ಗ್ರಾಮೀಣ ಪ್ರದೇಶದ ಮಕ್ಕಳಲ್ಲಿಯೂ ಸಾಕಷ್ಟು ಪ್ರತಿಭೆ ಅಡಗಿದ್ದು, ಅದನ್ನು ಗುರುತಿಸಿ ಸೂಕ್ತ ಪ್ರೋತ್ಸಾಹ ನೀಡುವ ಜವಾಬ್ದಾರಿ ಶಿಕ್ಷಕರು ಹಾಗೂ ನಿರ್ಣಾಯಕರ ಮೇಲಿದೆ. ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ತಾಲೂಕು, ಜಿಲ್ಲೆ ಹಾಗೂ ರಾಜ್ಯಮಟ್ಟದ ಸ್ಪರ್ಧೆಗಳಿಗೆ ಕೊಂಡೊಯ್ಯಲು ಎಲ್ಲರೂ ಶ್ರಮಿಸಬೇಕು ಎಂದು ಮಸ್ಕಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಆರ್.ಸಿದ್ದನಗೌಡ ತುರ್ವಿಹಾಳ ಹೇಳಿದರು.
ಕನ್ನಡಪ್ರಭ ವಾರ್ತೆ ಮಸ್ಕಿ
ಗ್ರಾಮೀಣ ಪ್ರದೇಶದ ಮಕ್ಕಳಲ್ಲಿಯೂ ಸಾಕಷ್ಟು ಪ್ರತಿಭೆ ಅಡಗಿದ್ದು, ಅದನ್ನು ಗುರುತಿಸಿ ಸೂಕ್ತ ಪ್ರೋತ್ಸಾಹ ನೀಡುವ ಜವಾಬ್ದಾರಿ ಶಿಕ್ಷಕರು ಹಾಗೂ ನಿರ್ಣಾಯಕರ ಮೇಲಿದೆ. ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ತಾಲೂಕು, ಜಿಲ್ಲೆ ಹಾಗೂ ರಾಜ್ಯಮಟ್ಟದ ಸ್ಪರ್ಧೆಗಳಿಗೆ ಕೊಂಡೊಯ್ಯಲು ಎಲ್ಲರೂ ಶ್ರಮಿಸಬೇಕು ಎಂದು ಮಸ್ಕಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಆರ್.ಸಿದ್ದನಗೌಡ ತುರ್ವಿಹಾಳ ಹೇಳಿದರು.ಸಮೀಪದ ಶಾಂತಿನಗರ ಹಂಪನಾಳದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಸಮೂಹ ಸಂಪನ್ಮೂಲ ಕೇಂದ್ರ ಬಪ್ಪೂರ ವ್ಯಾಪ್ತಿಯಿಂದ ಆಯೋಜಿ ಸಿದ್ದ ಬಸೂರು ವಲಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ - 2026-27 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಭಾ ಕಾರಂಜಿ ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸಲು ಉತ್ತಮ ವೇದಿಕೆಯಾಗಿದೆ. ಪ್ರತಿಯೊಬ್ಬ ಮಗುವಿನಲ್ಲಿಯೂ ಒಂದಲ್ಲ ಒಂದು ವಿಶೇಷ ಕೌಶಲ್ಯವಿರುತ್ತದೆ. ಅದನ್ನು ಗುರುತಿಸಿ ಬೆಳೆಸುವ ಕೆಲಸವಾಗಬೇಕು. ಸ್ಪರ್ಧೆಗಳಲ್ಲಿ ಭಾಗವಹಿಸುವ ಎಲ್ಲ ಮಕ್ಕಳಿಗೂ ಸಮಾನ ಅವಕಾಶ ಕಲ್ಪಿಸಿ, ಅವರಲ್ಲಿ ರುವ ಪ್ರತಿಭೆಯನ್ನು ಗುರುತಿಸುವ ನಿಟ್ಟಿನಲ್ಲಿ ನಿರ್ಣಾಯಕರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಬಹುಮಾನ ಪಡೆಯುವುದಷ್ಟೇ ಮುಖ್ಯವಲ್ಲ, ಸ್ಪರ್ಧೆ ಯಲ್ಲಿ ಭಾಗವಹಿಸುವುದರಿಂದ ಮಕ್ಕಳಲ್ಲಿ ಆತ್ಮವಿಶ್ವಾಸ, ಸೃಜನಶೀಲತೆ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಯುತ್ತದೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಂತಿನಗರ ಹಂಪನಾಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷೆ ಸುಜಾತ ವಹಿಸಿದ್ದರು. ಬಪ್ಪೂರ ಸಮೂಹ ಸಂಪನ್ಮೂಲ ವ್ಯಕ್ತಿ (ಸಿಆರ್ಪಿ) ಜಗದೀಶ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಹಂಪನಾಳ ಸರ್ಕಾರಿ ಪ್ರೌಢಶಾಲೆಯ ಮುಖ್ಯಗುರು ಬಸಪ್ಪ, ಗಜಾನನ, ಶಾಂತಿನಗರ ಶಾಲೆಯ ಮುಖ್ಯಗುರು ದಾಕ್ಷಾಯಿಣಿ, ಬಪ್ಪೂರ ಗ್ರಾಪಂ ಮಾಜಿ ಅಧ್ಯಕ್ಷೆ ರೇಣುಕಾ ನಾಗರಾಜ, ತಾಪಂ ಮಾಜಿ ಅಧ್ಯಕ್ಷ ಮೌಲಪ್ಪ ಕಮಗಲ್, ಹಂಪನಾಳ ಪ್ರೌಢಶಾಲೆ ಎಸ್ಡಿಎಂಸಿ ಅಧ್ಯಕ್ಷ ಬಸವರಾಜ ಚಿರತ್ನಾಳ, ಹಿರಿಯ ಪ್ರಾಥಮಿಕ ಶಾಲೆ ಎಸ್ಡಿಎಂಸಿ ಅಧ್ಯಕ್ಷೆ ಮೌಲಮ್ಮ, ಮಸ್ಕಿ ತಾಲೂಕು ಎಂ.ಪಿ.ಎಸ್. ನೌಕರರ ಸಂಘದ ಅಧ್ಯಕ್ಷ ಮಹೇಶ್, ಸರ್ಕಾರಿ ನೌಕರರ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಸರಸ್ವತಿ, ಸಿಂಧನೂರು ಘಟಕದ ನಂಜಲದಿನ್ನಿ ಶಾಲೆಯ ಮುಖ್ಯಗುರು ಆನಂದ, ಅಮರೇಶ್ ಕಕ್ಕಲದೊಡ್ಡಿ, ಪಂಪನಗೌಡ ಪರಡ್ಡಿ, ಸಂಗನ ಗೌಡ, ಬಸವರಾಜ ಕುರಲಿ, ಹುಲಗಪ್ಪ, ಛಾಯಾಗ್ರಾಹಕ ಯಂಕಣ್ಣ, ಬಪ್ಪೂರದ ಶಿಕ್ಷಕ ಶಿವಕುಮಾರ್ ಮಗ್ಗೆ, ಮಾಟೂರಿನ ಮುಖ್ಯಗುರು ನಾಗರೆಡ್ಡಿ ಸೇರಿದಂತೆ ವಿವಿಧ ಕ್ಲಸ್ಟರ್ಗಳ ನಿರ್ಣಾಯಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿವಿಧ ಶಾಲೆಗಳ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿಯ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಿದರು.