ರಾಮನಗರ: ಜಿಲ್ಲಾಸ್ಪತ್ರೆಯಲ್ಲಿ ಭ್ರೂಣ ಲಿಂಗ ಪತ್ತೆ - ಹತ್ಯೆ

| N/A | Published : Aug 27 2025, 01:00 AM IST / Updated: Aug 27 2025, 05:18 AM IST

fetus
ರಾಮನಗರ: ಜಿಲ್ಲಾಸ್ಪತ್ರೆಯಲ್ಲಿ ಭ್ರೂಣ ಲಿಂಗ ಪತ್ತೆ - ಹತ್ಯೆ
Share this Article
  • FB
  • TW
  • Linkdin
  • Email

ಸಾರಾಂಶ

 ಭ್ರೂಣ ಲಿಂಗ ಪತ್ತೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿನ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್ ಅನ್ನು ಸೀಜ್ ಮಾಡಲಾಗಿದೆ.

ರಾಮನಗರ: ಭ್ರೂಣ ಲಿಂಗ ಪತ್ತೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿನ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್ ಅನ್ನು ಸೀಜ್ ಮಾಡಲಾಗಿದೆ.

ಬೆಂಗಳೂರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆ ಉಪನಿರ್ದೇಶಕ ಡಾ.ವಿವೇಕ್ ದೊರೈ ಅವರು ಸ್ಕ್ಯಾನಿಂಗ್ ಕೇಂದ್ರವನ್ನು ಸೋಮವಾರ ಸಂಜೆ ಸೀಜ್ ಮಾಡಿದ್ದಾರೆ. ಈ ಘಟನೆಯಿಂದಾಗಿ ಭ್ರೂಣ ಪತ್ತೆ ಹಾಗೂ ಹತ್ಯೆ ಜಾಲ ರಾಮನಗರದಲ್ಲಿಯೂ ಸಕ್ರಿಯವಾಗಿರುವ ಅನುಮಾನಗಳು ದಟ್ಟವಾಗಿದೆ.

ಬೆಂಗಳೂರು ತಾತಗುಣಿ ಮೂಲದ ಪೋಷಕರಿಗೆ ಎರಡು ಹೆಣ್ಣು ಮಕ್ಕಳಿದ್ದು, ಮೂರನೇಯದು ಹೆಣ್ಣಾಗುತ್ತಿದೆ. ಆ ಮಗು ನಮಗೆ ಬೇಡ ಎಂದು ಪೋಷಕರು ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಮಾಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಆಶಾ ಕಾರ್ಯಕರ್ತೆಯರ ಸಹಾಯದಿಂದ ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ನೆರವಿನೊಂದಿಗೆ ಅಲ್ಟ್ರಾಸೌಂಡ್ ಸ್ಕ್ಯಾನ್ ಮೂಲಕ ಭ್ರೂಣ ಲಿಂಗ ಪತ್ತೆ ಮಾಡಲಾಗಿದೆ. ಆನಂತರ ನಿರ್ಜನ ಪ್ರದೇಶದ ಮನೆಯೊಂದರಲ್ಲಿ ಚಿಕತ್ಸೆ ನೀಡಲಾಗಿದೆ.

ಭ್ರೂಣ ಲಿಂಗ ಹತ್ಯೆ ಚಿಕಿತ್ಸೆ ವೇಳೆ ಮಹಿಳೆಗೆ ತೀವ್ರ ರಕ್ತಸ್ರಾವವಾಗಿದೆ. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಭ್ರೂಣ ಲಿಂಗ ಹತ್ಯೆಯಾಗಿರುವ ಮಾಹಿತಿ ಬಹಿರಂಗೊಂಡಿದೆ. ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನ್ ಮಾಡಲಾಗಿದೆಯೇ ಎಂಬ ಶಂಕೆಯ ಮೇರೆಗೆ ಪರಿಶೀಲಿಸಿ ಸ್ಕ್ಯಾನಿಂಗ್ ಸೆಂಟರ್ ಅನ್ನು ಸೀಜ್ ಮಾಡಲಾಗಿದೆ.

ಜಿಲ್ಲಾಸ್ಪತ್ರೆಯ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಕೇಂದ್ರದಲ್ಲಿ ಭ್ರೂಣ ಲಿಂಗ ಪತ್ತೆ ಮಾಡಲಾಗಿದೆ ಎಂದು ಅನುಮಾನದ ಮೇರೆಗೆ ಸ್ಕ್ಯಾನಿಂಗ್ ಮಿಷಿನ್ ನಲ್ಲಿನ ದಾಖಲೆಗಳು ನಾಶವಾಗುವುದನ್ನು ತಡೆಯಲು ಸೀಜ್ ಮಾಡಲಾಗಿದೆ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಮಂಜುನಾಥ್ ಕನ್ನಡಪ್ರಭಕ್ಕೆ ಪ್ರತಿಕ್ರಿಯೆ ನೀಡಿದರು.

ಕೋಟ್ ..................

ಬೆಂಗಳೂರು ವಾಣಿ ವಿಲಾಸ್ ಆಸ್ಪತ್ರೆಯಲ್ಲಿ ಭ್ರೂಣ ಲಿಂಗ ಹತ್ಯೆ ಪ್ರಕರಣದ ತನಿಖೆಯಲ್ಲಿ ರಾಮನಗರದ ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನ್ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ದಾಖಲೆಗಳು ನಾಶವಾಗದಿರಲಿ ಎಂದು ಅಲ್ಟ್ರಾ ಸೌಂಡ್ ಸ್ಕ್ಯಾನಿಂಗ್ ಮೆಷಿನ್ ಅನ್ನು ಸೀಜ್ ಮಾಡಲಾಗಿದೆ. ತನಿಖೆ ಮುಂದುವರಿಯುತ್ತಿದೆ. ಆರೋಪ ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

-ಡಾ.ನಿರಂಜನ್, ಜಿಲ್ಲಾ ಆರೋಗ್ಯಾಧಿಕಾರಿ, ಬೆಂಗಳೂರು ದಕ್ಷಿಣ ಜಿಲ್ಲೆ

Read more Articles on