ಗ್ಯಾರಂಟಿಗಳಿಂದ ಜನರ ಆರ್ಥಿಕ ಶಕ್ತಿ ವೃದ್ಧಿ

| Published : Oct 17 2024, 12:01 AM IST

ಸಾರಾಂಶ

ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಾಲೂಕಿನ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪಿಸುವ ಸಲುವಾಗಿ ಮುಂಬರುವ ದಿನಗಳಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ ನಡೆಸುವ ಕುರಿತು ಈ ಸಭೆಯಲ್ಲಿ ಚರ್ಚಿಸಲಾಗಿದೆ. ಜೊತೆಗೆ ೫ ಗ್ಯಾರಂಟಿ ಯೋಜನೆಗಳ ಪೈಕಿ ೧ಯೋಜನೆಯ ಸುಮಾರು ೧೦೦ ಫಲಾನುಭವಿಗಳನ್ನು ಭೇಟಿ ಮಾಡುವ ಮೂಲಕ ಯೋಜನೆ ಸಮರ್ಪಕವಾಗಿ ತಲುಪುತ್ತಿರುವ ಮಾಹಿತಿ ಪಡೆಯುವ ಮೂಲಕ ಯೋಜನೆಯಿಂದಾಗಿರುವ ಅನುಕೂಲಗಳನ್ನು ಫಲಾನುಭವಿಗಳ ಮುಖಾಂತರ ಪಡೆಯಲಾಗುತ್ತದೆ ಎಂದು ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿಯ ಸಭೆಯು ಗ್ಯಾರಂಟಿ ಸಮಿತಿಯ ತಾಲೂಕು ಅಧ್ಯಕ್ಷ ಎಲ್.ಪಿ.ಪ್ರಕಾಶ್ ಗೌಡ ತಿಳಿಸಿದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ೪ನೇ ತ್ರೈಮಾಸಿಕ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿಯ ಸಭೆಯು ಗ್ಯಾರಂಟಿ ಸಮಿತಿಯ ತಾಲೂಕು ಅಧ್ಯಕ್ಷ ಎಲ್.ಪಿ.ಪ್ರಕಾಶ್ ಗೌಡ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ, ಹಿರಿಯ ವಕೀಲ ಎಲ್.ಪಿ.ಪ್ರಕಾಶ್‌ಗೌಡರವರು, ತಾಲೂಕಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಾಲೂಕಿನ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪಿಸುವ ಸಲುವಾಗಿ ಮುಂಬರುವ ದಿನಗಳಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ ನಡೆಸುವ ಕುರಿತು ಈ ಸಭೆಯಲ್ಲಿ ಚರ್ಚಿಸಲಾಗಿದೆ. ಜೊತೆಗೆ ೫ ಗ್ಯಾರಂಟಿ ಯೋಜನೆಗಳ ಪೈಕಿ ೧ಯೋಜನೆಯ ಸುಮಾರು ೧೦೦ ಫಲಾನುಭವಿಗಳನ್ನು ಭೇಟಿ ಮಾಡುವ ಮೂಲಕ ಯೋಜನೆ ಸಮರ್ಪಕವಾಗಿ ತಲುಪುತ್ತಿರುವ ಮಾಹಿತಿ ಪಡೆಯುವ ಮೂಲಕ ಯೋಜನೆಯಿಂದಾಗಿರುವ ಅನುಕೂಲಗಳನ್ನು ಫಲಾನುಭವಿಗಳ ಮುಖಾಂತರ ಪಡೆಯಲಾಗುತ್ತದೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ನೇತೃತ್ವದಲ್ಲಿ ಸುಭದ್ರ ಸರ್ಕಾರ ಅಸ್ತಿತ್ವದಲ್ಲಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಉದ್ದೇಶ ೫ ಗ್ಯಾರಂಟಿ ಯೋಜನೆಗಳ ಮೂಲಕ ಆರ್ಥಿಕವಾಗಿ ಜನರಿಗೆ ಹೆಚ್ಚು ಶಕ್ತಿ ತುಂಬುವ ಕೆಲಸವನ್ನು ಮಾಡುತ್ತಿದೆ. ತಾಲೂಕಿನಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಭೆ ಆಯೋಜಿಸುವ ಮೂಲಕ ಜನರ ಸಮಸ್ಯೆಗಳನ್ನು ಆಲಿಸಲಾಗುತ್ತದೆ ಎಂದರು.

ತಾಲೂಕಿನಲ್ಲಿ ಶಕ್ತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜೋತಿ, ಯೋಜನೆಗಳ ಅಂಕಿ ಅಂಶಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಂದ ಪ್ರತಿ ಸಭೆಯಲ್ಲಿ ಪಡೆದುಕೊಂಡು ಫಲಾನುಭವಿಗಳಿಗೆ ಸರ್ಕಾರದ ಯೋಜನೆ ತಲುಪಿಸುವ ಕುರಿತು ಹೆಚ್ಚಿನ ಗಮನ ಹರಿಸಲಾಗುತ್ತಿದೆ. ತಾಲೂಕಿನಲ್ಲಿ ೮೧.೨೫೮ ಪಡಿತರ ಕಾಡುಗಳಿದ್ದು ಅದರಲ್ಲಿ ೬೮೨೧ ಎಪಿಎಲ್ ೩೦೭೭ ಅಂತ್ಯೋದಯ ಕಾರ್ಡ್, ೭೦೫೬೦ ಬಿಪಿಎಲ್ ಕಾರ್ಡ್‌ದಾರರಿದ್ದಾರೆ. ಇವರಿಗೆ ಅನ್ನಭಾಗ್ಯ ಯೋಜನೆ ಮೂಲಕ ಸರ್ಕಾರದಿಂದ ಪ್ರತಿ ಫಲಾನುಭವಿಗಳಿಗೆ ೫ ಕೆ.ಜಿಯ ಅಕ್ಕಿ ಹಣ ತಲುಪುತ್ತಿದೆ. ಗೃಹ ಜ್ಯೋತಿ ಯೋಜನೆ ಮೂಲಕ ತಾಲೂಕಿನ ಜನರಿಗೆ ಹೆಚ್ಚಿನ ಅನುಕೂಲವಾಗಿದೆ ಎಂದರು.

ಕೆಲವು ಅಂಗನವಾಡಿಗಳಲ್ಲಿ ಗೋಧಿ ಸೇರಿದಂತೆ ಕೆಲ ಆಹಾರ ಪದಾರ್ಥಗಳನ್ನು ಕಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ದೂರು ಬಂದಿದ್ದು, ಈ ಬಗ್ಗೆ ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಗಮನ ಹರಿಸಬೇಕು ಹಾಗೂ ತಾಲೂಕಿನ ನುಗ್ಗೇಹಳ್ಳಿ ಹೋಬಳಿಯ ಟಿ.ರಂಗಾಪುರ ಹಾಗೂ ಹೆಬ್ಬಾಳಲು ಗ್ರಾಮದ ಅಂಗನವಾಡಿ ಕೇಂದ್ರಗಳ ಮೇಲೆ ಗ್ರಾಮಸ್ಥರು ದೂರುಗಳಿದ್ದು, ಈ ಬಗ್ಗೆ ಅಧಿಕಾರಿಗಳು ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಸಭೆಯಲ್ಲಿ ಸಮಿತಿಯ ಸದಸ್ಯರಾದ ಎಸ್.ಎಂ.ಜನಾರ್ದನ್, ಮಿಲಿಟರಿ ಮಂಜು,ಗಣೇಶ್, ನಾಗೇಶ್ ಕೆಎನ್, ಎಚ್ ಕೆ ರಂಗಸ್ವಾಮಿ, ಶಕ್ತಿ ಹಾಗೂ ಗೃಹಲಕ್ಷ್ಮಿ ಯೋಜನೆಗಳಲಾಗುತ್ತಿರುವ ಸಮಸ್ಯೆಯ ಕುರಿತು ಸಭೆಯ ಗಮನ ಸೆಳೆದರು.

ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಹರೀಶ್, ಚೆಸ್ಕಾಂ ಇಲಾಖೆ ಉಪ ಕಾರ್ಯಪಾಲಕ ಎಂಜಿನಿಯರ್‌ ವಜ್ರ ಕುಮಾರ್, ಸಮಿತಿಯ ಸದಸ್ಯರಾದ ನವೀನ್ ಕುಮಾರ್‌, ಪ್ರಕಾಶ್ ಎಚ್ ಆರ್‌, ನಿಶ್ಚಲ್, ಬಿ ಆರ್‌ ಕೆಂಪೇಗೌಡ, ಮಂಜುನಾಥ್, ರಂಗಸ್ವಾಮಿ ಎಸಿ, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಗಿರೀಶ್, ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿ ಹಾಗೂ ಆಹಾರ ನಾಗರಿಕ ಅಧಿಕಾರಿಗಳು ಮತ್ತು ಚೆಸ್ಕಾ ಇಲಾಖೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.