ಕನ್ನಡಪ್ರಭ ವಾರ್ತೆ ಹಿರಿಯೂರು
ತಾಲೂಕು ಕೃಷಿ ಪರಿಕರ ಮಾರಾಟಗಾರರಿಗೆ ಕೇಂದ್ರ ಸರ್ಕಾರದ ಎಫ್‌ಎಫ್‌ಎಸ್ ತಂತ್ರಾಂಶದ ಮೂಲಕ ರಸಗೊಬ್ಬರ ಮಾರಾಟ ಮಾಡುವ ಬಗ್ಗೆ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ತರಬೇತಿ ನೀಡಲಾಯಿತು.ತರಬೇತಿ ಕಾರ್ಯಕ್ರಮ ಉದ್ದೇಶಿಸಿ ಜಂಟಿ ಕೃಷಿ ನಿರ್ದೇಶಕರಾದ ಬಿ.ಮಂಜುನಾಥ್ ಮಾತನಾಡಿ, ಎಫ್‌ಎಫ್‌ಎಸ್ ತಂತ್ರಾಂಶದ ಮೂಲಕ ರಸಗೊಬ್ಬರ ಮಾರಾಟ ಮಾಡಬೇಕು. ರೈತರಿಂದ ಎಫ್‌ಐಡಿ ಪಡೆದು ರಸಗೊಬ್ಬರ ವಿತರಣೆ ಮಾಡಬೇಕು.
ರೈತರು ಹೊಂದಿರುವ ಜಮೀನಿನ ವಿಸ್ತೀರ್ಣಕ್ಕೆ ಮಾತ್ರ ರಸಗೊಬ್ಬರ ವಿತರಣೆ ಮಾಡಲು ಕ್ರಮ ವಹಿಸಬೇಕು. ಯೂರಿಯಾ ರಸಗೊಬ್ಬರವನ್ನು ಬೇರೆ ಬೇರೆ ಉದ್ದೇಶಗಳಿಗೆ ಮಾರಾಟ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.ಈ ವೇಳೆ ಉಪ ಕೃಷಿ ನಿರ್ದೇಶಕ ಉಮೇಶ್, ಕೃಷಿಕ ಸಮಾಜದ ಅಧ್ಯಕ್ಷ ಕಾಂತರಾಜು, ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿ ಕಂದಿಕೆರೆ ಜಗದೀಶ್, ಉಪಾಧ್ಯಕ್ಷ ಪಾತಲಿಂಗಣ್ಣ, ಕೃಷಿ ಪರಿಕರ ಮಾರಾಟಗಾರರ ಸಂಘದ ಅಧ್ಯಕ್ಷ ಹರ್ಷ, ಜಾಗೃತ ಕೋಶ ಸಹಾಯಕ ಕೃಷಿ ನಿರ್ದೇಶಕ ಮಲ್ಲನಗೌಡ, ತಾಲೂಕು ಸಹಾಯಕ ಕೃಷಿ ನಿರ್ದೇಶಕ ಅಶೋಕ್ ಮುಂತಾದವರು ಹಾಜರಿದ್ದರು.