ಡಿಸಿಸಿ ಬ್ಯಾಂಕ್‌ ನಿರ್ದೇಶಕ ಶಶಿಕುಮಾರ್ ರೈ, ಎಸ್.ಬಿ. ಜಯರಾಮ ರೈಗೆ ಸನ್ಮಾನ

| Published : Mar 28 2024, 12:48 AM IST

ಡಿಸಿಸಿ ಬ್ಯಾಂಕ್‌ ನಿರ್ದೇಶಕ ಶಶಿಕುಮಾರ್ ರೈ, ಎಸ್.ಬಿ. ಜಯರಾಮ ರೈಗೆ ಸನ್ಮಾನ
Share this Article
  • FB
  • TW
  • Linkdin
  • Email

ಸಾರಾಂಶ

ಶಶಿಕುಮಾರ್ ರೈ ಬಾಲ್ಯೊಟ್ಟು ಹಾಗೂ ಎಸ್.ಬಿ ಜಯರಾಮ ರೈ ಬಳೆಜ್ಜ ಅವರಿಗೆ ಆರ್ಯಾಪು ಸಹಕಾರಿ ಸಂಘದ ವತಿಯಿಂದ ಬುಧವಾರ ಸನ್ಮಾನಿಸಿ ಗೌರವಿಸಲಾಯಿತು.

ಪುತ್ತೂರು: ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಚುನಾವಣೆಯಲ್ಲಿ ಸತತ ೩ನೇ ಬಾರಿಗೆ ಅವಿರೋಧವಾಗಿ ನಿರ್ದೇಶಕರಾಗಿ ಆಯ್ಕೆಯಾದ ಶಶಿಕುಮಾರ್ ರೈ ಬಾಲ್ಯೊಟ್ಟು ಹಾಗೂ ಎಸ್.ಬಿ ಜಯರಾಮ ರೈ ಬಳೆಜ್ಜ ಅವರಿಗೆ ಆರ್ಯಾಪು ಸಹಕಾರಿ ಸಂಘದ ವತಿಯಿಂದ ಬುಧವಾರ ಸನ್ಮಾನಿಸಿ ಗೌರವಿಸಲಾಯಿತು.

ಸಹಕಾರಿ ಸಂಘದ ಕೇಂದ್ರ ಕಚೇರಿಯಲ್ಲಿ ನಡೆದ ಈ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆರ್ಯಾಪು ಸಹಕಾರಿ ಸಂಘದ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ವಹಿಸಿದ್ದರು. ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಅಭಿನಂದನಾ ಮಾತುಗಳನ್ನಾಡಿದರು. ಸನ್ಮಾನ ಸ್ವೀಕರಿಸಿದ ಶಶಿಕುಮಾರ್ ರೈ ಬಾಲ್ಯೊಟ್ಟು ಮತ್ತು ಎಸ್.ಬಿ. ಜಯರಾಮ ರೈ ಬಳೆಜ್ಜ ಕೃತಜ್ಞತೆ ಸಲ್ಲಿಸಿದರು. ಸಮಾರಂಭದಲ್ಲಿ ಸಹಕಾರಿ ಸಂಘದ ಉಪಾಧ್ಯಕ್ಷ ಸುರೇಂದ್ರ ರೈ ಬಳ್ಳಮಜಲು, ನಿರ್ದೇಶಕರಾದ ಸದಾನಂದ ಶೆಟ್ಟಿ ಕೂರೇಲು, ಗಣೇಶ್ ರೈ ತೊಟ್ಲ, ರಂಜಿತ್ ಬಂಗೇರಾ, ಗಣೇಶ್ ರೈ ಕುರಿಯ, ಇಸ್ಮಾಯಿಲ್ ಮಲಾರು, ಸಂಶುದ್ದೀನ್ ನೀರ್ಕಜೆ, ಶೀನಪ್ಪ ಮರಿಕೆ, ತಿಮ್ಮಪ್ಪ ನಾಯ್ಕ ಜಂಗಮುಗೇರು, ತೆರೆಸಾ ಸಿಕ್ವೇರಾ, ಸತೀಶ್ ನಾಯ್ಕ್‌ ಪರ್ಲಡ್ಕ, ಕೇಂದ್ರ ಸಹಕಾರಿ ಬ್ಯಾಂಕ್‌ನ ಮೇಲ್ವಿಚಾರಕ ಶರತ್ ಡಿ. ಆರ್ಯಾಪು ಗ್ರಾ.ಪಂ ಸದಸ್ಯ ಪವಿತ್ರ ರೈ, ಮತ್ತಿತರರು ಉಪಸ್ಥಿತರಿದ್ದರು. ಸಂಘದ ಸಿಬ್ಬಂದಿ ಉಮೇಶ್ ಎಸ್.ಕೆ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತಿ ಭಾಸ್ಕರ್‌ ವಂದಿಸಿದರು.