ಪ್ರಜಾಪ್ರಭುತ್ವದ ಬಲವರ್ಧನೆಗೆ ನಿರ್ಭೀತ ಹಾಗೂ ನಿಷ್ಪಕ್ಷಪಾತ ಪತ್ರಿಕೋದ್ಯಮ ಅಗತ್ಯ. ಜನರ ಸಮಸ್ಯೆಗಳಿಗೆ ಧ್ವನಿಯಾಗಿ ಸರ್ಕಾರದ ಗಮನ ಸೆಳೆಯುವ ಬಗ್ಗೆ ಪತ್ರಕರ್ತರ ಜವಾಬ್ದಾರಿ ಹಿರಿದು.
ಕನ್ನಡಪ್ರಭ ವಾರ್ತೆ ಗದಗ
ಪ್ರಜಾಪ್ರಭುತ್ವದ ಬಲವರ್ಧನೆಗೆ ನಿರ್ಭೀತ ಹಾಗೂ ನಿಷ್ಪಕ್ಷಪಾತ ಪತ್ರಿಕೋದ್ಯಮ ಅಗತ್ಯ. ಜನರ ಸಮಸ್ಯೆಗಳಿಗೆ ಧ್ವನಿಯಾಗಿ ಸರ್ಕಾರದ ಗಮನ ಸೆಳೆಯುವ ಬಗ್ಗೆ ಪತ್ರಕರ್ತರ ಜವಾಬ್ದಾರಿ ಹಿರಿದು ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.ಶನಿವಾರ ಗದಗ ನಗರದ ತೋಂಟದಾರ್ಯ ಮಠದ ಶಿವಾನುಭವ ಮಂಟಪದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ ಹಾಗೂ ಟ್ರೋಫಿ ವಿತರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಸಾನ್ನಿಧ್ಯ ವಹಿಸಿದ್ದ ಜ.ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ, ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ ಮಾಧ್ಯಮಗಳ ಪಾತ್ರ ಪ್ರಮುಖ ಎಂದರು. ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಪತ್ರಕರ್ತರು ವೃತ್ತಿ ಘನತೆ ಕಾಪಾಡಿಕೊಂಡು ಸಮಾಜದ ಹಿತಕ್ಕಾಗಿ ಕಾರ್ಯನಿರ್ವಹಿಸಬೇಕು ಎಂದರು.ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ, ಕಾಂಗ್ರೆಸ್ ಯುವ ಮುಖಂಡ ಕೃಷ್ಣಗೌಡ ಪಾಟೀಲ ಮಾತನಾಡಿದರು. ಜಿಲ್ಲಾಧ್ಯಕ್ಷ ರಾಜು ಹೆಬ್ಬಳ್ಳಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಪ್ರೊ. ಎಸ್.ಎಸ್. ಪಟ್ಟಣಶೆಟ್ಟರ ಮುಂತಾದವರಿದ್ದರು. ರವಿಕಾಂತ ಅಂಗಡಿ ಸೇರಿದಂತೆ ಹಲವು ಸಾಧಕರನ್ನು ಸನ್ಮಾನಿಸಲಾಯಿತು. ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ನಗದು ಹಾಗೂ ಪ್ರಮಾಣಪತ್ರ ನೀಡಿ ಪುರಸ್ಕರಿಸಲಾಯಿತು.