ಮಾನವ ಸರಪಳಿ ನಿರ್ಮಾಣಕ್ಕೆ ಅಂತಿಮ ಸಿದ್ಧತೆ

| Published : Sep 15 2024, 01:51 AM IST

ಸಾರಾಂಶ

ಸೆ.15ರಂದು ಆಯೋಜಿಸಿರುವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಆಯೋಜಿಸಿರುವ ಮಾನವ ಸರಪಳಿ ಕಾರ್ಯಕ್ರಮದ ಅಂತಿಮ ಸಿದ್ಧತೆಯು ತಾಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ಸಂಜೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ನೇತೃತ್ವದಲ್ಲಿ ವಿವಿಧ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಡೆಯಿತು.

ಕನ್ನಡಪ್ರಭವಾರ್ತೆ ಚಳ್ಳಕೆರೆ

ಸೆ.15ರಂದು ಆಯೋಜಿಸಿರುವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಆಯೋಜಿಸಿರುವ ಮಾನವ ಸರಪಳಿ ಕಾರ್ಯಕ್ರಮದ ಅಂತಿಮ ಸಿದ್ಧತೆಯು ತಾಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ಸಂಜೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ನೇತೃತ್ವದಲ್ಲಿ ವಿವಿಧ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಡೆಯಿತು.

ಜಿಲ್ಲೆಯಾದ್ಯಂತ ಕಾರ್ಯಕ್ರಮ ಯಶಸ್ವಿಗೆ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ವರ್ಗ, ಸಂಘ ಸಂಸ್ಥೆ ಹಾಗೂ ಸಾರ್ವಜನಿಕರು ಸಕರಾತ್ಮಕ ಸ್ಪಂದನೆ ನೀಡಿದ್ದಾರೆ. ಬಳ್ಳಾರಿ ಜಿಲ್ಲೆಯಿಂದ ಚಿತ್ರದುರ್ಗ ಜಿಲ್ಲೆಗೆ ಆಗಮಿಸುವ ಮಾನವ ಸರಪಳಿ ಕಾರ್ಯಕ್ರಮಕ್ಕೆ ಹೆಚ್ಚಿನ ಉತ್ತೇಜನ ಕಂಡುವರುತ್ತಿದೆ. ಮಾನವ ಸರಪಳಿ ಕಾರ್ಯಕ್ರಮದೂದ್ದಕ್ಕೂ ವಿವಿಧ ಅಧಿಕಾರಿಗಳನ್ನು ನಿಯುಕ್ತಿಗೊಳಿಸಿ ಜವಾಬ್ದಾರಿ ನೀಡಲಾಗಿದೆ. ಯಾವುದೇ ಸಂದರ್ಭದಲ್ಲೂ ಕಾರ್ಯಕ್ರಮಕ್ಕೆ ಯಾವುದೇ ತೊಂದರೆಯಾಗದಂತೆ ಜಾಗೃತೆ ವಹಿಸಲು ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದರು.

ತಹಸೀಲ್ದಾರ್ ರೇಹಾನ್‌ಪಾಷ ಮಾತನಾಡಿ, ಚಳ್ಳಕೆರೆ ತಾಲೂಕಿನ ಗಡಿಪ್ರದೇಶಕ್ಕೆ ಮಾನವ ಸರಪಳಿ ಯಾತ್ರೆ ಆಗಮಿಸಲಿದ್ದು, ಚಳ್ಳಕೆರೆ ನಗರ ವ್ಯಾಪ್ತಿ ಶಾರದಗಣಪತಿ ಕೋಲ್ಡ್ಸ್ಟೋರೇಜ್‌ನಿಂದ ವಾರಿರ್ಸ್ ಶಾಲೆಯ ತನಕ ನಿಗದಿಪಡಿಸಲಾಗಿದೆ. ಸಾವಿರಾರು ನಾಗರೀಕರು ಇದರಲ್ಲಿ ಪಾಲ್ಗೊಲ್ಳುವರು ಎಂದು ತಿಳಿಸಿದರು.

ಎಡಿಸಿ ಕುಮಾರಸ್ವಾಮಿ, ಸಿಇಒ ಸೋಮಶೇಕರ್, ಇಒ ಎಚ್. ಶಶಿಧರ, ಡಿವೈಎಸ್ಪಿ ಟಿ.ಬಿ. ರಾಜಣ್ಣ, ಇನ್ಸ್ಪೆಕ್ಟರ್ ರಾಜಫಕೃದ್ದೀನ್‌ ದೇಸಾಯಿ, ಪಿಎಸ್‌ಐ ಜೆ. ಶಿವರಾಜ್, ಕಂದಾಯಾಧಿಕಾರಿ ತಿಪ್ಪೇಸ್ವಾಮಿ, ಗ್ರಾಮಲೆಕ್ಕಿಗ ಪ್ರಕಾಶ್ ಮುಂತಾದವರು ಸಭೆಯಲ್ಲಿ ಉಪಸ್ಥಿತರಿದ್ದರು.