ಸಾರಾಂಶ
ಕನ್ನಡಪ್ರಭ ವಾರ್ತೆ ಇಂಡಿ ನನ್ನ ಜೀವನ ಇರುವವರೆಗೂ ದಲಿತ ಮುಖ್ಯಮಂತ್ರಿಗಾಗಿ ಒತ್ತಾಯ ಇದ್ದೇ ಇರುತ್ತದೆ. ಕಾಂಗ್ರೆಸ್‌ನಲ್ಲಿ ಮಲ್ಲಿಕಾರ್ಜುನ ಖರ್ಗೆ ಆದರೂ ಸಂತೋಷ, ದಲಿತರು ಯಾರೇ ಆದರೂ ಸಂತೋಷ. ಎಲ್ಲ ರಾಜ್ಯಗಳಲ್ಲಿ ದಲಿತ ಮುಖ್ಯಮಂತ್ರಿ ಆಗಿ ಹೋಗಿದ್ದಾರೆ. ನಮ್ಮ ರಾಜ್ಯದಲ್ಲಿ ಏಕೆ ದಲಿತ ಮುಖ್ಯಮಂತ್ರಿ ಆಗಬಾರದು?. ಬಿಜೆಪಿಯಲ್ಲಿಯೂ ದಲಿತ ಮುಖ್ಯಮಂತ್ರಿ ಮಾಡುವಂತೆ ಕೇಳುತ್ತೇನೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ಕನ್ನಡಪ್ರಭ ವಾರ್ತೆ ಇಂಡಿ
ನನ್ನ ಜೀವನ ಇರುವವರೆಗೂ ದಲಿತ ಮುಖ್ಯಮಂತ್ರಿಗಾಗಿ ಒತ್ತಾಯ ಇದ್ದೇ ಇರುತ್ತದೆ. ಕಾಂಗ್ರೆಸ್‌ನಲ್ಲಿ ಮಲ್ಲಿಕಾರ್ಜುನ ಖರ್ಗೆ ಆದರೂ ಸಂತೋಷ, ದಲಿತರು ಯಾರೇ ಆದರೂ ಸಂತೋಷ. ಎಲ್ಲ ರಾಜ್ಯಗಳಲ್ಲಿ ದಲಿತ ಮುಖ್ಯಮಂತ್ರಿ ಆಗಿ ಹೋಗಿದ್ದಾರೆ. ನಮ್ಮ ರಾಜ್ಯದಲ್ಲಿ ಏಕೆ ದಲಿತ ಮುಖ್ಯಮಂತ್ರಿ ಆಗಬಾರದು?. ಬಿಜೆಪಿಯಲ್ಲಿಯೂ ದಲಿತ ಮುಖ್ಯಮಂತ್ರಿ ಮಾಡುವಂತೆ ಕೇಳುತ್ತೇನೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.ರಾಜನಾಳ ಕೆರೆಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗ್ಯಾರಂಟಿ ಯೋಜನೆಗಳು ಚುನಾವಣೆಗಾಗಿ ಮಾಡಿಲ್ಲ ಎಂದು ಹೇಳುತ್ತಿದ್ದಾರೆ. ಹಾಗಾದಾರೆ ಗ್ಯಾರಂಟಿ ಯೋಜನೆಗಳ ಬಗ್ಗೆ ಚುನಾವಣೆ ಮುಗಿದ ಮೇಲೆ ಹೇಳಬೇಕಿತ್ತು. ಚುನಾವಣೆ ಸಂದರ್ಭದಲ್ಲಿಯೇ ಏಕೆ ಘೋಷಣೆ ಮಾಡಿದರು ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ಒಂದೂವರೆ ವರ್ಷವಾಯಿತು. ರಾಜ್ಯದಲ್ಲಿ ಯಾವುದೇ ಒಂದೇ ಒಂದು ಅಭಿವೃದ್ಧಿ ಕೆಲಸಗಳು ನಡೆದಿಲ್ಲ ಎಂದು ಟೀಕಿಸಿದರು.
ಗ್ರಾಪಂ ಅಧ್ಯಕ್ಷ ನಾಗುಗೌಡ ಪಾಟೀಲ, ಕುಲಪ್ಪ ಹಿಟ್ನಳ್ಳಿ, ಸಲೀಮ ನಧಾಪ ಇತರರು ಈ ಸಂದರ್ಭದಲ್ಲಿ ಇದ್ದರು.