ರಾಜ್ಯದಲ್ಲಿ ಬೇಲಿಯೇ ಹೊಲ ಮೇಯುತ್ತಿದೆ: ಶ್ಯಾಮಲಾ ಕುಂದರ್

| Published : Apr 23 2024, 12:51 AM IST

ಸಾರಾಂಶ

ಹುಬ್ಬಳ್ಳಿಯಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್ ಅಮಾನುಷ ಹತ್ಯೆ ಖಂಡಿಸಿ ಸೋಮವಾರ ಉಡುಪಿಯಲ್ಲಿ ಜಿಲ್ಲಾ ಬಿಜೆಪಿ ಪ್ರತಿಭಟಿಸಿತು. ರಾಷ್ಟ್ರೀಯ ಮಹಿಳಾ ಆಯೋಗ ಮಾಜಿ ಸದಸ್ಯೆ ಶ್ಯಾಮಲಾ ಕುಂದರ್ ಸಹಿತ ಪ್ರಮುಖರು ಪಾಲ್ಗೊಂಡರು.

ಕನ್ನಡಪ್ರಭ ವಾರ್ತೆ ಉಡುಪಿ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಂದಿನಿಂದ ಹೆಣ್ಣುಮಕ್ಕಳು ಆತಂಕದಿಂದ ಬದುಕುವ ದಿನಗಳು ಶುರುವಾಗಿವೆ. ಬೇಲಿಯೇ ಎದ್ದು ಹೊಲ ಮೇಯುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ಮಾಜಿ ಸದಸ್ಯೆ ಶ್ಯಾಮಲಾ ಕುಂದರ್ ಆರೋಪಿಸಿದ್ದಾರೆ.

ಸೋಮವಾರ, ಹುಬ್ಬಳ್ಳಿಯಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್ ಅಮಾನುಷ ಹತ್ಯೆ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕಚೇರಿ ಬಳಿ ಪ್ರತಿಭಟನೆ ಉದ್ದೇಶಿಸಿ ಅವರು ಮಾತನಾಡಿದರು.

ಕೇಂದ್ರದಲ್ಲಿ ಮೋದಿ ಸರ್ಕಾರ ಹೆಣ್ಣು ಮಕ್ಕಳ ಸುರಕ್ಷನೆ ಮತ್ತು ಸಬಲತೆಗೆ ಅನೇಕ ಯೋಜನೆ ಕಾನೂನುಗಳನ್ನು ಜಾರಿಗೆ ತರುತಿದ್ದರೆ, ರಾಜ್ಯದಲ್ಲಿ ಹೆಣ್ಣುಮಕ್ಕಳನ್ನು ಮನೆಯಿಂದ ಹೊರಗೆ ಕಳುಹಿಸಲು ಹೆತ್ತವರು ಹೆದರುವ ಸ್ಥಿತಿ ಇದೆ. ಈ ಹಿಂದೆ ಕೂಡ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲು ಮುಸ್ಲಿಂ ಹೆಣ್ಣುಮಕ್ಕಳಿಗೆ ಮಾತ್ರ ಶಾಧಿಭಾಗ್ಯವನ್ನು ನೀಡಿತ್ತು. ಈಗಂತೂ ಹಿಂದೂ ಹೆಣ್ಣಮಕ್ಕಳನ್ನು ಕೊಲೆ ಮಾಡುವಷ್ಟು ಸ್ವಚ್ಛಂದ ಅಧಿಕಾರ ಸಿಕ್ಕಿದಂತಿದೆ ಎಂದು ಆರೋಪಿಸಿದರು.ಹೆಣ್ಣು ಮಕ್ಕಳನ್ನು ಈ ರೀತಿ ಅಮಾನುಷವಾಗಿ ಕೊಲೆ ಮಾಡುವವರಿಗೆ 24 ಗಂಟೆಗಳಲ್ಲಿ ನೇಣು ಹಾಕುವ ಕಾನೂನು ಬಂದರೆ ಮಾತ್ರ ಇದು ನಿಯಂತ್ರಣಕ್ಕೆ ಬರಬಹುದು ಎಂದ ಅವರು, ನೇಹಾ ಕೊಲೆಗಾರನಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು ಮಾತನಾಡಿದರು.

ಶಾಸಕ ಯಶ್ಪಾಲ್ ಎ. ಸುವರ್ಣ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ ಮತ್ತು ರೇಷ್ಮಾ ಉದಯ ಶೆಟ್ಟಿ, ಪ್ರಮುಖರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ, ಸತ್ಯಾನಂದ ನಾಯಕ್, ಶಿವಕುಮಾರ್ ಅಂಬಲಪಾಡಿ, ನಳಿನಿ ಪ್ರದೀಪ್ ರಾವ್, ಶ್ರೀನಿಧಿ ಹೆಗ್ಡೆ, ವಿಜಯಕುಮಾರ್ ಉದ್ಯಾವರ, ವೀಣಾ ಎಸ್. ಶೆಟ್ಟಿ, ಪ್ರಥ್ವಿರಾಜ್ ಶೆಟ್ಟಿ, ರಶ್ಮಿತಾ ಬಿ. ಶೆಟ್ಟಿ, ಶ್ರೀಕಾಂತ್ ಕಾಮತ್, ಗುರುಪ್ರಸಾದ್ ಶೆಟ್ಟಿ ಕಟಪಾಡಿ, ದಿನೇಶ್ ಅಮೀನ್, ರೋಶನ್ ಶೆಟ್ಟಿ, ಶಶಾಂಕ್ ಶಿವತ್ತಾಯ, ಸುಮಾ ಶೆಟ್ಟಿ, ಮಂಜುಳಾ ಪ್ರಸಾದ್ ಮತ್ತು ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಇದ್ದರು.