ಸಾರಾಂಶ
ಹಾವೇರಿ: ಕೊಬ್ಬರಿ ಹೋರಿ ಹಬ್ಬದ ವಿಚಾರಕ್ಕೆ ಸಂಬಂಧಿಸಿದಂತೆ ಅನ್ಯ ಕೋಮಿನವರಿಂದ ಹಿಂದೂ ಯುವಕರ ಮೇಲೆ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಕೋಳೂರು ಗ್ರಾಮದಲ್ಲಿ ನಡೆದಿದ್ದು, ಈ ಸಂಬಂಧ ಮುಸ್ಲಿಂ ಸಮುದಾಯಕ್ಕೆ ಸೇರಿದ 15 ಜನರ ಮೇಲೆ ಪ್ರಕರಣ ದಾಖಲಾಗಿದೆ.ಕೋಳೂರು ಗ್ರಾಮದಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಅನ್ಯ ಕೋಮಿನವರಿಗೆ ಸೇರಿದ ಹೋರಿಯನ್ನು ಹಿಂದೂ ಯುವಕರು ಹಿಡಿದಿದ್ದರು.
ಹೋರಿ ಹಿಡಿದದ್ದಕ್ಕೆ ಅನ್ಯ ಕೋಮಿನವರಿಂದ ಹಿಂದೂ ಯುವಕರ ಮೇಲೆ ಹಲ್ಲೆ
ಹಾವೇರಿ: ಕೊಬ್ಬರಿ ಹೋರಿ ಹಬ್ಬದ ವಿಚಾರಕ್ಕೆ ಸಂಬಂಧಿಸಿದಂತೆ ಅನ್ಯ ಕೋಮಿನವರಿಂದ ಹಿಂದೂ ಯುವಕರ ಮೇಲೆ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಕೋಳೂರು ಗ್ರಾಮದಲ್ಲಿ ನಡೆದಿದ್ದು, ಈ ಸಂಬಂಧ ಮುಸ್ಲಿಂ ಸಮುದಾಯಕ್ಕೆ ಸೇರಿದ 15 ಜನರ ಮೇಲೆ ಪ್ರಕರಣ ದಾಖಲಾಗಿದೆ.ಕೋಳೂರು ಗ್ರಾಮದಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಅನ್ಯ ಕೋಮಿನವರಿಗೆ ಸೇರಿದ ಹೋರಿಯನ್ನು ಹಿಂದೂ ಯುವಕರು ಹಿಡಿದಿದ್ದರು. ಹೋರಿ ಹಿಡಿದಿದ್ದಕ್ಕೆ ಅನ್ಯ ಕೋಮಿನ ಯುವಕರು ಬಡಿಗೆಯಿಂದ ಹಿಂದೂಗಳ ಮೇಲೆ ಮನಸೋಇಚ್ಛೆ ಥಳಿಸಿದ ವಿಡಿಯೋ ವೈರಲ್ ಆಗಿರುವ ಬೆನ್ನಲ್ಲೆ ಘಟನೆ ಬೆಳಕಿಗೆ ಬಂದಿದೆ. ಘಟನೆಯಲ್ಲಿ ಗಾಯಗೊಂಡಿರುವವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಅನ್ಯ ಕೋಮಿನ 15 ಜನರ ಮೇಲೆ ಪ್ರಕರಣ ದಾಖಲಾಗಿದೆ.