ಸಾರಾಂಶ
ಕನ್ನಡಪ್ರಭ ವಾರ್ತೆ ಗುಬ್ಬಿ
ರಾಜ್ಯ ಸರ್ಕಾರದಲ್ಲಿ ಸಿಎಂ ಕುರ್ಚಿಗಾಗಿ ಬಡಿದಾಡಿಕೊಳ್ಳುತ್ತಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಯಾರೂ ಕೂಡ ಗಮನಹರಿಸುತ್ತಿಲ್ಲ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆ ಆಗಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ಗುಬ್ಬಿ ತಾಲೂಕಿನ ಬೆಲವತ್ತ ಗ್ರಾಮದ ಶ್ರೀ ವೀರಭದ್ರೇಶ್ವರ ಸ್ವಾಮಿಯ ನೂತನ ವಿಮಾನ ಗೋಪುರ ಕಳಸ ಸ್ಥಾಪನೆ ಮಹೋತ್ಸವದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ರಾಜ್ಯ ಸರ್ಕಾರದಲ್ಲಿ ಹಣವಿಲ್ಲದೆ ಒಂದೇ ಒಂದು ಅಭಿವೃದ್ಧಿಯನ್ನು ಕೂಡ ಈ ಸರ್ಕಾರ ಮಾಡಿಲ್ಲ. ಕ್ಷೇತ್ರದ ಶಾಸಕರು ಅನುದಾನಕ್ಕಾಗಿ ಪರದಾಡುವ ಸ್ಥಿತಿ ನಿರ್ಮಾಣ ಮಾಡಿದ್ದಾರೆ. ಮುಂಬರುವ ಜಿಲ್ಲಾ ಪಂಚಾಯತಿ ತಾಲೂಕು ಪಂಚಾಯತ್ ಚುನಾವಣೆ ಬಗ್ಗೆಯೂ ಕೂಡ ಗಮನ ಹರಿಸಲಿಲ್ಲ ಎಂದರು.ಗುಬ್ಬಿ ಜೆಡಿಎಸ್ ಭದ್ರಕೋಟೆ ಎಂಬುದನ್ನು ಈಗಾಗಲೇ ಕಾರ್ಯಕರ್ತರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ತೋರಿಸಿಕೊಟ್ಟಿದ್ದಾರೆ. ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ಬಿ.ಎಸ್. ನಾಗರಾಜ್ ಅವರು ಮುಂಚೂಣಿಯಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿ.ಎಸ್. ನಾಗರಾಜ್ ಅವರಿಗೆ 43,000 ಮತಗಳನ್ನು ಹಾಕಿ ಜೆಡಿಎಸ್ ಬಲಿಷ್ಠವಾಗಿದೆ ಎಂದು ತೋರಿಸಿಕೊಟ್ಟಿದ್ದಾರೆ. ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ಯಾರನ್ನು ನಂಬಿಕೊಂಡು ಕೆಲಸ ಮಾಡುತ್ತಿಲ್ಲ ನಮ್ಮ ಕಾರ್ಯಕರ್ತರು ಶಕ್ತಿಯಾಗಿ ಗುಬ್ಬಿಯಲ್ಲಿದ್ದಾರೆ. ಮಾತಾಡುವಾಗ ಮಾತ್ನಲ್ಲಿ ನಿಗಾ ಇರಬೇಕು ನಾನು ಈಗ ಮಾತನಾಡುವುದಿಲ್ಲ ಮುಂದಿನ ದಿನಗಳಲ್ಲಿ ಎಲ್ಲಾ ಕಾರ್ಯಕರ್ತರಿಗೆ ಗೊತ್ತಾಗಿಯೇ ಆಗುತ್ತದೆ ಎಂದು ಪರೋಕ್ಷವಾಗಿ ಹೆಸರು ಹೇಳದೆ ಶಾಸಕ ಶ್ರೀನಿವಾಸ್ ವಿರುದ್ಧ ಗುಡುಗಿದರು. ಇದೇ ಸಂದರ್ಭದಲ್ಲಿ ಶಾಸಕ ಎಂ ಟಿ ಕೃಷ್ಣಪ್ಪ ಮುಖಂಡರಾದ ಬಿಎಸ್ ನಾಗರಾಜು ಕಳ್ಳಿಪಾಳ್ಯ ಲೋಕೇಶ್ ಯೋಗಾನಂದ ಕುಮಾರ್, ರಘು, ಗ್ರಾಮ ಪಂಚಾಯತಿ ಅಧ್ಯಕ್ಷ ಲತಾ ದಯಾನಂದ್ ಇತರರಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))