ಉತ್ತರಾಖಂಡ್‌ನಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಕೂಡಲೇ ರದ್ದುಪಡಿಸುವಂತೆ ಆಗ್ರಹಿಸಿ ನಗರ ಕಾಂಗ್ರೆಸ್ ನೇತೃತ್ವದಲ್ಲಿ ಕುಶಾಲನಗರದಲ್ಲಿ ಪ್ರತಿಭಟನೆ ನಡೆಯಿತು.

ಕುಶಾಲನಗರ : ಉತ್ತರಾಖಂಡ್‌ನಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಕೂಡಲೇ ರದ್ದುಪಡಿಸುವಂತೆ ಆಗ್ರಹಿಸಿ ನಗರ ಕಾಂಗ್ರೆಸ್ ನೇತೃತ್ವದಲ್ಲಿ ಕುಶಾಲನಗರದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಪಾಲ್ಗೊಂಡ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ ಮಾಡಿದ್ದನ್ನು ಪ್ರಶ್ನಿಸಿದ ರಾಹುಲ್ ಗಾಂಧಿ ಅವರ ಮೇಲೆ ಸೇಡಿನಿಂದ ಪ್ರಕರಣ ದಾಖಲಿಸಲಾಗಿದೆ. ಕೂಡಲೇ ಎಫ್‌ಐಆರ್ ರದ್ದುಪಡಿಸಬೇಕು ಎಂದು ಆಗ್ರಹಿಸಿದರು.ಕೇಂದ್ರ ಸರ್ಕಾರ ದಲಿತ ವಿರೋಧಿ ಧೋರಣೆ ಅನುಸರಿಸುತ್ತಿದ್ದು ಪ್ರತಿಪಕ್ಷ ನಾಯಕ, ರಾಹುಲ್ ಗಾಂಧಿ ಅವರ ಧ್ವನಿಯನ್ನು ಹತ್ತಿಕ್ಕಲು ಯತ್ನಿಸುತ್ತಿದೆ ಎಂದು ಹೇಳಿದರು.ಪ್ರತಿಭಟನೆಯಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡೂರಾವ್. ಕುಶಾಲ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ. ಪ್ರಮುಖರಾದ ಪ್ರಕಾಶ್. ಕಿರಣ್, ಶಿವಶಂಕರ್, ಹಮೀದ್ ಕಾರ್ಯಕರ್ತರು ಪಾಲ್ಗೊಂಡಿದ್ದರು.