೆ ನಡೆಯುತ್ತಿದೆ. ಮುಳುಗುವವನಿಗೆ ಹುಲ್ಲು ಕಡ್ಡಿ ಆಸರೆ ಎಂಬಂತೆ ಕಾಂಗ್ರೆಸಿನ ಸ್ಥಿತಿಯಾಗಿದೆ ಎಂದು ಟೀಕಿಸಿದರು.
ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಮಾತನಾಡುವ ಹಕ್ಕಿದೆ. ಅದು ಅವರ ವೈಯಕ್ತಿಕಅಭಿಪ್ರಾಯ. ದಿಂಗಾಲೇಶ್ವರ ಸ್ವಾಮಿಗಳು ಅವರ ಅಭಿಪ್ರಾಯ ವ್ಯಕ್ತಪಡಿಸಿದ್ದು, ಕಾಂಗ್ರೆಸ್
ಇದರ ಲಾಭ ಪಡೆಯುತ್ತಿದೆ ಎಂದರೆ ಅದು ಆ ಪಕ್ಷದ ವೈಫಲ್ಯತೆ ತೋರಿಸುತ್ತಿದೆ ಎಂದವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ಕಾಂಗ್ರೆಸ್ ನಲ್ಲಿ ಸ್ಪರ್ಧಿಸಲು ಅಭ್ಯರ್ಥಿ ಇಲ್ಲದ ಕಾರಣ ಇದ್ದಬಿದ್ದವರ ಕೈಕಾಲು ಹಿಡಿಯುವ ಪರಿಸ್ಥಿತಿ
ಬಂದಿದೆ. ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್, ಬಿಜೆಪಿಯಲ್ಲಿ ಇದ್ದ ಹೆಗ್ಡೆಯವರನ್ನುಅಭ್ಯರ್ಥಿಯಾಗಿಸಿದೆ ಎಂದು ಅಭಿಪ್ರಾಯಪಟ್ಟರು.
ಈಶ್ವರಪ್ಪ ಬಿಜೆಪಿ ಕಟ್ಟಾಳು:ಇಡೀ ರಾಜ್ಯದಲ್ಲಿ ಬಿಜೆಪಿ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ ವಹಿಸಿದ್ದ ಈಶ್ವರಪ್ಪ, ನಮ್ಮ ಪಕ್ಷದ ಸಿದ್ಧಾಂತದ ಕಟ್ಟಾಳು. ಸಹಜವಾಗಿಯೇ ತನ್ನ ಭಾವನೆಯನ್ನು ವ್ಯಕ್ತಪಡಿಸುತ್ತಿದ್ದು, ಹಿರಿಯರು ಅವರ ಜೊತೆ ಮಾತನಾಡುತ್ತಾರೆ. ಇದು ವಿಚಾರಧಾರೆಗಳ ನಡುವಿನ ಚುನಾವಣೆಯಾಗಿದೆ. ಇಲ್ಲಿ ಜಾತಿ ರಾಜಕೀಯ ಇಲ್ಲ, ಕಾಂಗ್ರೆಸ್ ವಿರುದ್ಧ ನಮ್ಮ ಹೋರಾಟ ಎಂದವರು ಹೇಳಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಂದಾಪುರ, ಮಂಗಳೂರು ವಿಭಾಗ ಪ್ರಭಾರಿ ಕಿದಿಯೂರು ಉದಯ್ ಕುಮಾರ್ ಶೆಟ್ಟಿ, ಜಿ.ಪ್ರ.ಕಾರ್ಯದರ್ಶಿ ದಿನಕರ್ ಶೆಟ್ಟಿ ಹೆರ್ಗ, ಮಾಜಿಜಿಲ್ಲಾಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ಕುಯಿಲಾಡಿ ಸುರೇಶ್ ನಾಯಕ್, ಮುಖಂಡರಾದ
ರಾಜೇಶ್ ಕಾವೇರಿ, ದಿನಕರ್ ಬಾಬು, ವಿಜಯ್ ಉದ್ಯಾವರ, ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ,ಇದ್ದರು.