ಸಾರಾಂಶ
ಕನ್ನಡಪ್ರಭ ವಾರ್ತೆ ಹಲಗೂರು
ಪಟ್ಟಣದ ಶಾಲೆಗಳಲ್ಲಿ ಬೇಸಿಗೆ ಶಿಬಿರವನ್ನು ಹಣ ಪಡೆದು ಆಯೋಜಿಸುತ್ತಾರೆ. ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಉಚಿತವಾಗಿ ಶಿಬಿರ ಏರ್ಪಡಿಸಿರುವುದರಿಂದ ಅನೇಕ ಮಕ್ಕಳಿಗೆ ಉಪಯೋಗವಾಗಲಿದೆ ಎಂದು ಜಿಲ್ಲಾ ಯೋಜನಾ ಉಪ ಸಮನ್ವಯಾಧಿಕಾರಿ ಸಮಗ್ರ ಶಿಕ್ಷಣ ಇಲಾಖೆ ರೇಣುಕಾ ತಿಳಿಸಿದರು.ಕೆಂಪಯ್ಯನದೊಡ್ಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದು ತಿಂಗಳ ನಡೆಯುವ ಬೇಸಿಗೆ ಶಿಬಿರ ಉದ್ಘಾಟಿಸಿ ಮಾತನಾಡಿ, ಬರಪೀಡಿತ ಮಳೆ ಬಾರದ ಪ್ರದೇಶಗಳಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಇಚ್ಛೆಪಟ್ಟ ಮಕ್ಕಳಿಗೆ ಮಧ್ಯಾಹ್ನ ಬಿಸಿ ಊಟ ನೀಡಬೇಕೆಂದು ಶಿಕ್ಷಣ ಇಲಾಖೆ ಆದೇಶಿಸಿದೆ. ಆದ್ದರಿಂದ ಬೇಸಿಗೆ ರಜೆಯಲ್ಲಿಯೂ ಮಧ್ಯಾಹ್ನ ಮಕ್ಕಳಿಗೆ ಬಿಸಿ ಊಟ ನೀಡಲಾಗುತ್ತಿದೆ ಎಂದರು.
ಮಕ್ಕಳಿಗೆ ಅನುಕೂಲವಾಗಲು ಪಠ್ಯೇತರ ಚಟುವಟಿಕೆಗಳನ್ನು ಕಲಿಸಲು ಉದ್ದೇಶಿಸಿ ಮಕ್ಕಳು ಬೇಸಿಗೆ ರಜೆಯನ್ನು ಸಂತೋಷದಿಂದ ಕಳೆಯಲು ಅನುವಾಗುವಂತೆ ಬೇಸಿಗೆ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದರು.ಶಿಬಿರದಲ್ಲಿ ಯೋಗ ತರಬೇತಿ, ಸಂಗೀತ, ನೃತ್ಯ, ಪೇಂಟಿಂಗ್, ಚಿತ್ರಕಲೆ, ಜನಪದ ಗೀತೆ ಸೇರಿದಂತೆ ಇನ್ನೂ ಹಲವು ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಅದಕ್ಕಾಗಿ ಪ್ರತಿಯೊಬ್ಬರೂ ಸರ್ಕಾರಿ ಶಾಲೆಗಳಲ್ಲಿ ಉನ್ನತ ಶಿಕ್ಷಣ ದೊರಕುತ್ತಿದೆ. ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗಳಲ್ಲಿ ನಿಮ್ಮ ಮಕ್ಕಳಿಗೆ ವ್ಯಾಸಂಗ ಕೊಡಿಸಿ ಎಂದು ಕರೆ ನೀಡಿದರು.
ಈ ವೇಳೆ ಜಿ.ಎಸ್.ಕೃಷ್ಣ ಮಾತನಾಡಿದರು. ಅತಿಥಿ ಶಿಕ್ಷಕರಾದ ನಳಿನಿ, ರಮ್ಯಾ, ಸಿ.ರಚನಾ, ಜಿ.ಎಸ್ ಕೃಷ್ಣ ಹಾಜರಿದ್ದರು.ಯುಗಾದಿ ಕವಿಗೋಷ್ಠಿ ಕಸಾಪ ಮಾಜಿ ಅಧ್ಯಕ್ಷ ಡಿ.ಸಿ.ಸ್ವಾಮಿ ಉದ್ಘಾಟನೆ
ಮದ್ದೂರು:ಪಟ್ಟಣದ ಮಹಿಳಾ ಸರ್ಕಾರಿ ಕಾಲೇಜು ಆವರಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಡೆದ ಯುಗಾದಿ ಕವಿಗೋಷ್ಠಿ ಯನ್ನು ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಡಿ.ಪಿ.ಸ್ವಾಮಿ ಉದ್ಘಾಟಿಸಿದರು.ನಂತರ ಮಾತನಾಡಿದ ಅವರು, ಮಳೆ ಇಲ್ಲದೆ ಬರ ಬಂದಿರುವ ಈ ಕಾಲದಲ್ಲಿ ಸಾಹಿತ್ಯ ಕೃಷಿಗೂ ಕೂಡ ಮಂಡ್ಯ ಜಿಲ್ಲೆಯಲ್ಲಿ ಬರ ಬಂದಂತೆ ಕಾಣುತ್ತಿದೆ. ಇತ್ತೀಚಿನ ದಿನಗಳಲ್ಲಿ ಕವಿಗಳು, ಸಾಹಿತಿಗಳು ಕಡಿಮೆಯಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲಾ ಮತ್ತು ತಾಲೂಕು ಸಾಹಿತ್ಯ ಪರಿಷತ್ತು ಹೆಚ್ಚು ಹೆಚ್ಚಾಗಿ ಇಂತಹ ಕಾರ್ಯಕ್ರಮಗಳನ್ನು ನಡೆಸಬೇಕೆಂದು ಕಿವಿಮಾತು ಹೇಳಿದರು.ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ದಸರಗುಪ್ಪೆ ಧನಂಜಯ ಮಾತನಾಡಿ, ಕಾರ್ಯಕ್ರಮದಲ್ಲಿ 17ಕ್ಕೂ ಹೆಚ್ಚು ಮಂದಿ ಕವಿಗಳು ಭಾಗವಹಿಸಿ ಯುಗಾದಿ ವಿಶೇಷತೆ, ನಾಡು, ನುಡಿ, ತಂದೆ ತಾಯಿ, ಬರ ಪರಿಸ್ಥಿತಿ ಕುರಿತು ಹಲವು ನೂತನ ಕವನಗಳನ್ನು ವಾಚಿಸಿದ್ದಾರೆ. ಮಹಿಳಾ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿರುವುದು ಬಹಳ ಸಂತೋಷ ತಂದಿದೆ ಎಂದರು.
ಪ್ರಾಂಶುಪಾಲ ಪ್ರೂಕೆ.ಬಿ.ನಾರಾಯಣ್ ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳು ಸಾಹಿತಿಕವಾಗಿ ಮುಂದುವರೆಯಲು ಅಗತ್ಯ ಸೌಲಭ್ಯಗಳನ್ನು ಒದಗಿಸುವುದಾಗಿ ತಿಳಿಸಿದರು. ಕವಿಗಳು ಉತ್ತಮವಾಗಿ ಕವನ ರಚನೆ ಮಾಡುತ್ತಿರುವುದು ಪ್ರಶಂಸನೀಯವಾಗಿದೆ ಎಂದು ತಿಳಿಸಿದರು.ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾ ಕಸಾಪ ಅಧ್ಯಕ್ಷ ದಿ.ಸಿ.ಕೆ.ರವಿಕುಮಾರ್ , ಚಿತ್ರನಟ ದಿ.ದ್ವಾರಕೀಶ್ ನಿಧನಕ್ಕೆ ಮೌನಾಚರಣೆ ಮೂಲಕ ಸಂತಾಪ ಸೂಚಿಸಲಾಯಿತು. ಕಾರ್ಯಕ್ರಮದಲ್ಲಿ ಹಲವು ಕವಿಗಳು ತಮ್ಮ ಕವನಗಳನ್ನು ಶುಶ್ರಾವ್ಯವಾಗಿ ವಾಚಿಸಿ, ಕಾರ್ಯಕ್ರಮಕ್ಕೆ ಮೆರುಗು ನೀಡಿದರು.;Resize=(128,128))
;Resize=(128,128))
;Resize=(128,128))
;Resize=(128,128))