ಪಂಚಮಸಾಲಿ ಹೋರಾಟಗಾರರ ಮೇಲೆ ಹಿರೇಬಾಗೇವಾಡಿ ಪೊಲೀಸ್‌ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ

| Published : Dec 12 2024, 12:34 AM IST / Updated: Dec 12 2024, 05:20 AM IST

Rajasthan High Court
ಪಂಚಮಸಾಲಿ ಹೋರಾಟಗಾರರ ಮೇಲೆ ಹಿರೇಬಾಗೇವಾಡಿ ಪೊಲೀಸ್‌ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ
Share this Article
  • FB
  • TW
  • Linkdin
  • Email

ಸಾರಾಂಶ

2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಸಮಾಜ ಹೋರಾಟ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಪೊಲೀಸ್‌ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.

  ಬೆಳಗಾವಿ : 2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಸಮಾಜ ಹೋರಾಟ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಪೊಲೀಸ್‌ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.

ನಿಂಗಪ್ಪ ಬಣದ, ರಾಮಗೌಡ ಫಕೀರಗೌಡ, ಉಮೇಶ್ ಇಂಗಳೆವಾರ, ಮಂಜುನಾಥ್ ಬೆಂಡಿಗೇರಿ, ಮಂಜುನಾಥ ಗುಮ್ಮಗೋಳ ಹಾಗೂ ಇತರರ ಮೇಲೆ ಎಫ್‌ಐಆರ್​ ದಾಖಲಾಗಿದೆ. ಆರೋಪಿತರು ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ಮಾಡಿ ಗಂಭೀರ ಗಾಯಗೊಳಿಸಿದ್ದಾರೆ. ಕೊಲೆ ಮಾಡಲು ಯತ್ನಸಿದ್ದಾರೆ ಹಾಗೂ ಸಾರ್ವಜನಿಕ ಆಸ್ತಿ, ಪಾಸ್ತಿ ಹಾನಿ ಮಾಡಿದ್ದಾರೆ ಎಂದು ಬಿಎನ್‌ಎಸ್ ಕಲಂ 115(2), 109(1), 118(2), 117(2), 352, 351(2), 132, 121, 223, 324,189, 189(3), 191(2), 190 ಅಡಿ ಪಿಐ ಆರ್.ಆರ್ ಪಾಟೀಲ ಅವರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಿಲ್ಲಾಡಳಿತ ಶಾಂತಿರೀತಿಯಿಂದ ಹೋರಾಟ ಮಾಡುವಂತೆ ಅನುಮತಿ ನೀಡಿತ್ತು. ಲಿಂಗಾಯತ ಪಂಚಮಸಾಲಿ ಸಮಾಜದ ಹೋರಾಟ ಹಿಂಸಾ ಸ್ವರೂಪ ಪಡೆದಿತ್ತು. ಹೋರಾಟದ ವೇಳೆ ನಡೆದ ಕಲ್ಲು, ಚಪ್ಪಲಿ ತೂರಾಟದಲ್ಲಿ ಪೊಲೀಸ್‌ ಇನ್ಸ್‌ಪೆಕ್ಟರ್‌ ಸೇರಿದಂತೆ 17 ಜನರಿಗೆ ಗಾಯವಾಗಿತ್ತು. ಏಳು ಸರ್ಕಾರಿ ಬಸ್‌, ಮೂರು ಪೊಲೀಸ್‌ ವಾಹನ ಜಖಂಗೊಂಡಿದ್ದವು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್‌ ಮಾಡಿದ್ದರು. ಅಲ್ಲದೇ, ಹೈಕೋರ್ಟ್ ಆದೇಶ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಿಸಲು ಬಲ ಪ್ರಯೋಗ ಮಾಡಿದ್ದೇವೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.