ಕನ್ನಡಪ್ರಭ ವಾರ್ತೆ ಹಾರನಹಳ್ಳಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ವಿಜೃಂಭಣೆಯಿಂದ ನಡೆಯಿತು.ಈ ಸಮಾರಂಭದಲ್ಲಿ ಜಾನಪದ ಕಲೆ ಉಳಿಸಿ ಬೆಳೆಸುವಲ್ಲಿ ಮಹತ್ವದ ಕೊಡುಗೆ ನೀಡಿರುವ ಹಾರನಹಳ್ಳಿ ಗ್ರಾಮದ ಪ್ರಸಿದ್ಧ ತಮಟೆ ಜನಪದ ಕಲಾವಿದ ಶ್ರೀನಿವಾಸ್ ಅವರನ್ನು ತಾಲ್ಲೂಕು ಆಡಳಿತದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಸಂತೋಷ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು. ಜಾನಪದ ಕಲೆಗಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟ ಶ್ರೀನಿವಾಸ್ ಅವರ ಸಾಧನೆಗೆ ತಾಲೂಕು ಮಟ್ಟದಲ್ಇ ಸಂದ ಗೌರವ ಇದಾಗಿದ್ದು, ಹಾರನಹಳ್ಳಿ ಗ್ರಾಮಕ್ಕೆ ಹೆಮ್ಮೆ ತಂದಿದೆ.
ಹಾರನಹಳ್ಳಿ ತಮಟೆ ಕಲಾವಿದ ಶ್ರೀನಿವಾಸ್ಗೆ ಸನ್ಮಾನ
ಜಾನಪದ ಕಲೆ ಉಳಿಸಿ ಬೆಳೆಸುವಲ್ಲಿ ಮಹತ್ವದ ಕೊಡುಗೆ ನೀಡಿರುವ ಹಾರನಹಳ್ಳಿ ಗ್ರಾಮದ ಪ್ರಸಿದ್ಧ ತಮಟೆ ಜನಪದ ಕಲಾವಿದ ಶ್ರೀನಿವಾಸ್ ಅವರನ್ನು ತಾಲ್ಲೂಕು ಆಡಳಿತದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಸಂತೋಷ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು. ಜಾನಪದ ಕಲೆಗಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟ ಶ್ರೀನಿವಾಸ್ ಅವರ ಸಾಧನೆಗೆ ತಾಲೂಕು ಮಟ್ಟದಲ್ಇ ಸಂದ ಗೌರವ ಇದಾಗಿದ್ದು, ಹಾರನಹಳ್ಳಿ ಗ್ರಾಮಕ್ಕೆ ಹೆಮ್ಮೆ ತಂದಿದೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.