ಎಸ್‌ಸಿ-ಎಸ್‌ಟಿ ದೌರ್ಜನ್ಯ ಕೇಸ್‌ ದಾಖಲಿಸಿ

| Published : Dec 25 2024, 12:47 AM IST

ಸಾರಾಂಶ

ಸಂವಿಧಾನಶಿಲ್ಪಿ ಡಾ.ಅಂಬೇಡ್ಕರ್‌ ಅವರಿಗೆ ಅವಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು. ಅವರ ವಿರುದ್ಧ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಕೇಸ್ ದಾಖಲಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದಿಂದ ನಗರದಲ್ಲಿ ಮಂಗಳವಾರ ಅರೆಬೆತ್ತಲೆ ಮೆರವಣಿಗೆ ನಡೆಸಲಾಯಿತು.

- ದಸಂಸ ಪ್ರತಿಭಟನೆ । ಎಸಿ ಮುಖೇನ ರಾಷ್ಟ್ರಪತಿಗೆ ಮನವಿ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಸಂವಿಧಾನಶಿಲ್ಪಿ ಡಾ.ಅಂಬೇಡ್ಕರ್‌ ಅವರಿಗೆ ಅವಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು. ಅವರ ವಿರುದ್ಧ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಕೇಸ್ ದಾಖಲಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದಿಂದ ನಗರದಲ್ಲಿ ಮಂಗಳವಾರ ಅರೆಬೆತ್ತಲೆ ಮೆರವಣಿಗೆ ನಡೆಸಲಾಯಿತು.

ನಗರದ ಡಾ.ಅಂಬೇಡ್ಕರ್ ವೃತ್ತದಿಂದ ಶ್ರೀ ಜಯದೇವ ವೃತ್ತ, ಹಳೇ ಪಿ.ಬಿ. ರಸ್ತೆ ಮಾರ್ಗವಾಗಿ ಉಪ ವಿಭಾಗಾಧಿಕಾರಿ ಕಚೇರಿ ಆಗಮಿಸಿ, ರಾಷ್ಟ್ರಪತಿ ಹಾಗೂ ಪ್ರಧಾನಿಗೆ ತಲುಪಿಸುವಂತೆ ಮನವಿ ಅರ್ಪಿಸಲಾಯಿತು.

ಸಂಘಟನೆ ಮುಖಂಡರು, ಅಂಬೇಡ್ಕರ್‌ಗೆ ಅವಮಾನಿಸಿದ ಅಮಿತ್ ಶಾ ವಿರುದ್ಧ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸ್ವಯಂಪ್ರೇರಿತರಾಗಿ ಎಸ್ಸಿ-ಎಸ್ಟಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದರು.

ಉಪವಿಭಾಗಾಧಿಕಾರಿ ಕಚೇರಿ ಮೂಲಕ ರಾಷ್ಟ್ರಪತಿ ಅವರಿಗೆ ಸಲ್ಲಿಸಲಾಯಿತು. ಸಮಿತಿ ಜಿಲ್ಲಾ ಸಂಚಾಲಕ ರಾಘವೇಂದ್ರ ಡಿ.ಕಡೇಮನಿ, ಟಿ.ರವಿಕುಮಾರ, ಎಚ್.ಮಲ್ಲಿಕಾರ್ಜುನ ವಂದಾಲಿ, ಎಂ.ರವಿ ಕೆಟಿಜೆ ನಗರ, ಕೆಂಚಮ್ಮನಹಳ್ಳಿ ರುದ್ರೇಶ, ಹರಿಹರ ಕೃಷ್ಣಪ್ಪ ಇತರರು ಇದ್ದರು.

- - - -24ಕೆಡಿವಿಜಿ7.ಜೆಪಿಜಿ:

ಅಂಬೇಡ್ಕರ್‌ಗೆ ಅವಮಾನಿಸಿದ ಅಮಿತ್ ಶಾ ಅವರನ್ನು ಕೇಂದ್ರ ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ದಾವಣಗೆರೆಯಲ್ಲಿ ಮಂಗಳವಾರ ಡಿಎಸ್‌ಎಸ್‌ನಿಂದ ಅರೆಬೆತ್ತಲೆ ಮೆರವಣಿಗೆ ನಡೆಸಲಾಯಿತು.