ಗೊರವನಹಳ್ಳಿಯಲ್ಲಿ ಸಂಭ್ರಮದ ರಥೋತ್ಸವ

| Published : Nov 15 2025, 01:15 AM IST

ಗೊರವನಹಳ್ಳಿಯಲ್ಲಿ ಸಂಭ್ರಮದ ರಥೋತ್ಸವ
Share this Article
  • FB
  • TW
  • Linkdin
  • Email

ಸಾರಾಂಶ

ಕಲ್ಪತರು ನಾಡಿನ ಹೆಸರಾಂತ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಗೊರವನಹಳ್ಳಿ ಶ್ರಿ ಮಹಾಲಕ್ಷ್ಮೀ ದೇವಾಲಯದಲ್ಲಿ ಕಾರ್ತಿಕ ಮಾಸದ ಕೊನೆ ಶುಕ್ರವಾರ ನಡೆದ ಬ್ರಹ್ಮ ರಥೋತ್ಸವ

ಕನ್ನಡಪ್ರಭ ವಾರ್ತೆ ಕೊರಟಗೆರೆ

ಕಲ್ಪತರು ನಾಡಿನ ಹೆಸರಾಂತ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಗೊರವನಹಳ್ಳಿ ಶ್ರಿ ಮಹಾಲಕ್ಷ್ಮೀ ದೇವಾಲಯದಲ್ಲಿ ಕಾರ್ತಿಕ ಮಾಸದ ಕೊನೆ ಶುಕ್ರವಾರ ನಡೆದ ಬ್ರಹ್ಮ ರಥೋತ್ಸವಕ್ಕೆ ಏಲೆರಾಂಪುರ ನರಸಿಂಹಗಿರಿಯ ಕುಂಚಿಟಿಗರ ಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ಶ್ರೀಹನುಮಂತನಾಥ ಸ್ವಾಮೀಜಿ ಸಾವಿರಾರು ಮಂದಿ ಭಕ್ತಾದಿಗಳ ಸಮ್ಮುಖದಲ್ಲಿ ಚಾಲನೆ ನೀಡಿದರು.

ತಾಲೂಕಿನ ತೀತಾ ಗ್ರಾಪಂ ವ್ಯಾಪ್ತಿಯ ಗೊರವನಹಳ್ಳಿ ಮಹಾಲಕ್ಷ್ಮೀ ಚಾರಿಟಬಲ್ ಟ್ರಸ್ಟ್‌ ವತಿಯಿಂದ ಕಾರ್ತಿಕ ಮಾಸದ ಶುಕ್ರವಾರ ಬ್ರಹ್ಮರಥೋತ್ಸವಕ್ಕೂ ಮುನ್ನ ಶ್ರೀ ಗಣಪತಿ ಹೋಮ, ನವಗ್ರಹ ಹೋಮ, ಶ್ರೀ ಮಹಾಲಕ್ಷ್ಮಿ ಹೋಮ, ಗ್ರಾಮ ದೇವತೆ ದುರ್ಗಾ ಹೋಮ ಸೇರಿದಂತೆ ಕ್ಷೇತ್ರ ದೇವತೆ ಶ್ರೀಮಹಾಲಕ್ಷ್ಮೀಗೆ ವಿಶೇಷ ಪೂಜೆಸಲ್ಲಿಸಲಾಯಿತು. ನಂತರ ಮಾತನಾಡಿದ ಶ್ರೀಗಳು ಶ್ರೀ ಮಹಾಲಕ್ಷ್ಮಿ ದೇವಾಲಯದಲ್ಲಿ ಪ್ರತಿ ವರ್ಷ ನಡೆಯುತ್ತಿರುವ ಧಾರ್ಮಿಕ ಕಾರ್ಯಕ್ರಮಗಳಿಂದ ಸಮಸ್ತ ಜನತೆಗೆ ಶ್ರೀ ಮಹಾಲಕ್ಷ್ಮಿದೇವಿ ಸಕಲ ಐಶ್ವರ್ಯ, ಆರೋಗ್ಯ ಕೊಟ್ಟು ಕಾಪಾಡಲಿ, ರಾಜ್ಯದಲ್ಲಿ ಉತ್ತಮ ಮಳೆ ಬೆಳೆಯಾಗಿ ರೈತರು ಸಮೃದ್ಧಿಯಾಗಲಿ, ಈ ಧಾರ್ಮಿಕ ಕಾರ್ಯಕ್ರಮದಿಂದಾಗಿ ಜನರಲ್ಲಿ ನಿರ್ಮಲ ಭಾವ ಬೆಳೆದು ಸಹೋದರತ್ವ ಹಾಗೂ ಭಾತೃತ್ವದ ಬೆಳೆಯಲ್ಲಿ ಎಂದರು.

ಶ್ರೀ ಮಹಾಲಕ್ಷ್ಮಿ ದೇವಾಲಯದ ಚಾರಿಟಬಲ್ ಟ್ರಸ್ಟ್‌ನ ಅಧ್ಯಕ್ಷ ಬಿ.ಜಿ.ವಾಸುದೇವ ಮಾತನಾಡಿ, ಪ್ರತಿ ವರ್ಷದಂತೆ ಈ ಬಾರಿಯು ೩೮ನೇ ವರ್ಷದ ಕಾರ್ತಿಕ ಮಾಸದ ಕಡೇ ಶುಕ್ರವಾರ ವಿಜೃಂಭಣೆಯಿಂದ ಸಾವಿರಾರು ಭಕ್ತರ ಸಮುಖದಲ್ಲಿ ಬ್ರಹ್ಮರಥೋತ್ಸವ ನಡೆದವು. ಭಕ್ತರಿಗೆ ಬೆಳಿಗ್ಗೆಯಿಂದ ರಾತ್ರಿ ೧೧ ಗಂಟೆಯವೆರಗೂ ದೇವಿಯ ದರ್ಶನದೊಂದಿಗೆ ಪ್ರಸಾದ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದರು.ಸಂಜೆ ನಡೆದ ದೀಪೋತ್ಸವ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀ ವೀರಭದ್ರಶಿವಾಚಾರ್ಯ ಸ್ವಾಮೀಜಿಗಳು ಹಾಗೂ ಏಲೆರಾಂಪುರ ನರಸಿಂಹಗಿರಿಯ ಕುಂಚಿಟಿಗರ , ಮಠದ ಪೀಠಾಧ್ಯಕ್ಷ ಡಾ.ಶ್ರೀ ಹನುಮಂತನಾಥಸ್ವಾಮೀಜಿ, ಟ್ರಸ್ಟ್ ಕಾರ್ಯದರ್ಶಿ ಆರ್,ಮುರಳಿಕೃಷ್ಣ, ಖಜಾಂಚಿ ಆರ್.ಜಗದೀಶ್, ಧರ್ಮದರ್ಶಿಗಳಾದ ಡಾ.ಟಿ.ಎಸ್.ಲಕ್ಷ್ಮೀಕಾಂತ. ಟಿ.ಆರ್.ನಟರಾಜು, ಎಸ್.ಶ್ರೀಪ್ರಸಾದ್ ರವಿರಾಜೇಅರಸ್, ಮಂಜುನಾಥ್, ಓಂಕಾರೇಶ್, ಚಿಕ್ಕನರಸಯ್ಯ, ವಿ.ಬಾಲಕೃಷ್ಣ, ಲಕ್ಷ್ಮಿನರಸಯ್ಯ, ಎನ್.ಜಿ.ನಾಗರಾಜು, ಚಿಕ್ಕನರಸಯ್ಯ, ನರಸರಾಜು, ಅರ್ಚಕರಾದ ಸುಬ್ರಹ್ಮಣ್ಯ, ಗಿರೀಶ್ ರಾವ್, ದೇವಾಲಯದ ವಿಶೇಷ ಅಧಿಕಾರಿ ಕೇಶವಮೂರ್ತಿ, ಲಕ್ಷ್ಮಣ್, ಕಾರ್ಯನಿರ್ವಹಣಾಧಿಕಾರಿ ರಂಗಸ್ವಾಮಿ ಮಂಜುನಾಥ್, ಶ್ರೀಲಕ್ಷ್ಮಿಪ್ರಸಾದ್, ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.