ಸಾರಾಂಶ
ಗಡಗಿ ಚೆನ್ನಪ್ಪ ವೃತ್ತದಲ್ಲಿ ಜರುಗಿದ ಪ್ರತಿಭಟನೆಯ ನೇತೃತ್ವವನ್ನು ಪಕ್ಷದ ಜಿಲ್ಲಾಧ್ಯಕ್ಷ ದಮ್ಮೂರು ಶೇಖರ್ ವಹಿಸಿದ್ದರು. ಅಲ್ಲಿಂದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ತೆರಳಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿಪತ್ರ ಕಳಿಸಿಕೊಟ್ಟರು.
ಬಳ್ಳಾರಿ: ಗಂಗಾವತಿ ಶಾಸಕ ಜಿ. ಜನಾರ್ದನ ರೆಡ್ಡಿ ಅವರ ಕುಟೀರಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಶಾಸಕ ಜನಾರ್ದನ ರೆಡ್ಡಿಯವರ ಜನಪ್ರಿಯತೆಯನ್ನು ಸಹಿಸದ ಕೆಲವು ವಿರೋಧಿ ಶಕ್ತಿಗಳು ಗಂಗಾವತಿಯ ಬಳಿಯ ಅಂಜನಾದ್ರಿ ಬೆಟ್ಟದ ಬಳಿಯ ಕುಟೀರಕ್ಕೆ ಬೆಂಕಿ ಹಚ್ಚಿದ್ದಾರೆ. ಇದರಿಂದ ಕುಟೀರದಲ್ಲಿ ಪೀಠೋಪಕರಣಗಳು ಸುಟ್ಟು ಕರಕಲಾಗಿವೆ. ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡು ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.ಇಲ್ಲಿನ ಗಡಗಿ ಚೆನ್ನಪ್ಪ ವೃತ್ತದಲ್ಲಿ ಜರುಗಿದ ಪ್ರತಿಭಟನೆಯ ನೇತೃತ್ವವನ್ನು ಪಕ್ಷದ ಜಿಲ್ಲಾಧ್ಯಕ್ಷ ದಮ್ಮೂರು ಶೇಖರ್ ವಹಿಸಿದ್ದರು. ಅಲ್ಲಿಂದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ತೆರಳಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿಪತ್ರ ಕಳಿಸಿಕೊಟ್ಟರು.
ಪಕ್ಷದ ಪ್ರಮುಖರಾದ ಕೆ.ಎಸ್. ದಿವಾಕರ್, ದರಪ್ಪ ನಾಯಕ, ಮುನ್ನಾಭಾಯಿ, ವೆಂಕಟರಮಣ, ಮಲ್ಲಿಕಾರ್ಜುನ ಆಚಾರ್, ಹುಂಡೇಕರ್ ರಾಜೇಶ್, ಡಿ. ವಿಜಯಕುಮಾರ್, ಹಂಪಿ ರಮಣ, ರೋಸಿರೆಡ್ಡಿ, ಗೋವಿಂದರಾಜು, ಬಿ. ರಾಘವೇಂದ್ರ, ದಾದಾಪೀರ್, ಕೊಳಗಲ್ ಅಂಜಿನಪ್ಪ ಸೇರಿದಂತೆ ಪಕ್ಷದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.