ಸಾರಾಂಶ
ದಕ್ಷಿಣ ಕನ್ನಡ ಜಿಲ್ಲಾ ಚಿನ್ನದ ಕೆಲಸಗಾರರ ಸಂಘ, ವಿಶ್ವಕರ್ಮ ಸಹಕಾರ ಬ್ಯಾಂಕ್ ಹಿತೈಷಿಗಳ ಬಳಗ ಮತ್ತು ಸಹಕಾರಿ ಮಿತ್ರರು ಕಾರ್ಯಕ್ರಮ ಹಮ್ಮಿಕೊಂಡಿದ್ದು ಡಿಸೆಂಬರ್ 1ರಂದು ಸಂಜೆ 5 ಗಂಟೆಗೆ ಕಾರ್‌ಸ್ಟ್ರೀಟ್ ಪಟ್ಟೆ ಲಿಂಗಪ್ಪಾಚಾರ್ಯ ಸಭಾಭವನದಲ್ಲಿ ಕಾರ್ಯಕ್ರಮ ನಡೆಯಲಿದೆ.
ಕನ್ನಡಪ್ರಭ ವಾರ್ತೆ ಮಂಗಳೂರು
ಕರ್ನಾಟಕ ರಾಜ್ಯ ಸರ್ಕಾರದ ಪ್ರತಿಷ್ಠಿತ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ, ವಿಶ್ವಕರ್ಮ ಸಹಕಾರ ಬ್ಯಾಂಕ್ ಅಧ್ಯಕ್ಷ ಡಾ.ಎಸ್ ಆರ್ ಹರೀಶ್ ಆಚಾರ್ಯ ಅವರಿಗೆ ಡಿಸೆಂಬರ್ 1ರಂದು ಅಭಿನಂದನಾ ಸಮಾರಂಭ ನಡೆಯಲಿದೆ.ದಕ್ಷಿಣ ಕನ್ನಡ ಜಿಲ್ಲಾ ಚಿನ್ನದ ಕೆಲಸಗಾರರ ಸಂಘ, ವಿಶ್ವಕರ್ಮ ಸಹಕಾರ ಬ್ಯಾಂಕ್ ಹಿತೈಷಿಗಳ ಬಳಗ ಮತ್ತು ಸಹಕಾರಿ ಮಿತ್ರರು ಕಾರ್ಯಕ್ರಮ ಹಮ್ಮಿಕೊಂಡಿದ್ದು ಡಿಸೆಂಬರ್ 1ರಂದು ಸಂಜೆ 5 ಗಂಟೆಗೆ ಕಾರ್‌ಸ್ಟ್ರೀಟ್ ಪಟ್ಟೆ ಲಿಂಗಪ್ಪಾಚಾರ್ಯ ಸಭಾಭವನದಲ್ಲಿ ಕಾರ್ಯಕ್ರಮ ನಡೆಯಲಿದೆ.
ಸಂಜೆ 5ರಿಂದ ವಿಶ್ವಾಸ್ ಕೃಷ್ಣ ಮತ್ತು ಬಳಗದವರಿಂದ ಪಿಟೀಲು ವಾದನ -ಸಂವಾದನ ಕಾರ್ಯಕ್ರಮ ನಡೆಯಲಿದೆ. ಬಳಿಕ ಸಭಾ ಕಾರ್ಯಕ್ರಮದಲ್ಲಿ ಪಡುಕುತ್ಯಾರು ಶ್ರೀಮದ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠಾಧೀಶ್ವರ ಶ್ರೀಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ ಅವರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ. ಸಹಕಾರಿ ಮಿತ್ರರು ಹಾಗೂ ಗಣ್ಯರು ಡಾ.ಎಸ್ ಆರ್ ಹರೀಶ್ ಆಚಾರ್ಯ ಅವರನ್ನು ಅಭಿನಂದಿಸಲಿದ್ದಾರೆ.ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರೂ ಆಗಿರುವ ಡಾ.ಹರೀಶ್ ಆಚಾರ್ಯ ಅವರಿಗೆ ನ.17ರಂದು ಸಹಕಾರ ರತ್ನ ಪುರಸ್ಕಾರ ಪ್ರದಾನ ಮಾಡಲಾಗಿತ್ತು.