ತುಂಗಾ ನದಿಯಿಂದ ನೀರು ಹರಿಸುವ ಮುತ್ತಿನಕೊಪ್ಪ ಏತ ನೀರಾವರಿ ಯೋಜನೆ ಕಾಮಗಾರಿಗೆ ₹30 ಕೋಟಿ ಅನುದಾನ ಬಿಡುಗಡೆ ಮಾಡಿ, ದಾವಣಗೆರೆ ಭದ್ರಾ ಅಚ್ಚುಕಟ್ಟು ರೈತರ ಹಿತ ಕಾಯುವಂತೆ, ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ 91 ಕೆರೆಗಳನ್ನು ತುಂಬಿಸುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಜಲ ಸಂಪನ್ಮೂಲ ಸಚಿವ ಚಲುವರಾಯ ಸ್ವಾಮಿ ಅವರಿಗೆ ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮನವಿ ಮಾಡಿದ್ದಾರೆ.
- ಮುತ್ತಿನಕೊಪ್ಪ ಏತ ನೀರಾವರಿ ಯೋಜನೆ ಕಾಮಗಾರಿಗೆ ₹30 ಕೋಟಿ ಬಿಡುಗಡೆಗೆ ಆಗ್ರಹ
- - -ಕನ್ನಡಪ್ರಭ ವಾರ್ತೆ ದಾವಣಗೆರೆ/ಹೊನ್ನಾಳಿ
ತುಂಗಾ ನದಿಯಿಂದ ನೀರು ಹರಿಸುವ ಮುತ್ತಿನಕೊಪ್ಪ ಏತ ನೀರಾವರಿ ಯೋಜನೆ ಕಾಮಗಾರಿಗೆ ₹30 ಕೋಟಿ ಅನುದಾನ ಬಿಡುಗಡೆ ಮಾಡಿ, ದಾವಣಗೆರೆ ಭದ್ರಾ ಅಚ್ಚುಕಟ್ಟು ರೈತರ ಹಿತ ಕಾಯುವಂತೆ, ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ 91 ಕೆರೆಗಳನ್ನು ತುಂಬಿಸುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಜಲ ಸಂಪನ್ಮೂಲ ಸಚಿವ ಚಲುವರಾಯ ಸ್ವಾಮಿ ಅವರಿಗೆ ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮನವಿ ಮಾಡಿದ್ದಾರೆ.ಬೆಂಗಳೂರಿನ ಸಿಎಂ ಗೃಹ ಕಚೇರಿಯಲ್ಲಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಭೇಟಿ ಮಾಡಿದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಮುತ್ತಿನಕೊಪ್ಪ ಏತ ನೀರಾವರಿ ಯೋಜನೆ ದಾವಣಗೆರೆ ಜಿಲ್ಲೆಯ ರೈತರ ಬಹು ದಿನಗಳ ಬೇಡಿಕೆಯಾಗಿದೆ. ಇದಕ್ಕೆ ಅಗತ್ಯವಿರುವ ₹30 ಕೋಟಿ ಅನುದಾನ ಬಿಡುಗಡೆ ಮಾಡುವಂತೆ, ಯೋಜನೆಗೆ 17.40 ಟಿಎಂಸಿ ನೀರು ಹಂಚಿಕೆ ಮಾಡುವಂತೆ ಮನವಿ ಮಾಡಿದರು.
ಮುತ್ತಿನಕೊಪ್ಪ ಏತ ಯೋಜನೆಗೆ ಪರಿಸರ ಇಲಾಖೆಯಿಂದ ಅಗತ್ಯ ಅನುಮತಿ ಕೊಡಿಸಬೇಕು. ಈ ಯೋಜನೆ ಅನುಷ್ಠಾನಗೊಂಡರೆ ಸುಮಾರು 95 ಸಾವಿರ ಎಕರೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಅನುಕೂಲವಾಗಲಿದೆ. ಹೊನ್ನಾಳಿ, ಚನ್ನಗಿರಿ, ಹರಿಹರ, ಮಾಯಕೊಂಡ ಸೇರಿದಂತೆ ದಾವಣಗೆರೆ ಜಿಲ್ಲೆಯ ಕೃಷಿ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ದೊರೆಯಲಿದೆ. ರೈತರ ಬದುಕು ಹಸನಾಗಬೇಕು. ಕೃಷಿ ಭೂಮಿಗೆ ನೀರು ಹರಿಯಬೇಕು. ಜಿಲ್ಲೆಯ ಸಮಗ್ರ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.ಜಲ ಸಂಪನ್ಮೂಲ ಸಚಿವಗೂ ಮನವಿ:
ಹೊನ್ನಾಳಿ– ನ್ಯಾಮತಿ ಅವಳಿ ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವಂತೆ ಜಲ ಸಂಪನ್ಮೂಲ ಸಚಿವ ಎನ್.ಚಲುವರಾಯ ಸ್ವಾಮಿ ಅವರನ್ನು ಸಹ ಭೇಟಿಯಾಗಿರುವ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮನವಿ ಮಾಡಿದರು. 2020ರಲ್ಲಿ 3 ಟಿಎಂಸಿ ನೀರಿನ ಮೂಲಕ 91 ಕೆರೆಗಳನ್ನು ತುಂಬಿಸುವ ಉದ್ದೇಶದಿಂದ ₹519 ಕೋಟಿ ಅನುದಾನವು ಮಂಜೂರಾಗಿದ್ದು, ಈ ಯೋಜನೆಯಡಿ ಕ್ಷೇತ್ರದ ಕೆರೆಗಳಿಗೂ ನೀರು ಹರಿಸುವುದು ಅತ್ಯಂತ ಅಗತ್ಯ ಎಂದು ಮನವರಿಕೆ ಮಾಡಿಕೊಟ್ಟರು.ಶಿವಮೊಗ್ಗದ ತುಂಗಾ ಏತ ನೀರಾವರಿ ಯೋಜನೆ ಮೂಲಕ ಹೊನ್ನಾಳಿ ಕ್ಷೇತ್ರದ ಹನುಮಸಾಗರ ಕೆರೆ, ಗೋವಿನಕೋವಿ (ಕುರುವ) ಕೆರೆ, ಬೆನಕನಹಳ್ಳಿ ಹಾಗೂ ಕಮ್ಮಾರಗಟ್ಟೆ ಕೆರೆಗಳಿಗೆ ನೀರು ತುಂಬಿಸಬೇಕು. ಈ ಬೇಡಿಕೆಗಳನ್ನು ಈಡೇರಿಸಿದರೆ ಅವಳಿ ತಾಲೂಕಿನ ಸಾವಿರಾರು ರೈತರಿಗೆ ಅನುಕೂಲವಾಗುವ ಜೊತೆಗೆ ಅಂತರ್ಜಲ ಮಟ್ಟವೂ ಹೆಚ್ಚಾಗಿ, ಕೊಳವೆಬಾವಿಗಳಲ್ಲಿ ನೀರಿನ ಲಭ್ಯತೆ ಸುಧಾರಿಸಿ, ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಬಲ ದೊರೆಯಲಿದೆ ಎಂದು ತಿಳಿಸಿದರು.
- - -(-ಫೋಟೋ ಇದೆ.)
-30ಕೆಡಿವಿಜಿ11: