ಜನರು ಒಗ್ಗಟ್ಟಿನಿಂದ ಬಸವ ಜಯಂತಿಯನ್ನು ಆಚರಿಸುತ್ತಿರುವುದು ವಿಶೇಷ ಎಂದು ತಿಳಿಸಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಹಾಗೂ ರಾಷ್ಟ್ರೀಯ ಹೆದ್ದಾರಿ ಭಾಗದಲ್ಲಿ ಉತ್ಸವದ ಅಂಗವಾಗಿ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತಿದ್ದು, ಬಸವಣ್ಣನವರ ಭಾವಚಿತ್ರದ ಮೆರವಣಿಗೆಗೆ ಭಾರೀ ಸಿದ್ಧತೆ ನಡೆಯುತ್ತಿದೆ. ಈ ಉತ್ಸವದಲ್ಲಿ ನಂದಿಧ್ವಜ, ವೀರಗಾಸೆ, ಲಿಂಗವೀರರು, ಡೊಳ್ಳು ಕುಣಿತ ಹಾಗೂ ಮಹಿಳಾ ವೀರಗಾಸೆ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಭಾಗವಹಿಸಿ ವೈವಿಧ್ಯಮಯ ಕಲಾ ಪ್ರದರ್ಶನ ನೀಡಲಿವೆ ಎಂದು ವಿವರಿಸಿದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ನಗರದಲ್ಲಿ ಜಗಜ್ಯೋತಿ ಬಸವೇಶ್ವರರ 892ನೇ ಜಯಂತ್ಯುತ್ಸವವನ್ನು ವಿಶಿಷ್ಟ ಹಾಗೂ ವೈಭವದಿಂದ ಆಚರಿಸಲು ಬಸವ ಜಯಂತಿ ಉತ್ಸವ ಸಮಿತಿ ವ್ಯಾಪಕ ಸಿದ್ಧತೆಗಳನ್ನು ಕೈಗೊಂಡಿದ್ದು, ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಮುಖಂಡ ವಕೀಲ ಕೆಂಪುಸಾಗರ ಶಿವರಾಜ್, ಬಸವಣ್ಣನವರು ಸಮಾನತೆ, ಮಾನವೀಯತೆ ಮತ್ತು ಧಾರ್ಮಿಕ ಸಹಿಷ್ಣುತೆಯ ಸಂದೇಶ ಸಾರಿದ ಮಹಾನ್ ದಾರ್ಶನಿಕರು. ಅವರು ಯಾವುದೇ ಜಾತಿ, ಮತ ಅಥವಾ ಧರ್ಮಕ್ಕೆ ಸೀಮಿತ ವ್ಯಕ್ತಿಯಲ್ಲ ಎಂದು ಹೇಳಿದರು. ಇದೇ ಕಾರಣದಿಂದ ಎಲ್ಲ ವರ್ಗದ ಜನರು ಒಗ್ಗಟ್ಟಿನಿಂದ ಬಸವ ಜಯಂತಿಯನ್ನು ಆಚರಿಸುತ್ತಿರುವುದು ವಿಶೇಷ ಎಂದು ತಿಳಿಸಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಹಾಗೂ ರಾಷ್ಟ್ರೀಯ ಹೆದ್ದಾರಿ ಭಾಗದಲ್ಲಿ ಉತ್ಸವದ ಅಂಗವಾಗಿ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತಿದ್ದು, ಬಸವಣ್ಣನವರ ಭಾವಚಿತ್ರದ ಮೆರವಣಿಗೆಗೆ ಭಾರೀ ಸಿದ್ಧತೆ ನಡೆಯುತ್ತಿದೆ. ಈ ಉತ್ಸವದಲ್ಲಿ ನಂದಿಧ್ವಜ, ವೀರಗಾಸೆ, ಲಿಂಗವೀರರು, ಡೊಳ್ಳು ಕುಣಿತ ಹಾಗೂ ಮಹಿಳಾ ವೀರಗಾಸೆ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಭಾಗವಹಿಸಿ ವೈವಿಧ್ಯಮಯ ಕಲಾ ಪ್ರದರ್ಶನ ನೀಡಲಿವೆ ಎಂದು ವಿವರಿಸಿದರು.ಏ.20 ರಂದು ಮುಂಜಾನೆ ಶಾನುಭೋಗರ ಬೀದಿಯಲ್ಲಿರುವ ಬಸವಣ್ಣನ ಮೂಲ ವಿಗ್ರಹಕ್ಕೆ ರುದ್ರಾಭಿಷೇಕ, ವಿವಿಧ ಪೂಜೆಗಳು ಹಾಗೂ ಮಹಾಮಂಗಳಾರತಿ ನೆರವೇರಿಸಲಾಗುತ್ತದೆ. ಬಳಿಕ ಭಕ್ತಾದಿಗಳಿಗೆ ಪಾನಕ ಮತ್ತು ಫಲಹಾರ ವಿತರಣೆ ಮಾಡಲಾಗುವುದು. ಸಂಜೆ ಬಸವೇಶ್ವರರ ಭಾವಚಿತ್ರವನ್ನು ಅಲಂಕರಿಸಿದ ಮಂಟಪದಲ್ಲಿ ಪ್ರತಿಷ್ಠಾಪಿಸಿ ಉತ್ಸವ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ. ಬಸವ ತತ್ವ ಅನುಯಾಯಿಗಳು, ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ರಾಜಕೀಯ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಮಿತಿ ಮನವಿ ಮಾಡಿದೆ.ಸುದ್ದಿಗೋಷ್ಠಿಯಲ್ಲಿ ಸಮಿತಿಯ ಪದಾಧಿಕಾರಿಗಳಾದ ದರ್ಶನ್, ಸಿದ್ದರಾಮೇಶ್, ನಿಶ್ಚಯ್, ಅಭಿಷೇಕ್, ಜಿತೇಂದ್ರ, ಸಿದ್ದೇಶ್, ಶ್ರಿಯಾಂಕ್, ನಿಖೀಲ್‌ ಸೇರಿದಂತೆ ಇತರರು ಉಪಸ್ಥಿತರಿದ್ದರು.