ಗ್ಯಾರಂಟಿ ಯೋಜನೆಗಳಿಂದ ಜನರ ಆರ್ಥಿಕ ಸಬಲೀಕರಣ: ಗಂಗಾಧರ್

| Published : Aug 07 2025, 12:45 AM IST

ಸಾರಾಂಶ

ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಮಧ್ಯವರ್ತಿಗಳ ಹಾವಳಿ ಇಲ್ಲದೆ ನೇರವಾಗಿ ಫಲಾನುಭವಿಗಳಿಗೆ ತಲುಪಿಸಿ ಆರ್ಥಿಕ ಶಕ್ತಿ ತುಂಬುತ್ತಿವೆ. ಹಳ್ಳಿಗಳಲ್ಲಿ ಮೈಕ್ರೋಫೈನಾನ್ಸ್ ಹಾವಳಿಗಳು ಸಾಮಾನ್ಯ ವ್ಯಕ್ತಿಗಳ ಶೋಷಣೆ ಮಾಡುತ್ತಿವೆ. ಮಹಿಳೆಯರು ತಮ್ಮ ವ್ಯಾಪ್ತಿಯಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ನಿಗ್ರಹಿಸಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಸಬಲೀಕರಣಕ್ಕೆ ನೆರವಾಗಿವೆ ಎಂದು ಮೈಷುರ್ಗ ಅಧ್ಯಕ್ಷ ಸಿ.ಡಿ.ಗಂಗಾಧರ್ ತಿಳಿಸಿದರು.

ತಾಲೂಕಿನ ದುದ್ದ ಗ್ರಾಮದಲ್ಲಿ ನಡೆದ ದುದ್ದ ಹೋಬಳಿ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನಗಳ ಕುರಿತ ಸಮಾವೇಶ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ, ಸರ್ಕಾರದ ಐದು ಗ್ಯಾರಂಟಿಗಳು ಪ್ರತಿ ಕುಟುಂಬಕ್ಕೆ ನೀಡುವ ಮೂಲಕ ಆರ್ಥಿಕ ಶಕ್ತಿ ನೀಡಿ ಗ್ಯಾರಂಟಿ ಯೋಜನೆಗಳಿಂದ ಪ್ರತಿಯೊಬ್ಬರ ತಲಾದಾಯದಲ್ಲಿ ಕರ್ನಾಟಕ ರಾಷ್ಟ್ರದಲ್ಲೇ ಮೊದಲ ಸ್ಥಾನದಲ್ಲಿದೆ ಎಂದರು.

ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಮಧ್ಯವರ್ತಿಗಳ ಹಾವಳಿ ಇಲ್ಲದೆ ನೇರವಾಗಿ ಫಲಾನುಭವಿಗಳಿಗೆ ತಲುಪಿಸಿ ಆರ್ಥಿಕ ಶಕ್ತಿ ತುಂಬುತ್ತಿವೆ. ಹಳ್ಳಿಗಳಲ್ಲಿ ಮೈಕ್ರೋಫೈನಾನ್ಸ್ ಹಾವಳಿಗಳು ಸಾಮಾನ್ಯ ವ್ಯಕ್ತಿಗಳ ಶೋಷಣೆ ಮಾಡುತ್ತಿವೆ. ಮಹಿಳೆಯರು ತಮ್ಮ ವ್ಯಾಪ್ತಿಯಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ನಿಗ್ರಹಿಸಬೇಕು ಎಂದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನಗಳ ಅನುಷ್ಠಾನ ಸಮಿತಿ ತಾಲೂಕು ಸದಸ್ಯ ಎಚ್.ಎಂ.ಉದಯ್‌ಕುಮಾರ್ ಮಾತನಾಡಿ,

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರೇರಣೆಯಿಂದ ವಿವಿಧ ರಾಜ್ಯಗಳಲ್ಲಿ ಇದೇ ರೀತಿಯ ಯೋಜನೆಗಳನ್ನು ಅಲ್ಲಿನ ಸರ್ಕಾರಗಳು ಜಾರಿ ಮಾಡುತ್ತಿವೆ. ನಮ್ಮ ಗ್ಯಾರಂಟಿ ಯೋಜನೆಗಳ ಸ್ಥಿರತೆಗೆ ಇದು ಸಾಕ್ಷಿ. ಇದರಿಂದ ಯುವಕರು, ಮಹಿಳೆಯರು ಆರ್ಥಿಕ ಸಬಲತೆ ಹೊಂದಿದ್ದಾರೆ ಎಂದರು.

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಎಲ್ಲ ಅಧಿಕಾರಿಗಳು ಕೈ ಜೋಡಿಸಬೇಕು. ಗ್ರಾಪಂ ಮಟ್ಟದಲ್ಲಿ ತಾಂತ್ರಿಕ ದೋಷಗಳನ್ನು ಸರಿಪಡಿಸಿ ಅರ್ಹ ಫಲಾನುಭವಿಗಳಗೆ ಯೋಜನೆಗಳು ಸಿಗುವಂತೆ ಎಲ್ಲರೂ ಕಾರ್ಯ ನಿರ್ವಹಿಸಬೇಕು ಎಂದರು.

ಪಂಚ ಗ್ಯಾರಂಟಿ ಅಧಿಕಾರಿಗಳ ಸಹಕಾರದಿಂದ ದುದ್ದ ಹೋಬಳಿಯ ೧೧ ಗ್ರಾಪಂನಲ್ಲಿ ಗ್ಯಾರಂಟಿ ಯೋಜನೆಗಳ ಸಮಸ್ಯೆ ಕುರಿತು ಸಭೆ ನೆಡೆಸಿ ಇದೀಗ ಗ್ಯಾರಂಟಿ ಯೋಜನೆಗಳ ಸಮಾವೇಶ ಮಾಡುತ್ತಿದ್ದೇವೆ ಎಂದರು.

ಜೂನ್ ತಿಂಗಳ ಗೃಹಲಕ್ಷ್ಮಿ ಹಣ ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ಮಹಿಳೆಯರಿಗೆ ಅವರ ಖಾತೆಗೆ ಡಿಬಿಟಿ ಮೂಲಕ ಪಾವತಿ ಮಾಡಲಾಗುತ್ತಿದೆ ಎಂದರು.

ಇದೇ ಸಂದರ್ಭದಲ್ಲಿ ಕೆ.ಎಸ್.ಪುಟ್ಟಣ್ಣಯ್ಯ ಫೌಂಡೇಶನ್ ವತಿಯಿಂದ ಮಹಿಳೆಯರು ಸ್ವಾವಲಂಬಿಯಾಗಲು ವಿವಿಧ ಇಲಾಖೆಗಳಿಂದ ದೊರೆಯುವ ಸಾಲ ಸೌಲಭ್ಯದ ಬಗ್ಗೆ ಹಾಗೂ ಮನೆಯಲ್ಲೇ ಸ್ವಂತ ಉದ್ಯೋಗ ಮಾಡಲು ಸವಿಸ್ತಾರವಾಗಿ ಮಹಿಳೆಯರಿಗೆ ಸ್ಮಿತಾ ಪುಟ್ಟಣ್ಣಯ್ಯನವರು ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಮಾವೇಶಕ್ಕೆ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭಾಗವಹಿಸಿದಾಗ ಅವರನ್ನು ಸನ್ಮಾನಿಸಲಾಯಿತು. ಸಮಾವೇಶದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕುಮಾರಸ್ವಾಮಿ, ಟಿಪಿಒ ವೆಂಕಟರಾಮ್, ಚಂಪಕಮಾಲಿನಿ, ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.