ಸಾರಾಂಶ
ಸ್ವಾಮೀಜಿ ಅವರಿಗೆ ಈಗಾಗಲೇ ವಯಸ್ಸಾಗಿದ್ದು, ಹಿರಿಯರಾಗಿರುವ ಅವರ ಬಾಯ್ತಪ್ಪಿನಿಂದ ಹೇಳಿಕೆ ನೀಡಿದ್ದಾರೆ. ತಮ್ಮ ಹೇಳಿಕೆ ತಪ್ಪಾಗಿದೆಯೆಂದು ಕ್ಷಮೆಯನ್ನೂ ಕೇಳಿದ್ದಾರೆ. ಅದನ್ನು ಪರಿಗಣಿಸಿ, ಸರ್ಕಾರ ಎಫ್‌ಐಆರ್‌ನ್ನು ಹಿಂಪಡೆಯಬೇಕು. ಒಂದು ವೇಳೆ ಸರ್ಕಾರ ಅವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದರೆ ಒಕ್ಕಲಿಗ ಸಮುದಾಯದ ಸೇರಿದಂತೆ ಎಲ್ಲಾ ಸಂಘ ಸಂಸ್ಥೆಗಳು ಜೊತೆಗೂಡಿ ಹೋರಾಟಕ್ಕಿಳಿಯಲಾಗುವುದು.
ಕನ್ನಡಪ್ರಭ ವಾರ್ತೆ ಮಂಡ್ಯ
ವಿಶ್ವ ಮಾನವ ಒಕ್ಕಲಿಗರ ಮಠದ ಶ್ರೀಕುಮಾರ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ನ್ನು ಹಿಂಪಡೆಯಬೇಕು ಎಂದು ಒಕ್ಕಲಿಗ ಸೇವಾ ಟ್ರಸ್ಟ್‌ನ ಅಧ್ಯಕ್ಷ ಚಿಕ್ಕೋನಹಳ್ಳಿ ತಮ್ಮಯ್ಯ ಸರ್ಕಾರವನ್ನು ಒತ್ತಾಯಿಸಿದರು.ಸ್ವಾಮೀಜಿ ಅವರಿಗೆ ಈಗಾಗಲೇ ವಯಸ್ಸಾಗಿದ್ದು, ಹಿರಿಯರಾಗಿರುವ ಅವರ ಬಾಯ್ತಪ್ಪಿನಿಂದ ಹೇಳಿಕೆ ನೀಡಿದ್ದಾರೆ. ತಮ್ಮ ಹೇಳಿಕೆ ತಪ್ಪಾಗಿದೆಯೆಂದು ಕ್ಷಮೆಯನ್ನೂ ಕೇಳಿದ್ದಾರೆ. ಅದನ್ನು ಪರಿಗಣಿಸಿ, ಸರ್ಕಾರ ಎಫ್‌ಐಆರ್‌ನ್ನು ಹಿಂಪಡೆಯಬೇಕು ಒಂದು ವೇಳೆ ಸರ್ಕಾರ ಅವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದರೆ ಒಕ್ಕಲಿಗ ಸಮುದಾಯದ ಸೇರಿದಂತೆ ಎಲ್ಲಾ ಸಂಘ ಸಂಸ್ಥೆಗಳು ಜೊತೆಗೂಡಿ ಹೋರಾಟಕ್ಕಿಳಿಯುವುದಾಗಿ ಎಂದು ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.
ಟ್ರಸ್ಟ್‌ನ ಕಾರ್ಯಾಧ್ಯಕ್ಷ ಎಲ್.ಕೃಷ್ಣ ಮಾತನಾಡಿ, ಸ್ವಾಮೀಜಿಗಳು ಉದ್ದೇಶಪೂರ್ವಕವಾಗಿ ಹೇಳಿಕೆ ನೀಡಿಲ್ಲ. ಜೊತೆಗೆ ಕ್ಷಮೆಯಾಚಿಸಿದ್ದಾರೆ. ಆದರೂ ಅವರ ವಿರುದ್ಧ ಪ್ರಕರಣ ದಾಖಲಿಸಿ ವಿಚಾರಣೆಗೆ ನೋಟಿಸ್ ನೀಡಿರುವುದು ಸರಿಯಲ್ಲ. ಅವರ ಹಿರಿತನಕ್ಕಾದರೂ ಸರ್ಕಾರ ಬೆಲೆ ನೀಡಬೇಕಿತ್ತು ಎಂದರು.ರಾಜ್ಯದ ರಾಜಕೀಯ ಮುಖಂಡರು ಈ ಬಗ್ಗೆ ಗಮನ ಹರಿಸಿ ಎಫ್‌ಐಆರ್ ಹಿಂತೆಗೆಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಈ ರೀತಿ ಸ್ವಾಮೀಜಿಗಳ ಮೇಲೆ ತನಿಖೆಯಾದರೆ ಒಕ್ಕಲಿಗ ಸಮಾಜಕ್ಕೆ ಕಳಂಕವಾಗಲಿದೆ. ಸರ್ಕಾರ ಸ್ವಾಮೀಜಿಗಳ ವಿರುದ್ಧ ವಿಚಾರಣೆ ರದ್ದು ಮಾಡಬೇಕೆಂದು ಒತ್ತಾಯಿಸಿದರು.
ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಕೆ.ಸಿ.ರವೀಂದ್ರ ಮಾತನಾಡಿ, ಸ್ವಾಮೀಜಿಗಳು ಮಾತನಾಡುವ ವೇಳೆ ಉದ್ವೇಗಕ್ಕೊಳಗಾಗಿದ್ದಾರೆ. ಕ್ಷಮೆಯನ್ನೂ ಕೇಳಿದ್ದಾರೆ. ಇದನ್ನು ಮುಂದುವರೆಸದೇ ಪ್ರಕರಣದಿಂದ ಸ್ವಾಮೀಜಿಯವರನ್ನು ಖುಲಾಸೆ ಮಾಡಬೇಕು ಎಂದು ಆಗ್ರಹಿಸಿದರು.ಟ್ರಸ್ಟ್‌ನ ರಾಜ್ಯ ಉಪಾಧ್ಯಕ್ಷ ಕೃಷ್ಣೇಗೌಡ, ಚಂದ್ರಶೇಖರ್ ಗೋಷ್ಠಿಯಲ್ಲಿದ್ದರು.