ಸಾರಾಂಶ
ಪ್ರತಿ ವರ್ಷ ಮಾ.15ರಂದು ವಿಶ್ವ ಗ್ರಾಹಕರ ಹಕ್ಕುಗಳ ದಿನ ಆಚರಿಸುತ್ತೇವೆ. ಗ್ರಾಹಕರಿಗೆ ಗ್ರಾಹಕ ಹಕ್ಕುಗಳ ಬಗ್ಗೆ ಕಾನೂನಿನ ಅರಿವು ಕಡಿಮೆ ಇದೆ.
ಹೊಸಪೇಟೆ: ವ್ಯಾಪಾರಸ್ಥರು ಲಾಭಕ್ಕಾಗಿ ಆಹಾರ ಪದಾರ್ಥ, ಇತರೆ ವಸ್ತುಗಳಲ್ಲಿ ಕಲಬೆರಕೆ ಮಾಡುತ್ತಿದ್ದಾರೆ. ಇದರಿಂದಾಗಿ ಆರೋಗ್ಯದಲ್ಲಿ ಸಮಸ್ಯೆ ಉಂಟಾಗುತ್ತಿದೆ. ಇಂತಹ ಸಂದರ್ಭದಲ್ಲಿ ಜಿಲ್ಲಾ ಗ್ರಾಹಕ ನ್ಯಾಯಾಲಯಕ್ಕೆ ಸಾರ್ವಜನಿಕರು ದೂರು ಸಲ್ಲಿಸಬಹುದು ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ, ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಹೇಮಲತಾ ಬಿ.ಹುಲ್ಲೂರ ಹೇಳಿದರು.
ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ ಅಂಗವಾಗಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಕಂದಾಯ ಇಲಾಖೆ, ಆಹಾರ ಇಲಾಖೆ, ಕಿರಾಣಿ ವರ್ತಕರ ಸಂಘದ ಸಹಯೋಗದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಗ್ರಾಹಕರು ವಸ್ತುಗಳ ಗುಣಮಟ್ಟ ನೋಡಿ ಖರೀದಿಸಬೇಕು. ವಸ್ತು ಖರೀದಿಸಿದಾಗ ರಶೀದಿ ಪಡೆಯಬೇಕು ಎಂದರು.ಪ್ರಧಾನ ಸಿವಿಲ್ ನ್ಯಾಯಾಧೀಶ ಕಿಶನ್ ಮಾಡಲಗಿ ಮಾತನಾಡಿ, ಪ್ರತಿ ವರ್ಷ ಮಾ.15ರಂದು ವಿಶ್ವ ಗ್ರಾಹಕರ ಹಕ್ಕುಗಳ ದಿನ ಆಚರಿಸುತ್ತೇವೆ. ಗ್ರಾಹಕರಿಗೆ ಗ್ರಾಹಕ ಹಕ್ಕುಗಳ ಬಗ್ಗೆ ಕಾನೂನಿನ ಅರಿವು ಕಡಿಮೆ ಇದೆ. ನಾವು ತೆಗೆದುಕೊಂಡ ಸರಕಿನ ಗುಣಮಟ್ಟ ಸರಿ ಇರಬೇಕು ಎಂದರು.
ಉಪ ತಹಸೀಲ್ದಾರ ಅಮರನಾಥ, 2ನೇ ಅಪರ ಸಿವಿಲ್ ನ್ಯಾಯಾಧೀಶ ಸಂಜೀವ್‌ಕುಮಾರ ಜಿ., 3ನೇ ಅಪರ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶೆ ಚೈತ್ರಾ ಜೆ., ಆಹಾರ ಇಲಾಖೆಯ ಆಹಾರ ಶಿರಸ್ತೇದಾರ ಜಿ.ಎಚ್. ರುದ್ರಪ್ಪ, ಆಹಾರ ನಿರೀಕ್ಷಕ ಡಿ.ಎಂ. ನಾಗೇಂದ್ರ ನಾಯಕ್, ಪಟ್ಟಣ ಠಾಣೆಯ ಇನ್‌ಸ್ಪೆಕ್ಟರ್ ಲಖನ್ ಆರ್. ಮಸಗುಪ್ಪಿ, ಕಿರಾಣಿ ವರ್ತಕರ ಸಂಘದ ಅಧ್ಯಕ್ಷ ಮುಗದ ನಾಗರಾಜ್, ವಕೀಲರ ಸಂಘದ ಅಧ್ಯಕ್ಷ ಕೆ.ಪ್ರಹ್ಲಾದ್, ಕಿರಾಣಿ ವರ್ತಕರ ಸಂಘದ ಕಾರ್ಯದರ್ಶಿ ಕೃಷ್ಣಮೂರ್ತಿ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಶ್ರೀನಿವಾಸ ಮೂರ್ತಿ, ಸಿಬ್ಬಂದಿ ಇದ್ದರು.