ಕೊನೆಗೂ ಬೋನಿಗೆ ಬಿದ್ದ ಚಿರತೆ

| Published : Nov 26 2024, 12:47 AM IST

ಸಾರಾಂಶ

ಪಾವಗಡ: ನಗರದ ಹೌಸಿಂಗ್‌ ಬೋರ್ಡ್‌ನಲ್ಲಿ ಭಾನುವಾರ ರಾತ್ರಿ ಚಿರತೆಯೊಂದನ್ನು ಬೋನಿಗೆ ಬೀಳಿಸುವಲ್ಲಿ ಇಲ್ಲಿನ ಅರಣ್ಯ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿದ್ದು,ಇದರಿಂದ ವಾರ್ಡ್‌ಗಳ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ.

ಪಾವಗಡ: ನಗರದ ಹೌಸಿಂಗ್‌ ಬೋರ್ಡ್‌ನಲ್ಲಿ ಭಾನುವಾರ ರಾತ್ರಿ ಚಿರತೆಯೊಂದನ್ನು ಬೋನಿಗೆ ಬೀಳಿಸುವಲ್ಲಿ ಇಲ್ಲಿನ ಅರಣ್ಯ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿದ್ದು,ಇದರಿಂದ ವಾರ್ಡ್‌ಗಳ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ.

ಕಳೆದ ನಾಲೈದು ತಿಂಗಳಿಂದಲೂ ರಾತ್ರಿ ವೇಳೆ ನಗರದ ವಿವಿಧ ವಾರ್ಡ್‌ಗಳಲ್ಲಿ ಚಿರತೆ ಪ್ರವೇಶದ ಬಗ್ಗೆ ವದಂತಿ ಹರಡಿತ್ತು. ಇದರಿಂದ ಬೆಟ್ಟದ ತಪ್ಪಲಿನಲ್ಲಿ ವಾಸಿಸುವ ಜನಸಾಮಾನ್ಯರು ಭಯಗೊಂಡಿದ್ದರು. ನಗರದ ಹೌಸಿಂಗ್‌ ಬೋರ್ಡ್‌ ಹಾಗೂ ಜನಸಾಮಾನ್ಯರು ವಾಸಿಸುವ ಬೆಟ್ಟದ ತಪ್ಪಲಿನ ವಾರ್ಡ್‌ಗಳಿಗೆ ಪ್ರವೇಶಿಸಿ ನಾಯಿ ಬೆಕ್ಕುಗಳ ಮೇಲೆ ಎರಗಿ ತಿಂದು ಪರಾರಿಯಾಗುತ್ತಿತ್ತು. ಕಳೆದ ಮೂರು ತಿಂಗಳಿಂದ ಸುಮಾರು 10 ರಿಂದ15ನಾಯಿಗಳನ್ನು ತಿಂದು ಪರಾರಿಯಾದ ಘಟನೆ ಬಗ್ಗೆ ಸಾರ್ವಜನಿಕ ವಲಯಗಳಲ್ಲಿ ಚರ್ಚೆ ನಡೆಯುತ್ತಿತ್ತು. ಈ ಬಗ್ಗೆ ನಗರದ ಜನತೆ ಇಲ್ಲಿನ ಅರಣ್ಯ ಇಲಾಖೆಯ ಅಧಕಾರಿಗಳಿಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆಗೆ ಮುಂದಾದ ಅರಣ್ಯ ಇಲಾಖೆ ಅಧಿಕಾರಿಗಳು ಪಟ್ಟಣದ ಹೌಸಿಂಗ್‌ ಬೋರ್ಡ್‌ ಬಳಿ ಚಿರತೆ ಬರುವ ಸ್ಥಳದಲ್ಲಿ ಬೋನ್ ಇರಿಸಿದ್ದರು.ರಾತ್ರಿ ಸುಮಾರು 8:30 ಸಮಯದಲ್ಲಿ ಸುಮಾರು ಎರಡು ವರ್ಷದ ಚಿರತೆಯೊಂದು ಬೋನಿಗೆ ಬಿದ್ದಿದೆ. ಬೋನಿಗೆ ಬಿದ್ದ ವಿಷಯ ತಿಳಿಯುತ್ತಿದ್ದಂತೆ ಭಾಗದ ಜನರ ನಿಟ್ಟುಸಿರು ಬಿಟ್ಟಿದ್ದು ಅರಣ್ಯ ಇಲಾಖೆಯ ಅಧಿಕಾರಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನೂ ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಬೋನಿನಲ್ಲಿ ಬಿದ್ದಿದ್ದ ಚಿರತೆಯನ್ನು ಸುರಕ್ಷಿತವಾಗಿ ಬೇರೆ ಕಡೆಗೆ ಸ್ಥಳಾಂತರಿಸಿದರು.