ಸಾರಾಂಶ
ಪಟ್ಟಣ ಪುರಸಭೆಯ ಮುಖ್ಯಾಧಿಕಾರಿಯ ಕಛೆರಿಗೆ ವ್ಯಕ್ತಿಯೊಬ್ಬರು ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಶುಕ್ರವಾರ ನಡೆದಿದೆ. ಶುಕ್ರವಾರ ಸಂಜೆ 4 ಗಂಟೆ ಸಮಯದಲ್ಲಿ ವ್ಯಕ್ತಿಯೊಬ್ಬ ಪುರಸಭೆಯ ಮುಖ್ಯಾಧಿಕಾರಿ ಕಚೇರಿಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಕೊಠಡಿಗೆ ನುಗ್ಗಿ ಬೆಂಕಿ ಇಟ್ಟು ಪರಾರಿಯಾಗಿದ್ದಾರೆ.
ಸಕಲೇಶಪುರ : ಪಟ್ಟಣ ಪುರಸಭೆಯ ಮುಖ್ಯಾಧಿಕಾರಿಯ ಕಛೆರಿಗೆ ವ್ಯಕ್ತಿಯೊಬ್ಬರು ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಶುಕ್ರವಾರ ನಡೆದಿದೆ.
ಶುಕ್ರವಾರ ಸಂಜೆ 4 ಗಂಟೆ ಸಮಯದಲ್ಲಿ ವ್ಯಕ್ತಿಯೊಬ್ಬ ಪುರಸಭೆಯ ಮುಖ್ಯಾಧಿಕಾರಿ ಕಚೇರಿಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಕೊಠಡಿಗೆ ನುಗ್ಗಿ ಬೆಂಕಿ ಇಟ್ಟು ಪರಾರಿಯಾಗಿದ್ದಾರೆ. ಕೊಠಡಿಯಿಂದ ಹೊಗೆ ಬರುತ್ತಿದ್ದನ್ನು ಕಂಡ ಸಿಬ್ಬಂದಿ ತಕ್ಷಣ ನೀರು ಹಾಕಿ ಬೆಂಕಿಯನ್ನು ನಂದಿಸಿ ಯಾವುದೇ ದೊಡ್ಡ ಪ್ರಮಾದ ಆಗದಂತೆ ತಡೆದಿದ್ದಾರೆ.
ದಾಖಲೆ ಪತ್ರಗಳು ಸುಟ್ಟು ಕರಕಲಾಗಿವೆ
ಕೆಲ ದಾಖಲೆ ಪತ್ರಗಳು ಸುಟ್ಟು ಕರಕಲಾಗಿವೆ. ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ಮಧ್ಯಾಹ್ನದಿಂದ ಕಚೇರಿರಿಯ ಆವರಣದಲ್ಲಿ ಮುಖ್ಯಾಧಿಖಾರಿಗಳಿಗೆ ಬೈಯುತ್ತಾ ತಿರುಗಾಡುತಿದ್ದ. ಆತನೇ ಈ ಕೃತ್ಯ ಮಾಡಿರಬಹುದೆಂದು ಶಂಕಿಸಲಾಗಿದೆ. ಪುರಸಭೆ ಮುಖ್ಯಾಧಿಕಾರಿ ಹಾಗೂ ಪುರಸಭೆ ಸದಸ್ಯರ ತಂಡ ತರಬೇತಿ ಪ್ರವಾಸಕ್ಕೆ ಗೋವಾಕ್ಕೆ ಹೋಗಿದ್ದು ಯಾರೂ ಇಲ್ಲದ ಈ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ವ್ಯಕ್ತಿಯನ್ನು ಪತ್ತೆಹಚ್ಚುವಲ್ಲಿ ತನಿಖೆ
ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿದ್ದು ವ್ಯಕ್ತಿಯನ್ನು ಪತ್ತೆಹಚ್ಚುವಲ್ಲಿ ತನಿಖೆ ಕೈಗೊಂಡಿದ್ದಾರೆ. ಘಟನೆಯಲ್ಲಿ ಕೆಲವೊಂದು ಕಡತಗಳು ಅಲ್ಪ ಪ್ರಮಾಣದಲ್ಲಿ ಸುಟ್ಟಿವೆ.

;Resize=(128,128))
;Resize=(128,128))
;Resize=(128,128))
;Resize=(128,128))