ಪೂಂಜ ಮೇಲೆ ಎಫ್‌ಐಆರ್: ಉಡುಪಿ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ

| Published : May 24 2024, 12:53 AM IST

ಪೂಂಜ ಮೇಲೆ ಎಫ್‌ಐಆರ್: ಉಡುಪಿ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಬಿಜೆಪಿ ಕಾರ್ಯಕರ್ತರ ಮೇಲೆ ನಿರಂತರವಾಗಿ ಸುಳ್ಳು ಕೇಸುಗಳನ್ನು ದಾಖಲಿಸಿ ದೌರ್ಜನ್ಯ ಮಾಡುತ್ತಿದೆ ಎಂದು ಯುವಮೋರ್ಚಾ ಜಿಲ್ಲಾಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಆರೋಪಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಬೆಳ್ತಂಗಡಿ ಶಾಸಕ, ರಾಜ್ಯ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಂಜ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ರಾಜಕೀಯ ದುರುದ್ದೇಶದಿಂದ ಎಫ್ಐಆರ್ ದಾಖಲಿಸಿ ಬಂಧನಕ್ಕೆ ಯತ್ನಿಸುತ್ತಿರುವುದರ ವಿರುದ್ಧ ಜಿಲ್ಲಾ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಗುರುವಾರ ಅಜ್ಜರಕಾಡು ಹುತಾತ್ಮ ಯೋಧರ ಸ್ಮಾರಕದ ಎದುರು ಬೃಹತ್ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಪ್ರತಿಭಟನೆ ನೇತೃತ್ವ ವಹಿಸಿದ್ದ ಯುವಮೋರ್ಚಾ ಜಿಲ್ಲಾಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಬಿಜೆಪಿ ಕಾರ್ಯಕರ್ತರ ಮೇಲೆ ನಿರಂತರವಾಗಿ ಸುಳ್ಳು ಕೇಸುಗಳನ್ನು ದಾಖಲಿಸಿ ದೌರ್ಜನ್ಯ ಮಾಡುತ್ತಿದೆ. ಈಗ ಕಾರ್ಯಕರ್ತರ ರಕ್ಷಣೆಗೆ ಬಂದ ಬೆಳ್ತಂಗಡಿ ಶಾಸಕರ ಮೇಲೆ ಸುಳ್ಳು ಕೇಸ್ ದಾಖಲಿಸಿ ಅವರನ್ನು ಬಂಧಿಸುವ ಹುನ್ನಾರ ನಡೆದಿದ್ದು, ಮುಂದೆ ಇಂತಹ ಘಟನೆ ನಡೆದಲ್ಲಿ ಯುವ ಮೋರ್ಚಾ ರಸ್ತೆಗಿಳಿದು ಹೋರಾಟ ಮಾಡಲಿದೆ ಎಂದರು.

ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ ಮಾತನಾಡಿ, ಅಧಿಕಾರಕ್ಕೆ ಬಂದು ಒಂದು ವರ್ಷದಲ್ಲಿ 100 ಮೀ. ರಸ್ತೆ ಮಾಡದ ಕಾಂಗ್ರೆಸ್ ಸರ್ಕಾರ, ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡುತ್ತಿದೆ ಎಂದು ಹೇಳಿದರು.

ಪಕ್ಷದ ಪ್ರಮುಖರಾದ ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಅಲೆವೂರು, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಶಾಂಕ್ ಶಿವತ್ತಾಯ, ಅಭಿರಾಜ್ ಸುವರ್ಣ, ಉಪಾಧ್ಯಕ್ಷರಾದ ಸಚಿನ್, ಪ್ರಸಾದ್ ಬಿಲ್ಲವ, ಅರ್ಜುನ್ ಪ್ರಭು, ಯುವಮೋರ್ಚಾ ಮಂಡಲ ಅಧ್ಯಕ್ಷರಾದ ಕಿರಣ್ ಪೂಜಾರಿ ತೆಕ್ಕಟ್ಟೆ, ಗಜೇಂದ್ರ ಎಸ್., ಬಿ.ಸೋನು ಪೂಜಾರಿ ಪಾಂಗಳ, ಶ್ರೀವತ್ಸ ಉಡುಪಿ, ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿಗಳಾದ ಪ್ರದೀಪ್ ಕುಂದರ್, ಪ್ರವೀಣ್ ಸೋಮಯ್ಯ, ಮಹಿಳಾ ಮೋರ್ಚಾ ಪ್ರಮುಖರಾದ ನಳಿನಿ ಪ್ರದೀಪ್, ಅಶ್ವಿನಿ ಶೆಟ್ಟಿ ಮತ್ತು ವಿವಿಧ ಮಂಡಲದ ಯುವಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.