ಸಾರಾಂಶ
ನರಸಿಂಹರಾಜಪುರ, ನ್ಯಾಯಾಲಯದಲ್ಲಿ ನಡೆಯುವ ಲೋಕ ಅದಾಲತ್‌ದಲ್ಲಿ ಉಭಯ ಕಕ್ಷಿದಾರರು ರಾಜಿ ಮಾಡಿಕೊಂಡಲ್ಲಿ ಅವರು ನ್ಯಾಯಾಲಯಕ್ಕೆ ಕಟ್ಟಿದ ಶುಲ್ಕವನ್ನು ಸಂಪೂರ್ಣವಾಗಿ ಹಿಂದಿರುಗಿಸಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಕೆ.ಟಿ. ರಘುನಾಥ್‌ಗೌಡ ಹೇಳಿದರು.
- ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರನ್ಯಾಯಾಲಯದಲ್ಲಿ ನಡೆಯುವ ಲೋಕ ಅದಾಲತ್‌ದಲ್ಲಿ ಉಭಯ ಕಕ್ಷಿದಾರರು ರಾಜಿ ಮಾಡಿಕೊಂಡಲ್ಲಿ ಅವರು ನ್ಯಾಯಾಲಯಕ್ಕೆ ಕಟ್ಟಿದ ಶುಲ್ಕವನ್ನು ಸಂಪೂರ್ಣವಾಗಿ ಹಿಂದಿರುಗಿಸಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಕೆ.ಟಿ. ರಘುನಾಥ್‌ಗೌಡ ಹೇಳಿದರು.
ಶನಿವಾರ ನ್ಯಾಯಾಲಯದಲ್ಲಿ ನಡೆದ ರಾಷ್ಠೀಯ ಲೋಕ ಅದಾಲತ್ ನಲ್ಲಿ ಮಾತನಾಡಿ, ನ್ಯಾಯಾಂಗ ಇಲಾಖೆ ಲೋಕ ಅದಾಲತ್ ಎಂಬ ಅತ್ಯಂತ ಉಪಯುಕ್ತ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದರಿಂದ ಉಭಯ ಕಕ್ಷಿದಾರರಿಗೂ ಅನುಕೂಲ ವಾಗಲಿದೆ. ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥವಾಗುವುದರಿಂದ ಬಾಂಧವ್ಯವೂ ಉಳಿದು, ವಿವಾದ ಇತ್ಯರ್ಥ ವಾಗುತ್ತವೆ. ಲೋಕ ಅದಾಲತ್‌ನಲ್ಲಿ ರಾಜಿ ಆಗಬಲ್ಲ ಅಪರಾಧಿತ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಹಾಗೂ ತೆರಿಗೆ ಪಾವತಿ ಬಾಕಿ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣ, ಕುಟುಂಬ ನ್ಯಾಯಾಲಯದ ಪ್ರಕರಣಗಳು, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳನ್ನು ಉಭಯ ಕಕ್ಷಿದಾರರು ರಾಜಿ ಮಾಡಿಕೊಳ್ಳುವಂತೆ ಸೂಕ್ತ ಮಾರ್ಗದರ್ಶನ ನೀಡುತ್ತೇವೆ. ಉಭಯ ಕಕ್ಷಿದಾರರಿಬ್ಬರಿಗೂ ಒಪ್ಪಿಗೆ ಆದಲ್ಲಿ ಮಾತ್ರ ರಾಜಿ ಸಂಧಾನ ಮಾಡಿಸಲಾಗುವುದು. ಹಿರಿಯ ಸಿವಿಲ್ ನ್ಯಾಯಾಲದ 42 ಹಾಗೂ ಕಿರಿಯ ನ್ಯಾಯಾಲಯದ 42 ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ. ಬ್ಯಾಂಕಿಗೆ ಪ್ರಕರಣ ಗಳಲ್ಲಿ ₹17,10,588 ರು. ವಸೂಲಾಗಿದೆ . ಲೋಕ್ ಅದಾಲತ್ ನಲ್ಲಿ ರಾಜಿ ಮಾಡಿಕೊಳ್ಳುವ ಕಕ್ಷಿದಾರರು ಹೆಚ್ಚಿನ ಮಾಹಿತಿಗೆ ತಾಲೂಕು ಕಾನೂನು ಸೇವೆಗಳ ಸಮಿತಿಯನ್ನು ಸಂಪರ್ಕಿಸಬಹುದು ಎಂದರು.ಈ ಸಂದರ್ಭದಲ್ಲಿ ನ್ಯಾಯಾಲಯದ ಎಲ್ಲಾ ವಕೀಲರು, ಸಿಬ್ಬಂದಿ, ವಿವಿಧ ಬ್ಯಾಂಕುಗಳ ವ್ಯವಸ್ಥಾಪಕರು ಹಾಗೂ ನ್ಯಾಯಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.