ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಕೊಡಗರಹಳ್ಳಿಯ ಕುಂದೂರುಮೊಟ್ಟೆ ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ ಶ್ರೀ ಮಹಾವಿಷ್ಣು, ಶ್ರೀ ಚಾಮುಂಡೇಶ್ವರಿ, ರಕ್ತೇಶ್ವರಿ ಪರಿವಾರ ದೇವರ 48ನೇ ವಾರ್ಷಿಕ ಮಹೋತ್ಸವ 20ರಿಂದ ವಿವಿಧ ಪೂಜೆ ಮತ್ತು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿಧ್ಯುಕ್ತವಾಗಿ ನಡೆದು ಸಂಪನ್ನಗೊಂಡಿತು. 13ರಂದು ಸಂಜೆ ಶ್ರೀ ಮುನೀಶ್ವರ ಪೂಜೆಯೊಂದಿಗೆ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. 14 ರ ಮಂಗಳವಾರ ಮಹಾಚಂಡಿಕಾಯಾಗ ನಡೆದು ಅನ್ನ ಸಂತರ್ಪಣೆ ಕಾರ್ಯ ನಡೆಯಿತು. 17 ಶುಕ್ರವಾರ ಶ್ರೀ ಮಹಾ ವಿಷ್ಣುವಿನ ಪೂಜೆ ನಡೆಯಿತು. 20 ಸೋಮವಾರ ಪೂರ್ವಾಹ್ನ ಗಣಪತಿ ಹೋಮ ಮತ್ತು ಕೊಡಿ ಏರಿಸುವುದರೊಂದಿಗೆ ಪೂಜಾ ಕಾರ್ಯಕ್ರಮಗಳು ಚಾಲನೆ ದೊರೆಯಿತು. ಅನಂತರ ಸಂಜೆ 7 ಗಂಟೆಯಿಂದ ದೀಪರಾಧನೆ ಏಳು ಸುತ್ತಿನ ಪ್ರದಕ್ಷಿಣೆ ಹಾಗೂ ಶ್ರೀ ಚಾಮುಂಡಿ ತಂಡದಿಂದ ಚಂಡೆ ಮೇಳ ಜರುಗಿತು. ಮಂಗಳವಾರ ಶ್ರೀ ಚಾಮುಂಡೇಶ್ವರಿ ದೇವಿಯ ಅಭಿಷೇಕ ಪೂಜೆ ನಡೆಯಿತು. ಗ್ರಾಮದ ಮಂಗಳವಾರ ರಾತ್ರಿಯಿಂದ ವಿವಿಧ ದೈವಗಳ ಕೋಲ ನಡೆದು 22ರಂದು ಪೂರ್ವಾಹ್ನ ಅಜ್ಜಪ್ಪ ಕೋಲ, ವಿಷ್ಣುಮೂರ್ತಿ ಕೋಲ, ರಕ್ತೇಶ್ವರಿ ಹಾಗೂ ಚಾಮುಂಡೇಶ್ವರಿ ಕೋಲದೊಂದಿಗೆ ರಾತ್ರಿ 8 ಗಂಟೆಗೆ ಶ್ರೀದೇವಿ ನೈವೇದ್ಯದೊಂದಿಗೆ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ತೆರೆ ಬಿದ್ದಿತು.ಮಹಾವಿಷ್ಣು, ಚಾಮುಂಡೇಶ್ವರಿ, ರಕ್ತೇಶ್ವರಿ ದೇವರ ಮಹೋತ್ಸವ
ಕೊಡಗರಹಳ್ಳಿಯ ಕುಂದೂರುಮೊಟ್ಟೆ ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ ಶ್ರೀ ಮಹಾವಿಷ್ಣು, ಶ್ರೀ ಚಾಮುಂಡೇಶ್ವರಿ, ರಕ್ತೇಶ್ವರಿ ಪರಿವಾರ ದೇವರ 48ನೇ ವಾರ್ಷಿಕ ಮಹೋತ್ಸವ 20ರಿಂದ ವಿವಿಧ ಪೂಜೆ ಮತ್ತು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿಧ್ಯುಕ್ತವಾಗಿ ನಡೆದು ಸಂಪನ್ನಗೊಂಡಿತು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.