ಜಮಖಂಡಿ : ನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ಬಿಜೆಪಿ ಕಾರ್ಯಕರ್ತರು ಹೊಡೆದಾಡಿಕೊಂಡ ಘಟನೆ ಗುರುವಾರ ನಡೆದಿದೆ. ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಸಂಗಮೇಶ ದಳವಾಯಿ, ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪವನ ಸಾಳೋಂಕಿ ನಡುವೆ ಬುಧವಾರ ರಾತ್ರಿ ಕ್ಷುಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ ಜೋರಾಗಿ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ.
ಕನ್ನಡಪ್ರಭ ವಾರ್ತೆ ಜಮಖಂಡಿ
ನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ಬಿಜೆಪಿ ಕಾರ್ಯಕರ್ತರು ಹೊಡೆದಾಡಿಕೊಂಡ ಘಟನೆ ಗುರುವಾರ ನಡೆದಿದೆ. ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಸಂಗಮೇಶ ದಳವಾಯಿ, ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪವನ ಸಾಳೋಂಕಿ ನಡುವೆ ಬುಧವಾರ ರಾತ್ರಿ ಕ್ಷುಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ ಜೋರಾಗಿ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಅಲ್ಲಿಯೇ ಇದ್ದ ಮುಖಂಡರು ಇಬ್ಬರನ್ನು ಸಮಾಧಾನ ಮಾಡಿ ಕಳುಹಿಸಿಕೊಟ್ಟಿದ್ದರು. ಆದರೆ ಗುರುವಾರ ಬೆಳಗ್ಗೆ ಪವನ ಸಾಳೋಂಕಿ ಮನೆಗೆ ನುಗ್ಗಿದ ಸಂಗಮೇಶ ದಳವಾಯಿ ಕಡೆಯವರು ಮನೆಯಲ್ಲಿದ್ದ ಹೆಣ್ಣುಮಕ್ಕಳು ಮತ್ತು ಚಿಕ್ಕ ಚಿಕ್ಕಮಕ್ಕಳು ಸೇರಿ ಸಿಕ್ಕಸಿಕ್ಕವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪವನ ಸಹೋದರ ಕಿರಣ ಸಾಳೋಂಕಿ ಆರೋಪಿಸಿದ್ದಾರೆ.ಘಟನೆಯಿಂದ ಪಕ್ಕದ ನಿವಾಸಿಗಳು ಗಾಬರಿಗೊಂಡಿದ್ದು ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಪವನ ಸಾಳೋಂಕಿ ಇಬ್ಬರು ಸಹೋದರರ ಪೈಕಿ ಓರ್ವನ ತಲೆಯ ಭಾಗಕ್ಕೆ ಹಾಗೂ ಒಬ್ಬನ ಎಡಗೈ ಭಾಗಕ್ಕೆ ಬಲವಾದ ಪೆಟ್ಟು ಬಿದ್ದಿದೆ ಎನ್ನಲಾಗಿದೆ. ಗಾಯಾಳುಗಳು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂಗಮೇಶ ದಳವಾಯಿ ಕಡೆಯವರು ಸಾವಳಗಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.