ಪ್ರಮೋದ್‌ ವಿರುದ್ಧ ಎಫ್‌ಐಆರ್‌, ಯಶ್ಪಾಲ್‌ ಅಮಾನತು: ಕಿಶೋರ್‌ ಕುಮಾರ್‌ ಖಂಡನೆ

| Published : Mar 25 2025, 12:48 AM IST

ಪ್ರಮೋದ್‌ ವಿರುದ್ಧ ಎಫ್‌ಐಆರ್‌, ಯಶ್ಪಾಲ್‌ ಅಮಾನತು: ಕಿಶೋರ್‌ ಕುಮಾರ್‌ ಖಂಡನೆ
Share this Article
  • FB
  • TW
  • Linkdin
  • Email

ಸಾರಾಂಶ

ನ್ಯಾಯಸಮ್ಮತ ತೀರ್ಮಾನಕ್ಕೆ ಆಗ್ರಹಿಸಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಫ್ಐಆರ್ ದಾಖಲಿಸಿದ್ದಾರೆ. ವಿಧಾನ ಸಭೆಯಲ್ಲಿ ಶಾಸಕ ಯಶ್ಪಾಲ್ ಸುವರ್ಣ ಸಹಿತ 18 ಶಾಸಕರನ್ನು ಅಮಾನತುಗೊಳಿಸಲಾಗಿದ್ದು, ರಾಜ್ಯ ಸರ್ಕಾರದ ನಡೆ ಸಂವಿಧಾನ ವಿರೋಧಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತೀವ್ರವಾಗಿ ಖಂಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ಮಲ್ಪೆಯಲ್ಲಿ ಮಹಿಳೆಯ ಮೇಲೆ ನಡೆದ ಪ್ರಕರಣದ ಹಿನ್ನೆಲೆಯಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ನ್ಯಾಯಸಮ್ಮತ ತೀರ್ಮಾನಕ್ಕೆ ಆಗ್ರಹಿಸಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಫ್ಐಆರ್ ದಾಖಲಿಸಿದ್ದಾರೆ. ವಿಧಾನ ಸಭೆಯಲ್ಲಿ ಶಾಸಕ ಯಶ್ಪಾಲ್ ಸುವರ್ಣ ಸಹಿತ 18 ಶಾಸಕರನ್ನು ಅಮಾನತುಗೊಳಿಸಲಾಗಿದ್ದು, ರಾಜ್ಯ ಸರ್ಕಾರದ ನಡೆ ಸಂವಿಧಾನ ವಿರೋಧಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತೀವ್ರವಾಗಿ ಖಂಡಿಸಿದ್ದಾರೆ.

ಕಳ್ಳರ ಮೇಲೆ ಕ್ರಮ ಜರಗಿಸದೆ, ನ್ಯಾಯ ಕೇಳಲು ಬಂದವರ ವಿರುದ್ಧ ಪ್ರಕರಣ ದಾಖಲಿಸಿರುವುದು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಳಿ ತಪ್ಪಿರುವುದಕ್ಕೆ ಜ್ವಲಂತ ನಿದರ್ಶನವಾಗಿದೆ ಎಂದವರು ಹೇಳಿದ್ದಾರೆ.

ಈ ಹಿಂದೆ ವಿಧಾನ ಪರಿಷತ್ ಕಲಾಪದಲ್ಲಿ ಸಭಾಧ್ಯಕ್ಷರನ್ನು ಪೀಠದಿಂದ ಎಳೆದಾಡಿದ್ದ ಕಾಂಗ್ರೆಸ್ ಶಾಸಕರು ಗೂಂಡಾಗಿರಿ ಸಂಸ್ಕೃತಿಯ ದಿವ್ಯ ದರ್ಶನ ನೀಡಿದ್ದರು. ಹನಿಟ್ರ್ಯಾಪ್ ಪ್ರಕರಣ ಹಾಗೂ ಧರ್ಮಾಧಾರಿತ ಮೀಸಲಾತಿಯನ್ನು ಸದನದಲ್ಲಿ ವಿರೋಧಿಸಿರುವ ಶಾಸಕ ಯಶ್ಪಾಲ್ ಸುವರ್ಣ ಸಹಿತ 18 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿರುವ ಸ್ಪೀಕರ್ ನಡೆ ಸಂವಿಧಾನ ವಿರೋಧಿಯಾಗಿದೆ ಎಂದವರು ಆರೋಪಿಸಿದ್ದಾರೆ

ಕೇವಲ ಅಧಿಕಾರದ ದಾಹಕ್ಕಾಗಿ ರಾಜ್ಯವನ್ನು ಸಾಲದ ಶೂಲಕ್ಕೇರಿಸಿ ರಾಜ್ಯದ ಹಿತ ಬಲಿಕೊಡುತ್ತಿರುವ ಕಾಂಗ್ರೆಸ್ ಸರಕಾರದ ಸಂವಿಧಾನ ವಿರೋಧಿ, ಜನ ವಿರೋಧಿ ನೀತಿಯನ್ನು ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದ್ದು ಸೂಕ್ತ ಸಮಯದಲ್ಲಿ ಕಾಂಗ್ರೆಸ್ಸಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.