ಸಾರಾಂಶ
ಕನ್ನಡಪ್ರಭವಾರ್ತೆ ಹೊಸಕೋಟೆ ಶಿಕ್ಷಕರಿಗೂ ಆರ್ಥಿಕ ಶಕ್ತಿ ತುಂಬುವ ದೃಷ್ಠಿಯಿಂದ ಪತ್ತಿನ ಸಹಕಾರ ಸಂಘ ಸ್ಥಾಪನೆ ಮಾಡಿದ್ದು ಈ ಮೂಲಕ ಸಂಘದಲ್ಲಿ ಪಾರದರ್ಶಕವಾಗಿ ಆಡಳಿತ ನಡೆಸಲಾಗುತ್ತಿದೆ. ಎಂದು ಶಿಕ್ಷಣ ಇಲಾಖೆ ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಸ್.ಎಂ ಮುನಿರಾಜ್ ತಿಳಿಸಿದರು.ನಗರದ ನಿವೃತ್ತ ಸರ್ಕಾರಿ ನೌಕರರ ಭವನದಲ್ಲಿ ತಾಲೂಕು ಶಿಕ್ಷಣ ಇಲಾಖೆ ನೌಕರರ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನಡೆದ 2023-24 ನೇ ಸಾಲಿನ ವಾರ್ಷಿಕ ಸಭೆಯಲ್ಲಿ ಅವರು ಮಾತನಾಡಿದರು.2019 ರಲ್ಲಿ ನಾನು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿದ್ದ ಸಂಧರ್ಭದಲ್ಲಿ ಶಿಕ್ಷಕರ ಸಮಸ್ಯೆಗಳನ್ನು ಕಂಡಿದ್ದು ಅಂದಿನ ಪಧಾದಿಕಾರಿಗಳು ಹಿರಿಯ ಸಹೋಧ್ಯೋಗಿಗಳ ಸಹಕಾರದಿಂದ ಪತ್ತಿನ ಸಹಕಾರ ಸಂಘ ಸ್ಥಾಪಿಸಲಾಗಿ ಇಂದು 468 ಶಿಕ್ಷಕರು ಷೇರುದಾರರಾಗಿದ್ದು ಒಟ್ಟು ಸಂಘದಲ್ಲಿ ಸುಮಾರು 29 ಲಕ್ಷ ಠೇವಣಿ ಹೊಂದಿದ್ದು 30 ಷೇರುದಾರರಿಗೆ ಸಾಲ ಸೌಲಭ್ಯ ನೀಡಲಾಗಿದೆ, ಮುಂದಿನ ವರ್ಷದಿಂದ ಷೇರುದಾರರಿಗೆ ಆರೋಗ್ಯ ತಪಾಸಣಾ ಶಿಬಿರ, ಪ್ರತಿಭಾ ಪುರಸ್ಕಾರ, ನಿವೃತ್ತ ಶಿಕ್ಷಕರಿಗೆ ಗೌರವ ಸನ್ಮಾನ ಹೀಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ್ ಮಾತನಾಡಿ ಅತಿ ಕಡಿಮೆ ಅವದಿಯಲ್ಲಿ ಶಿಕ್ಷಕರೇ ಸೇರಿ ಪತ್ತಿನ ಸಹಕಾರ ಸಂಘ ಸ್ಥಾಪನೆ ಮಾಡಿ ಹೆಚ್ಚು ಸಾದನೆ ಮಾಡಿದ್ದು ಎಲ್ಲಾ ಶಿಕ್ಷಕರ ಅರ್ಥಿಕ ಸಮಸ್ಯೆ ಬಗೆಹರಿಸುವಲ್ಲಿ ಮಹತ್ತರವಾದ ಪಾತ್ರವಹಿಸಿದೆ ಶ್ಲಾಘನೀಯ, ಇದೇ ರೀತಿ ಶಿಕ್ಷಕರು ಹಾಗೂ ಸಹಕಾರಿಗಳು ಒಟ್ಟಾಗಿ, ಆರ್ಥಿಕ ಸಂಕಷ್ಟಲ್ಲಿರುವ ಶಿಕ್ಷಕರಿಗೆ ಅಸರೆಯಾಗಲಿ. ಈ ನಿಟ್ಟಿನಲ್ಲಿ ತಾಲೂಕಿನಲ್ಲಿರುವ ಎಲ್ಲಾ ಶಿಕ್ಷಕರು ಪತ್ತಿನ ಸಹಕಾರ ಸಂಘದಲ್ಲಿ ಷೇರು ಪಡೆದುಕೊಂಡು ಸಂಘದ ಅಭಿವೃದ್ದಿಗೆ ಕೈಜೋಡಿಸಬೇಕು ಎಂದರು.ಈ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಿಗೆ, ಜಿಲ್ಲಾ ಪ್ರಶಸ್ತಿ ಪಡೆದ ಶಿಕ್ಷಕರಿಗೆ ಹಾಗೂ ಷೇರುದಾರರ ಪ್ರತಿಭಾವಂತ ಮಕ್ಕಳಿಗೆ ಸನ್ಮಾನಿಸಿ ಗೌರವಿಸಲಾಯಿತು.
ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮುನಿಶಾಮಯ್ಯ, ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಶಂಕರಪ್ಪ, ನಿರ್ದೇಶಕರಾದ ನಾರಾಯಣಸ್ವಾಮಿ, ಮುನಿರಾಜ್, ರಮೇಶ್, ಪ್ರಕಾಶ್, ಲೋಕೇಶ್, ವಿಜಯಕುಮಾರ್, ಸಂಪಣ್ಣ, ಗೋಪಾಲ್, ಸಮಯ್ಯ, ತ್ರಿವೇಣಿ, ಮಮತಾ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಲ್ಲಾಬಕಾಶ್, ಸಹ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ ಮೊದಲಾದವರು ಹಾಜರಿದ್ದರು.