ಸಾರಾಂಶ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದಲ್ಲಿ ಚಿತ್ರೀಕರಣ ಮಾಡಿದ ಬಗ್ಗೆ ಅರಣ್ಯ ಇಲಾಖೆ ವಿರುದ್ಧ ದೂರು ನೀಡಿದ್ದರೂ ಜಿಲ್ಲಾಡಳಿತ ಕ್ರಮ ತೆಗೆದುಕೊಂಡಿಲ್ಲ ಎಂದು ಜಿಲ್ಲಾ ರೈತ ಸಂಘದ ಅಧ್ಯಕ್ಷ ಮಾಡ್ರಹಳ್ಳಿ ಮಹದೇವಪ್ಪ ಆರೋಪಿಸಿದರು.
ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದಲ್ಲಿ ಚಿತ್ರೀಕರಣ ಮಾಡಿದ ಬಗ್ಗೆ ಅರಣ್ಯ ಇಲಾಖೆ ವಿರುದ್ಧ ದೂರು ನೀಡಿದ್ದರೂ ಜಿಲ್ಲಾಡಳಿತ ಕ್ರಮ ತೆಗೆದುಕೊಂಡಿಲ್ಲ ಎಂದು ಜಿಲ್ಲಾ ರೈತ ಸಂಘದ ಅಧ್ಯಕ್ಷ ಮಾಡ್ರಹಳ್ಳಿ ಮಹದೇವಪ್ಪ ಆರೋಪಿಸಿದರು.ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಗೋಪಾಲಸ್ವಾಮಿ ಬೆಟ್ಟದ ಗೇಟ್ ತೆರವುಗೊಳಿಸಬೇಕು. ಸಾರ್ವಜನಿಕರಿಗೆ ಮುಕ್ತವಾಗಿ ಬೆಟ್ಟಕ್ಕೆ ಹೋಗಲು ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು.
ಅಕ್ರಮವಾಗಿ ಪಾರ್ಕಿಂಗ್ ಹಣ ವಸೂಲಿ ಮಾಡುತ್ತಿದ್ದಾರೆ. ಇದು ಕೂಡಲೇ ನಿಲ್ಲಿಸದಿದ್ದರೆ ಅರಣ್ಯ ಇಲಾಖೆ ಕಚೇರಿಗೆ ಬೀಗ ಜಡಿಯಬೇಕಾಗುತ್ತದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದೊಳಗೆ ಎಂಟ್ರಿಯಾಗುವ ವಾಹನಗಳಿಗೆ ಗ್ರೀನ್ ಟ್ಯಾಕ್ಸ್ ವಸೂಲಿ ಮಾಡುತ್ತಿದ್ದಾರೆ ಇದು ನಿಲ್ಲಿಸಿ ಎಂದರು.ಬೆಟ್ಟಕ್ಕೆ ತೆರಳುವ ಪ್ರವಾಸಿಗರು ಹಾಗೂ ಪ್ರಯಾಣಿಕರಿಗೆ ಬೆಟ್ಟದ ತಪ್ಪಲಿನಲ್ಲಿ ನೆರಳು ವ್ಯವಸ್ಥೆ ಮಾಡಲು ಬಂಡೀಪುರ ಅರಣ್ಯ ಇಲಾಖೆ ಮಾಡುತ್ತಿಲ್ಲ. ಗ್ರೀನ್ ಟ್ಯಾಕ್ಸ್ ವಸೂಲಿ ಏಕೆ ಮಾಡಬೇಕು ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.
ಗೋಪಾಲಸ್ವಾಮಿ ಬೆಟ್ಟದ ರಸ್ತೆ ಲೋಕೋಪಯೋಗಿ ಇಲಾಖೆ ಸೇರಿದೆ.ಗೋಪಾಲಸ್ವಾಮಿ ಬೆಟ್ಟದ ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿದೆ ಅರಣ್ಯ ಇಲಾಖೆ ಏಕೆ ಹಣ ವಸೂಲಿ ಮಾಡುತ್ತಿದೆ.ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದ ವೈಪಲ್ತದ ಫಲವಾಗಿ ಅರಣ್ಯ ಇಲಾಖೆ ಮನಬಂದಂತೆ ಅಧಿಕಾರ ನಡೆಸುತ್ತಿದೆ ಎಂದು ಆರೋಪಿಸಿದರು.ಗೋಪಾಲಸ್ವಾಮಿ ಬೆಟ್ಟದಲ್ಲಿ ಚಿತ್ರೀಕರಣ ಅವಕಾಶ ಮಾಡಿಕೊಟ್ಟ ಅರಣ್ಯ ಇಲಾಖೆ ಜಿಲ್ಲಾಡಳಿತ,ತಾಲೂಕು ಆಡಳಿತ,ಸ್ಥಳೀಯ ಶಾಸಕರಿಗೆ ಮನವಿ ಸಲ್ಲಿಸಿದ್ದರೂ ಯಾವ ಕ್ರಮ ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ರೈತಸಂಘದ ಕುಂದಕೆರೆ ಸಂಪತ್ತು,ಮಹೇಶ್ ಸೇರಿದಂತೆ ಹಲವರಿದ್ದರು.