ಇಲ್ಲಿನ ಪಲಿಮಾರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳಿಗೆ ಮಂಗಳವಾರ ಹಮ್ಮಿಕೊಳ್ಳಲಾದ ಅಭಿನಂದನಾ ಸಮಾರಂಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಕಾಪು: ಇಲ್ಲಿನ ಪಲಿಮಾರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳಿಗೆ ಮಂಗಳವಾರ ಹಮ್ಮಿಕೊಳ್ಳಲಾದ ಅಭಿನಂದನಾ ಸಮಾರಂಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಈ ಸಂದರ್ಭ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸಿನ ಮೇರೆಗೆ 5 ಲಕ್ಷ ರು. ಅನುದಾನದಲ್ಲಿ ನಿರ್ಮಿಸಲಾದ ಇಂಟರ್ ಲಾಕ್ ಕಾಮಗಾರಿ ಹಾಗೂ ಶಾಲೆಯ ಮೂಲ ಸೌಕರ್ಯಗಳನ್ನು ಶಾಸಕರು ಉದ್ಘಾಟಿಸಿದರು.ಪಲಿಮಾರು ಗ್ರಾಪಂ ಮಾಜಿ ಅಧ್ಯಕ್ಷೆ ಸೌಮಲತಾ ಶೆಟ್ಟಿ, ಮಾಜಿ ಉಪಾಧ್ಯಕ್ಷ ರಾಯೇಶ್ ಪೈ, ಮಾಜಿ ಸದಸ್ಯರಾದ ಗಾಯತ್ರಿ ಪ್ರಭು, ಪ್ರವೀಣ್ ಪೂಜಾರಿ, ಸುಜಾತಾ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಸಾದ್ ಪಲಿಮಾರು, ಪ್ರಾಂಶುಪಾಲರಾದ ಗ್ರೇಟ್ಟಾ ಡಿಸೋಜ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಮಾಧವ ಸಾಲ್ಯಾನ್, ಹಳೆ ವಿದ್ಯಾರ್ಥಿ ದಾನಿಗಳಾದ ಪ್ರಭಾ ನಂಬಿಯಾರ್ ಹಾಗೂ ಉಪನ್ಯಾಸಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.