ಸಾರಾಂಶ
ಕನ್ನಡಪ್ರಭ ವಾರ್ತೆ ಜಮಖಂಡಿ ನಗರ ಪ್ರದೇಶದ ಪ್ರಮುಖ ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಅಡ್ಡಾದಿಡ್ಡಿಯಾಗಿ ವಾಹನಗಳನ್ನು ನಿಲ್ಲಿಸಿದರೆ ಅಂಥ ವಾಹನಗಳನ್ನು ಸೀಜ್ ಮಾಡಿ ಪ್ರಕರಣ ದಾಖಲಿಸಲಾಗುವುದೆಂದು ಶಹರ ಠಾಣೆ ಪಿಎಸ್‌ಐ ಅನಿಲ ಕುಂಬಾರ ಎಚ್ಚರಿಕೆ ನೀಡಿದ್ದಾರೆ.ನಗರದ ಮಾರುಕಟ್ಟೆ ಪ್ರದೇಶ ಮತ್ತು ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಅಡ್ಡಾದಿಡ್ಡಿ ವಾಹನಗಳನ್ನು ನಿಲ್ಲಿಸಿದ್ದನ್ನು ತೆರವು ಗೊಳಿಸಿದ ಅವರು, ಸಾರ್ವಜನಿಕರು ಮತ್ತೊಬ್ಬರಿಗೆ ತೊಂದರೆಯಾಗದಂತೆ ವಾಹನಗಳನ್ನು ನಿಲ್ಲಿಸಬೇಕು ಮತ್ತು ನಿಗದಿತ ದಿನದಂದು ಹೇಳಲಾದ ಸ್ಥಳದಲ್ಲೇ ವಾಹನಗಳನ್ನು ನಿಲ್ಲಿಸಬೇಕು ಎಂದು ಸೂಚಿಸಿದರು.
ಕನ್ನಡಪ್ರಭ ವಾರ್ತೆ ಜಮಖಂಡಿ
ನಗರ ಪ್ರದೇಶದ ಪ್ರಮುಖ ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಅಡ್ಡಾದಿಡ್ಡಿಯಾಗಿ ವಾಹನಗಳನ್ನು ನಿಲ್ಲಿಸಿದರೆ ಅಂಥ ವಾಹನಗಳನ್ನು ಸೀಜ್ ಮಾಡಿ ಪ್ರಕರಣ ದಾಖಲಿಸಲಾಗುವುದೆಂದು ಶಹರ ಠಾಣೆ ಪಿಎಸ್‌ಐ ಅನಿಲ ಕುಂಬಾರ ಎಚ್ಚರಿಕೆ ನೀಡಿದ್ದಾರೆ.ನಗರದ ಮಾರುಕಟ್ಟೆ ಪ್ರದೇಶ ಮತ್ತು ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಅಡ್ಡಾದಿಡ್ಡಿ ವಾಹನಗಳನ್ನು ನಿಲ್ಲಿಸಿದ್ದನ್ನು ತೆರವು ಗೊಳಿಸಿದ ಅವರು, ಸಾರ್ವಜನಿಕರು ಮತ್ತೊಬ್ಬರಿಗೆ ತೊಂದರೆಯಾಗದಂತೆ ವಾಹನಗಳನ್ನು ನಿಲ್ಲಿಸಬೇಕು ಮತ್ತು ನಿಗದಿತ ದಿನದಂದು ಹೇಳಲಾದ ಸ್ಥಳದಲ್ಲೇ ವಾಹನಗಳನ್ನು ನಿಲ್ಲಿಸಬೇಕು ಎಂದು ಸೂಚಿಸಿದರು.ನಗರದ ದೇಸಾಯಿ ಸರ್ಕಲ್, ಅಶೋಕ ಸರ್ಕಲ್, ಕೊರ್ಟ್ ರಸ್ತೆ, ಹನುಮಾನ ಚೌಕ್‌ಗಳಲ್ಲಿ ಜನ ಸಂದಣಿ ಹೆಚ್ಚಾಗಿರುತ್ತದೆ. ದ್ವಿಚಕ್ರ ವಾಹನ ಸವಾರರು ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸಿ ಹೋಗುವದನ್ನು ಪ್ರತಿನಿತ್ಯ ಕಾಣಬಹುದು. ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದ್ದು, ವಾಹನ ಮಾಲಿಕರಿಗೆ ಎಚ್ಚರಿಸಲಾಗಿದೆ ಎಂದರು.
ಸಾರ್ವಜನಿಕರಿಗೆ ತೊಂದರೆಯಾಗದಂತೆ ವಾಹನಗಳನ್ನು ನಿಲ್ಲಿಸಲು ಸೂಚಿಸಿದರು. ನಿಗದಿತ ರಸ್ತೆಗಳಲ್ಲಿ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದ್ದು, ಅಲ್ಲಿಯೇ ವಾಹನ ನಿಲ್ಲಿಸುವಂತೆ ಸೂಚಿಸಿದರು. ತಪ್ಪಿದ್ದಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದರು.