ಈಟ್‌ ಲೆನಿ ಬಿಸ್ಕತ್‌ ಕಾರ್ಖಾನೆಯಲ್ಲಿ ಅಗ್ನಿ ಅವಘಡ

| Published : Oct 14 2023, 01:02 AM IST

ಈಟ್‌ ಲೆನಿ ಬಿಸ್ಕತ್‌ ಕಾರ್ಖಾನೆಯಲ್ಲಿ ಅಗ್ನಿ ಅವಘಡ
Share this Article
  • FB
  • TW
  • Linkdin
  • Email

ಸಾರಾಂಶ

ಹಾರೋಹಳ್ಳಿ: ಹಾರೋಹಳ್ಳಿ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಗ್ಯಾಸ್ ಪೈಪ್ ಲೈನ್ ನಲ್ಲಿ ಅನಿಲ ಸೋರಿಕೆಯಿಂದ ಅಗ್ನಿ ಅವಘಡ ಸಂಭವಿಸಿದೆ.
ಹಾರೋಹಳ್ಳಿ: ಹಾರೋಹಳ್ಳಿ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಗ್ಯಾಸ್ ಪೈಪ್ ಲೈನ್ ನಲ್ಲಿ ಅನಿಲ ಸೋರಿಕೆಯಿಂದ ಅಗ್ನಿ ಅವಘಡ ಸಂಭವಿಸಿದೆ. ಬಿಸ್ಕತ್‌ ತಯಾರಿಸುವ ಕಾರ್ಖಾನೆ ಈಟ್ ಲೆನಿಯಲ್ಲಿ ಗುರುವಾರ ಸಂಜೆ ಅಗ್ನಿ ಅವಘಡ ಸಂಭವಿಸಿದ್ದು ಲಕ್ಷಾಂತರ ರುಪಾಯಿ ನಷ್ಟ ಉಂಟಾಗಿದೆ. ಕೈಗಾರಿಕೆಯ ಹೊರಗಡೆ ಗ್ಯಾಸ್ ಪೈಪ್ ಲೈನ್ ಹೋಗಿದ್ದು ಲೀಕೇಜ್ ಉಂಟಾಗಿದ್ದರಿಂದ ಕಾರ್ಖಾನೆಯ ಬಳಿ ಇರುವ ಸೆಕ್ಯೂರಿಟಿ ರೂಮಿಗೂ ಬೆಂಕಿಗೆ ಆಹುತಿಯಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿ ಆಗಬಹುದಾದ ದೊಡ್ಡ ಅನಾಹುತ ತಪ್ಪಿಸಿದ್ದಾರೆ. ಸ್ಥಳಕ್ಕೆ ಹಾರೋಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.