ಭ್ರೂಣ ಲಿಂಗ ಪತ್ತೆ: ಆಸ್ಪತ್ರೆ ವಿರುದ್ಧ ಕೇಸ್‌ ದಾಖಲಿಸಿ

| Published : May 16 2024, 12:45 AM IST

ಭ್ರೂಣ ಲಿಂಗ ಪತ್ತೆ: ಆಸ್ಪತ್ರೆ ವಿರುದ್ಧ ಕೇಸ್‌ ದಾಖಲಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಭ್ರೂಣ ಹತ್ಯೆ ಅಂತಹ ಪ್ರಕರಣಗಳು ಪತ್ತೆ ಹಚ್ಚುವಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ತಡ ಮಾಡುತ್ತಿದ್ದು, ನಾಗರೀಕ ಸಮಾಜ ತಲೇ ತಗ್ಗಿಸುವಂಥಾಗಿದೆ. ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಪಡೆಯಲಿ

ಕನ್ನಡಪ್ರಭ ವಾರ್ತೆ ಮಾಲೂರು

ಭ್ರೂಣ ಹತ್ಯೆ ಘಟನೆಗೆ ಸಂಬಂಧಿಸಿದಂತೆ ಇಲ್ಲಿನ ಸಂಜನಾ ಖಾಸಗಿ ಆಸ್ಪತ್ರೆಯ ವಿರುದ್ಧ ಆರೋಗ್ಯ ಇಲಾಖೆಯ ಅಧಿಕಾರಿಗಳು ಪ್ರಕರಣ ದಾಖಲಿಸುವಂತೆ ರಾಜ್ಯ ಮಕ್ಕಳ ಮತ್ತು ಮಾನವ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಹೇಳಿದರು.

ಪಟ್ಟಣದ ಸಂಜನಾ ಖಾಸಗಿ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ನಡೆದಿರುವ ಬಗ್ಗೆ ದೂರುದಾರರು ದೂರು ನೀಡಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿ ಸ್ಕ್ಯಾನಿಂಗ್ ಸೆಂಟರ್ ಪರಿಶಿಲಿಸಿ ಮಾತನಾಡಿದ ಅ‍ವರು, ಕೋಲಾರ ಜಿಲ್ಲೆಯಲ್ಲಿ ಭ್ರೂಣ ಹತ್ಯೆಯಂತಹ ಪ್ರಕರಣಗಳು ಮರುಕಳಿಸುತ್ತಿದ್ದರೂ ಜಿಲ್ಲಾ ಆರೋಗ್ಯ ಅಧಿಕಾರಿಗಳು ಏಕೆ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಆರೋಗ್ಯ ಇಲಾಖೆ ವೈಫಲ್ಯ

ಭ್ರೂಣ ಹತ್ಯೆ ಅಂತಹ ಪ್ರಕರಣಗಳು ಪತ್ತೆ ಹಚ್ಚುವಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ತಡ ಮಾಡುತ್ತಿದ್ದು, ನಾಗರೀಕ ಸಮಾಜ ತಲೇ ತಗ್ಗಿಸುವಂಥಾಗಿದೆ. ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಪಡೆಯಬೇಕು ಎಂದು ಸೂಚಿಸಿದ ಅವರು ಮೇ ೯ರಂದು ಇಲ್ಲಿನ ಸಂಜನಾ ಖಾಸಗಿ ಆಸ್ಪತ್ರೆಯಲ್ಲಿ ನಡೆದ ಭ್ರೂಣ ಹತ್ಯೆ ಪ್ರಕರಣದ ಬಗ್ಗೆ ದೂರು ಬಂದಿದೆ. ಭ್ರೂಣ ಹತ್ಯೆ ಪ್ರಕರಣ ಶಿಕ್ಷಾರ್ಹ ಅಪರಾಧವಾಗಿದೆ. ವೈದ್ಯಾಧಿಕಾರಿಗಳು ಹೆಣ್ಣು ಗಂಡು ಭೇದ ಭಾವ ಮಾಡುತ್ತಿರುವುದರಿಂದ ಭ್ರೂಣ ಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ ಎಂದರು.ಭ್ರೂಣ ಹತ್ಯೆ ತಡೆಗಟ್ಟುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಫಲಾನುಭವಿಗಳಿಗೆ ವೈದ್ಯರು ಹೇಗೆ ಮಾಹಿತಿ ನೀಡುತ್ತಾರೆ ಎಂಬುದನ್ನು ಆರೋಗ್ಯ ಆಯೋಗದ ಅಧಿಕಾರಿಗಳ ಬಳಿ ಚರ್ಚಿಸಿ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು. ಭ್ರೂಣ ಹತ್ಯೆ ನಿಯಂತ್ರಣ ಜಿಲ್ಲಾ ಆರೋಗ್ಯ ಅಧಿಕಾರಿಗಳು ತಾಲೂಕು ಮಟ್ಟದಲ್ಲಿ ಆರೋಗ್ಯ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಾಗಿದ್ದು, ಜನ ಜಾಗೃತರಾಗಿ ವೈದ್ಯರು ಜಾಗೃತರಾಗಬೇಕು ಎಂದರು.

ಅಧಿಕಾರಿಗಳು ಎಚ್ಚರ ವಹಿಸಲಿ

ಇಂತಹ ವಿಷಯಗಳಲ್ಲಿ ಆರೋಗ್ಯ ಇಲಾಖೆ ಮತ್ತು ಸಾರ್ವಜನಿಕರು ಎಚ್ಚೆತ್ತು ಕೊಳ್ಳಬೇಕು, ಮುಂದಿನ ಭವಿಷ್ಯವನ್ನು ಕೊಲೆ ಮಾಡುವ ಕೆಲಸ ನಡೆಯುತ್ತಿದೆ ಆಯೋಗವು ಇದನ್ನು ಗಂಭೀರವಾಗಿ ಪರಿಗಣಿಸಿ ಆರೋಗ್ಯ ಇಲಾಖೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ ಎಂದರು.ಇಲ್ಲಿನ ಸಂಜನಾ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಯ ಮೇಲೆ ಪಿಸಿಪಿಎನ್‌ಡಿಟಿ ಕೆಪಿಎಂಇ ಕಾಯ್ದೆ ಪ್ರಕಾರ ಆರೋಗ್ಯ ಇಲಾಖೆಯ ಅಧಿಕಾರಿಗಳು ಪ್ರಕರಣ ದಾಖಲಿಸಲು ಸೂಚಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಮತ್ತು ಮಾನವ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸುಂಬೇ, ಡಾ.ತಿಪ್ಪೇಸ್ವಾಮಿ, ಜಿಲ್ಲಾ ಆರೋಗ್ಯ ಅಧಿಕಾರಿ ಜಗದೀಶ್, ತಾಲೂಕು ಆರೋಗ್ಯ ಅಧಿಕಾರಿ ರಮೇಶ್ ಬಾಬು, ಪೊಲೀಸ್ ಇನ್ಸ್ಪೆಕ್ಟರ್ ವಸಂತ್ ಹಾಜರಿದ್ದರು..