ಇಂದು ಪುತ್ತೂರಿನಲ್ಲಿ ಡಾ.ಎಲ್.ಎಚ್.ಮಂಜುನಾಥ್‌ಗೆ ಅಭಿನಂದನಾ ಕಾರ್ಯಕ್ರಮ

| Published : Jul 13 2024, 01:36 AM IST

ಇಂದು ಪುತ್ತೂರಿನಲ್ಲಿ ಡಾ.ಎಲ್.ಎಚ್.ಮಂಜುನಾಥ್‌ಗೆ ಅಭಿನಂದನಾ ಕಾರ್ಯಕ್ರಮ
Share this Article
  • FB
  • TW
  • Linkdin
  • Email

ಸಾರಾಂಶ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್. ಎಸ್. ಜನಜಾಗೃತಿ ವೇದಿಕೆ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್, ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕನ್ನಡಪ್ರಭವಾರ್ತೆ ಪುತ್ತೂರು

ಅಖಿಲ ಕರ್ನಾಟಕ ಜನಜಾಗೃತಿ ಜಿಲ್ಲಾ ವೇದಿಕೆ ಹಾಗೂ ಪುತ್ತೂರು ತಾಲೂಕು ಜನಜಾಗೃತಿ ವೇದಿಕೆ ಜಂಟಿ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಕಳೆದ 23 ವರ್ಷಗಳ ಕಾಲ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತರಾದ ಡಾ. ಎಲ್. ಎಚ್. ಮಂಜುನಾಥ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಜು. 13ರಂದು ಪುತ್ತೂರಿನ ಸಾಲ್ಮರ ಕೊಟೇಚಾ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದ. ಕ. ಜಿಲ್ಲಾ ಅಧ್ಯಕ್ಷ ಪದ್ಮನಾಭ ಶೆಟ್ಟಿ ತಿಳಿಸಿದ್ದಾರೆ.ಅವರು ಗುರುವಾರ ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ ವಹಿಸಲಿದ್ದು, ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಮೋಹನ್ ಆಳ್ವ ಅಭಿನಂದನಾ ಭಾಷಣ ಮಾಡಲಿದ್ದಾರೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿಯ ಸ್ಥಾಪಕ ಅಧ್ಯಕ್ಷ ವಸಂತ ಸಾಲಿಯಾನ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್. ಎಸ್. ಜನಜಾಗೃತಿ ವೇದಿಕೆ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್, ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮುಖ್ಯ ಸಂಚಾಲಕರಾಗಿ, ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಗ್ರಾಮಾಭಿವೃದ್ಧಿಯ ಕನಸುಗಳನ್ನು ಸಾಕಾರಗೊಳಿಸುವಲ್ಲಿ ಶ್ರಮಿಸಿರುವ ಎಲ್. ಎಚ್. ಮಂಜುನಾಥ್ ಅವರು, ಯಾವುದೇ ಸಾಮಾನ್ಯ ವ್ಯಕ್ತಿಗೆ ಸಿಗುವ, ಕಾರ್ಯಕರ್ತರನ್ನು ಪ್ರೀತಿಯಿಂದ ತಿದ್ದಿ ತೀಡಿ ದುಡಿಯುವ ಜಾಣ್ಮ, ಧೈರ್ಯ, ಪ್ರಾಮಾಣಿಕತೆ ನಮಗೆಲ್ಲರಿಗೂ ಆದರ್ಶವಾಗಿದೆ ಎಂದು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಯೋಜನೆಯ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್, ಜನಜಾಗೃತಿ ವೇದಿಕೆ ಪುತ್ತೂರು ತಾಲೂಕು ಅಧ್ಯಕ್ಷ ಲೋಕೇಶ್ ಹೆಗ್ಡೆ, ಕಡಬ ಅಧ್ಯಕ್ಷ ಮಹೇಶ್ ಸವಣೂರು, ತಾಲೂಕು ಯೋಜನಾಧಿಕಾರಿ ಶಶಿಧರ್, ವಲಯ ಅಧ್ಯಕ್ಷ ಸತೀಶ್ ನಾಯ್ಕ ಉಪಸ್ಥಿತರಿದ್ದರು.