ಹೆಬ್ರಿ ತಾಲೂಕಿನ ವಿವಿಧ ಗ್ರಾಮಗಳಿಂದ ಸಂಗ್ರಹಿಸಲಾಗುವ ತ್ಯಾಜ್ಯ ವಿಂಗಡಣೆ ಮತ್ತು ಸಂಸ್ಕರಣೆ ಮಾಡುವ ಎಂಆರ್‌ಎಫ್ ಘಟಕಕ್ಕೆ ಶನಿವಾರ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರು. ನಷ್ಟ ಉಂಟಾಗಿದೆ.

ಹೆಬ್ರಿ: ಹೆಬ್ರಿ ತಾಲೂಕಿನ ವಿವಿಧ ಗ್ರಾಮಗಳಿಂದ ಸಂಗ್ರಹಿಸಲಾಗುವ ತ್ಯಾಜ್ಯ ವಿಂಗಡಣೆ ಮತ್ತು ಸಂಸ್ಕರಣೆ ಮಾಡುವ ಎಂಆರ್‌ಎಫ್ ಘಟಕಕ್ಕೆ ಶನಿವಾರ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರು. ನಷ್ಟ ಉಂಟಾಗಿದೆ.ಹೆಬ್ರಿ ಗ್ರಾಪಂ ವ್ಯಾಪ್ತಿಯ ತ್ಯಾಜ್ಯ ನಿರ್ವಾಹಣಾ ಘಟಕ ಬಳಿ ಇರುವ ಎಂಆರ್‌ಎಫ್ ಘಟಕದಲ್ಲಿ ಮಧ್ಯಾಹ್ನ ವೇಳೆ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ವ್ಯಾಪಿಸಿ ಘಟಕದೊಳಗಿನ ಪ್ಲಾಸ್ಟಿಕ್ ಹಾಗೂ ಇತರೆ ಮರು ಬಳಕೆ ಸಾಮಗ್ರಿಗಳನ್ನು ಆವರಿಸಿತು. ಘಟಕದಲ್ಲಿ ಸಂಗ್ರಹಿಸಿದ್ದ ಉಪಕರಣಗಳು, ಯಂತ್ರೋಪಕರಣಗಳು ಮತ್ತು ತ್ಯಾಜ್ಯ ವಿಂಗಡಣೆ ಸಾಮಗ್ರಿಗಳು ಬೆಂಕಿಗಾಹುತಿಯಾಗಿದ್ದು, ಲಕ್ಷಾಂತರ ರು. ನಷ್ಟ ಸಂಭವಿಸಿದೆ.ಕಾರ್ಕಳ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಹಲವು ಗಂಟೆಗಳ ಪ್ರಯತ್ನದ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಸ್ಥಳೀಯರು ಸಹಕಾರ ನೀಡಿದರು. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ. ಘಟನೆ ಸಂಬಂಧ ಪೊಲೀಸರು ಹಾಗೂ ಸಂಬಂಧಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಘಟನೆಯಿಂದ ಗ್ರಾಪಂನ ತ್ಯಾಜ್ಯ ವಿಂಗಡಣೆ ಕಾರ್‍ಯಕ್ಕೆ ತಾತ್ಕಾಲಿಕ ಅಡಚಣೆ ಉಂಟಾಗಿದ್ದು, ಶೀಘ್ರದಲ್ಲೇ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಪಂಚಾಯಿತಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಕಳೆದ ಮೂರು ವರ್ಷಗಳ ಹಿಂದೆ ಈ ಘಟಕ ಉದ್ಘಾಟನೆಗೊಂಡಿತ್ತು.