ಕನ್ನಡಪ್ರಭ ವಾರ್ತೆ ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿರುವ ಪ್ರತಿಷ್ಠಿತ ಈಫಾ ಖಾಸಗಿ ಹೋಟೆಲ್‌ನಲ್ಲಿ ಶನಿವಾರ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಹೋಟೆಲ್ ಒಳಗೆ ಹೊಗೆ ಕಾಣಿಸಿಕೊಂಡ ತಕ್ಷಣ ಸಿಬ್ಬಂದಿಗಳು ಎಚ್ಚೆತ್ತುಕೊಂಡು ಒಳಗಿದ್ದ ಗ್ರಾಹಕರನ್ನು ತಕ್ಷಣವೇ ಸುರಕ್ಷಿತವಾಗಿ ಹೊರಗೆ ಕಳುಹಿಸಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದ ಕ್ಲಬ್ ರಸ್ತೆಯಲ್ಲಿರುವ ಪ್ರತಿಷ್ಠಿತ ಈಫಾ ಖಾಸಗಿ ಹೋಟೆಲ್‌ನಲ್ಲಿ ಶನಿವಾರ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಹೋಟೆಲ್ ಒಳಗೆ ಹೊಗೆ ಕಾಣಿಸಿಕೊಂಡ ತಕ್ಷಣ ಸಿಬ್ಬಂದಿಗಳು ಎಚ್ಚೆತ್ತುಕೊಂಡು ಒಳಗಿದ್ದ ಗ್ರಾಹಕರನ್ನು ತಕ್ಷಣವೇ ಸುರಕ್ಷಿತವಾಗಿ ಹೊರಗೆ ಕಳುಹಿಸಿದರು.
ಈ ವೇಳೆ ಬೆಂಕಿ ನಂದಿಸಲು ಹೋಟೆಲ್ ಸಿಬ್ಬಂದಿ ಹರಸಾಹಸ ಪಟ್ಟರು. ಘಟನೆಯ ಸಂದರ್ಭದಲ್ಲಿ ಕೆಲವರು ವಿಡಿಯೋ ಚಿತ್ರೀಕರಣ ನಡೆಸಲು ಮುಂದಾದಾಗ, ಅದನ್ನು ತಡೆದು ಸಿಬ್ಬಂದಿಗಳು ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ತಕ್ಷಣದ ಕ್ರಮದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಘಟನೆ ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.